ಆದೇಶ ಹಿಂಪಡೆಯಲು ಆಗ್ರಹಿಸಿ ಪ್ರತಿಭಟನೆ

ಧಾರವಾಡ ಸೆ ೧೫ :ಧಾರವಾಡದ ಕರ್ನಾಟಕ ನೀರಾವರಿ ನಿಗಮ ನಿಯಮಿತದ ಕೇಂದ್ರ ಕಛೇರಿಯನ್ನು ಬೆಳಗಾವಿಯ ಸುವರ್ಣ ಸೌಧಕ್ಕೆ ವರ್ಗಾಹಿಸಿದ್ದು ಉ.ಕ ಜನತೆಗೆ ಬಾರೀ ಅನ್ಯಾಯವಾಗಿದೆ ಕೂಡಲೇ ಸ್ಥಳಾಂತರ ಆದೇಶವನ್ನು ಹಿಂಪಡೆಯಬೇಕು ಎಂದು ಆಗ್ರಹಿಸಿ ರೈತ ಸೇನಾ ಕರ್ನಾಟಕ ಹೋರಾಟ ಸಮಿತಿ ಪ್ರತಿಭಟನೆ ನಡೆಸಿತು.
ಕರ್ನಾಟಕ ಉಚ್ಛ ನ್ಯಾಯಾಲಯದಲ್ಲಿ ಸ್ಥಳಾಂತರ ಮಾಡದಂತೆ ರಿಟ್ ಅರ್ಜಿ ಸಲ್ಲಿಸಿದ್ದು, ಅದರ ವಿಚಾರಣೆ ಮುಗಿಯುವರೆಗೂ ಪ್ರಕ್ರಿಯೆಯನ್ನು ತಡೆ ಹಿಡಿಯಬೇಕೆಂದು ರೈತ ಸೇನಾ ಕರ್ನಾಟಕ ಹೋರಾಟ ಸಮಿತಿಯ ಅಧ್ಯಕ್ಷರಾದ ವಿರೇಶ ಸೊಬರದಮಠ ಆಗ್ರಹಿಸಿದರು.
ಪ್ರತಿಭಟನೆಯಲ್ಲಿ ಜೈ ಕರ್ನಾಟಕದ ಸಂಘಟನಾ ರಾಜ್ಯ ಕಾರ್ಯದರ್ಶಿ ಮುತ್ತು ಬೆಳ್ಳಕ್ಕಿ, ಕುಮಾರ ಆಕಾರೆ, ಅಣ್ಣಪ್ಪ ದೊಡ್ಡಮನಿ, ಮಂಜುನಾಥ ಬಂಡಿವಡ್ಡರ, ಬಸವರಾಜ ಮಣ್ಣೂರಮಠ ಸೇರಿದಂತೆ ಇನ್ನಿತರರು ಉಪಸ್ಥಿತರಿದ್ದರು.