ಆದ್ಯ ವಚನಕಾರ ದೇವರ ದಾಸಿಮಯ್ಯ ಜಯಂತಿ ಆಚರಣೆ

ಸಂಜೆವಾಣಿ ವಾರ್ತೆ

ದಾವಣಗೆರೆ; ಏ.14:  ಜಿಲ್ಲಾಡಳಿತ, ಜಿಲ್ಲಾ ಪಂಚಾಯತ್, ಕನ್ನಡ ಮತ್ತು ಸಂಸ್ಕೃತಿ ಇಲಾಖೆ ವತಿಯಿಂದ ಶನಿವಾರ ಜಿಲ್ಲಾಡಳಿತದ ಕಚೇರಿಯಲ್ಲಿ ಆದ್ಯ ವಚನಕಾರ ದೇವರ ದಾಸಿಮಯ್ಯ ಜಯಂತಿಯನ್ನು ನೀತಿ ಸಂಹಿತೆ ಹಿನ್ನಲೆಯಲ್ಲಿ ಸರಳವಾಗಿ ಆಚರಿಸಲಾಯಿತು. ಅಪರ ಜಿಲ್ಲಾಧಿಕಾರಿ ಸೈಯ್ಯದಾ ಆಫ್ರೀನ್ ಭಾನು ಎಸ್. ಬಳ್ಳಾರಿ ಅವರು ದೇವರ ದಾಸಿಮಯ್ಯ ಭಾವಚಿತ್ರಕ್ಕೆ ಪುಷ್ಪ ನಮನ ಸಲ್ಲಿಸುವ ಮೂಲಕ ಗೌರವ ಸಮರ್ಪಿಸಿದರು.ಕಾರ್ಯಕ್ರಮದಲ್ಲಿ ಕನ್ನಡ ಮತ್ತು ಸಂಸ್ಕೃತಿ ಇಲಾಖೆ ಸಹಾಯಕ ನಿರ್ದೇಶಕಿ ಮಂಗಳನಾಯ್ಕ್ , ಜಿಲ್ಲಾ ನೇಕಾರ ಒಕ್ಕೂಟದ ಅಧ್ಯಕ್ಷರಾದ ಬಸವರಾಜು ಎಸ್.ಕೆ, ಜಿಲ್ಲಾ ನೇಕಾರ ಒಕ್ಕೂಟದ ಗೌರವ್ಯಾಧ್ಯಕ್ಷರಾದ ಗುಬ್ಬಿ ಬಸವರಾಜ್, ಜಿಲ್ಲಾ ನೇಕಾರ ಒಕ್ಕೂಟದ ರಾಜ್ಯ ಕಾರ್ಯದರ್ಶಿ ಧರ್ಮರಾಜು, ಜಿಲ್ಲಾ ನೇಕಾರ ಒಕ್ಕೂಟದ ಉಪಾಧ್ಯಕ್ಷ ರವೀಂದ್ರ ಕೆ,  ಜಿಲ್ಲಾ ನೇಕಾರ ವೇದಿಕೆ ಅಧ್ಯಕ್ಷರಾದ ಸತ್ಯನಾರಾಯಣ, ನಿಂಗಪ್ಪ ಐರಾಣಿ, ಮಂಜುನಾಥ ಟಿ, ಶ್ರೀಕಾಂತ್ ಶಿವಕುಮಾರ್ ಸುಂಕಾಪುರ, ಹಾಗೂ ಇನ್ನಿತರರು ಉಪಸ್ಥಿತರಿದ್ದರು.