ಸೊರಬ. ಎ.5: ತಾಲೂಕಿನ ಆನವಟ್ಟಿ ಪಟ್ಟಣ ಪಂಚಾಯಿತಿ ವ್ಯಾಪ್ತಿಯ ಹಲವು ವಾರ್ಡುಗಳಲ್ಲಿ ತಾಲೂಕು ಪಂಚಾಯಿತಿ ಕಾರ್ಯನಿರ್ವಾಹಣಾಧಿಕಾರಿ ನಾಗರಾಜ ಎನ್. ಅನ್ವೇಕರ್. ಹಾಗೂ ಪಟ್ಟಣ ಪಂಚಾಯಿತಿಯ ಮುಖ್ಯ ಅಧಿಕಾರಿ ಅಕ್ಷತಾ ಮತ್ತು ಬಿ ಎಲ್ ಓ ಗಳು ಸೇರಿ ಜನರಲ್ಲಿ ಮತದಾನದ ಬಗ್ಗೆ ಜಾಗೃತಿ ಮೂಡಿಸಿದರು. 2018ರ ವಿಧಾನಸಭಾ ಚುನಾವಣೆಯ ಅವಧಿಯಲ್ಲಿ ಈ ಭಾಗದಲ್ಲಿ ಶೇಕಡ 70 ಕ್ಕಿಂತ ಕಡಿಮೆ ಮತದಾನವಾದ್ದರಿಂದ 2023ರ ಸಾರ್ವತ್ರಿಕ ಚುನಾವಣೆಯಲ್ಲಿ ಮತದಾನದ ಪ್ರಮಾಣವನ್ನು ಹೆಚ್ಚಿಸುವ ದೃಷ್ಟಿಯಿಂದ ಈ ಭಾಗದ ಮತದಾರರಲ್ಲಿ ಮತದಾನದ ಅರಿವು ಮೂಡಿಸುವ ಕಾರ್ಯವನ್ನು ಮಾಡಲಾಯಿತು.