ಆನೇಕಾಲು ರೋಗ ಮುಕ್ತ ಜಿಲ್ಲೆಯನ್ನಾಗಿ ಮಾಡಲು ಸಾರ್ವಜನಿಕರು ಸಹಕಾರ ನೀಡಬೇಕು: ಜಿಲ್ಲಾಧಿಕಾರಿ ಸ್ನೇಹಲ್ ಆರ್

ಯಾದಗಿರಿ; ನ, 07;ಆನೆಕಾಲು ರೋಗ ಬಾರದಂತೆ ತಡೆಗಟ್ಟಲು ಆರೋಗ್ಯ ಇಲಾಖೆಯಿಂದ ಉಚಿತವಾಗಿ ನೀಡುವ ಐವರ್ ಮೆಕ್ಟಿನ್, ಡಿಇಸಿ ಮತ್ತು ಆಲ್ಬೆಂಡಜೋಲ್ ತ್ರಿವಳಿ ಗುಳಿಗೆಗಳನ್ನು ಸೇವಿಸಿ, ಆನೇಕಾಲು ರೋಗ ಮುಕ್ತ ಜಿಲ್ಲೆಯನ್ನಾಗಿ ಮಾಡಲು ಸಾರ್ವಜನಿಕರು ಸಹಕಾರ ನೀಡಬೇಕು ಎಂದು ಜಿಲ್ಲಾಧಿಕಾರಿ ಸ್ನೇಹಲ್ ಆರ್. ಅವರು ಕೋರಿದರು.

ಜಿಲ್ಲಾಧಿಕಾರಿ ಕಚೇರಿಯ ಸಭಾಂಗಣದಲ್ಲಿ ಜಿಲ್ಲಾಡಳಿತ ಜಿಲ್ಲಾ ಪಂಚಾಯತ, ಜಿಲ್ಲಾ ಆರೋಗ್ಯ ಮತ್ತು ಕುಟುಂಬ ಕಲ್ಯಾಣ ಇಲಾಖೆ ವತಿಯಿಂದ ನಡೆದ ಆನೆಕಾಲು ರೋಗ ನಿವಾರಣೆಗಾಗಿ ಜಿಲ್ಲೆಯಾದ್ಯಂತ ನವೆಂಬರ್ 14 ರಿಂದ ನವೆಂಬರ್ 27 ರ ವರೆಗೆ ನಡೆಯುವ ಸಾರ್ವಜನಿಕವಾಗಿ ಔಷಧಿ ನುಂಗಿಸುವ ಕಾರ್ಯಕ್ರಮದ ಪೂರ್ವಭಾವಿ ಸಭೆಯಲ್ಲಿ ಅವರು ಮಾತನಾಡಿದರು.

ಆನೆಕಾಲು ರೋಗವು ಇಂದು ಜನತೆಗೆ ಬೆಂಬಿಡದೆ ಕಾಡುತ್ತಿದೆ. ಈ ನಿಟ್ಟಿನಲ್ಲಿ ಸರಕಾರ ಈ ರೋಗದಿಂದ ಮುಕ್ತಿಗೊಳಿಸಲು ನಿರಂತರ ಪ್ರಯತ್ನ ನಡೆಸಿದ್ದು, ಸಾರ್ವಜನಿಕರು ಜಾಗೃತರಾಗಿ ಆರೋಗ್ಯ ಇಲಾಖೆ ನೀಡುವ ಮಾತ್ರೆಗಳನ್ನು ಸೇವಿಸುವುದರ ಮೂಲಕ ರೋಗ ಬರದಂತೆ ಮುಂಜಾಗ್ರತೆ ವಹಿಸಬೇಕು ಎಂದು ಸಲಹೆ ನೀಡಿದರು.

ಸರಕಾರದ ಕಾರ್ಯಕ್ರಮಗಳ ಅನುμÁ್ಠನದ ಹಿಂದೆ ಸಾರ್ವಜನಿಕರ ಸಹಭಾಗಿತ್ವ ಬಹಳ ಮುಖ್ಯ. ಆರೋಗ್ಯಕ್ಕೆ ಸಹಕಾರ ನೀಡಲು ಪೆÇೀಷಕರು, ಆಶಾ ಕಾರ್ಯಕರ್ತೆಯರು, ಅಂಗನವಾಡಿ ಕಾರ್ಯಕರ್ತೆಯರು, ಸಂಘ-ಸಂಸ್ಥೆಗಳು, ಸ್ವಯಂ ಸೇವಕರು ಆರೋಗ್ಯ ಸಿಬ್ಬಂದಿ ಜನರಿಗೆ ತಿಳಿ ಹೇಳಿ ಗುಳಿಗೆ ನುಂಗಿಸಬೇಕು ಎಂದರು.

ಸೊಳ್ಳೆ ಕಡಿತದಿಂದ ವ್ಯಕ್ತಿಯೊಬ್ಬರಿಗೆ ರೋಗ ತಗುಲಿದರೆ ರಾತ್ರಿ ವೇಳೆಯಲ್ಲಿ ಮಾತ್ರ ಈ ರೋಗ ಕಂಡು ಹಿಡಿಯಬಹುದು. ರಾತ್ರಿ 8 ರಿಂದ ಮಧ್ಯರಾತ್ರಿ 12 ಗಂಟೆವರೆಗೆ ವ್ಯಕ್ತಿಯ ರಕ್ತಲೇಪನ ಸಂಗ್ರಹಿಸಿ, ಸೂಕ್ಷ್ಮದರ್ಶಕದ ಸಹಾಯದಿಂದ ಪರೀಕ್ಷೆ ಮಾಡಿದಾಗ ಮಾತ್ರ ಈ ರೋಗದ ಸೋಂಕು ತಿಳಿಯುತ್ತದೆ. ಈ ರೋಗದ ಚಿಹ್ನೆಗಳು ಕಾಣಸಿಕೊಂಡ ನಂತರ ರೋಗದ ಚಿಕಿತ್ಸೆ ಕಷ್ಟ ಸಾಧ್ಯ ಎಂದು ಜಿಲ್ಲಾಧಿಕಾರಿ ನುಡಿದರು.

ಜಿಲ್ಲೆಯಲ್ಲಿ 13, 05,777 ಜನರಿಗೆ ಗುಳಿಗೆ ನುಂಗಿಸುವ ಗುರಿ ಹೊಂದಲಾಗಿದೆ. ಇದಕ್ಕಾಗಿ ಆರೋಗ್ಯ ಇಲಾಖೆ, ಅಂಗನವಾಡಿ, ಆಶಾ ಕಾರ್ಯಕರ್ತೆಯರು ಸೇರಿ ಒಟ್ಟು 2258 ತಂಡಗಳನ್ನು ರಚಿಸಲಾಗಿದೆ. ಒಟ್ಟು 1387 ಅಂಗನವಾಡಿಗಳಲ್ಲಿ 93675 ಮಕ್ಕಳು ಮತ್ತು 1549 ಶಾಲಾ ಕಾಲೇಜುಗಳಲ್ಲಿ 239079 ಮಕ್ಕಳಿಗೆ ಗುಳಿಗೆ ನುಂಗಿಸುವ ಗುರಿ ಇದೆ. ಸಿಬ್ಬಂದಿಗಳು ಮನೆ ಮನೆಗೆ ತೆರಳಿ ಗುಳಿಗೆಗಳನ್ನು ನೀಡಲಿದ್ದಾರೆ ಎಂದು ಜಿಲ್ಲಾಧಿಕಾರಿ ವಿವರಿಸಿದರು.

ಶಿಕ್ಷಣ ಇಲಾಖೆ, ಸಮಾಜ ಕಲ್ಯಾಣ , ಹಿಂದುಳಿದ ವರ್ಗ ಮತ್ತು ಅಲ್ಪಸಂಖ್ಯಾತರ ಇಲಾಖೆ, ಮಹಿಳಾ ಮತ್ತು ಮಕ್ಕಳ ಕಲ್ಯಾಣ ಇಲಾಖೆ, ಸಾರಿಗೆ ಇಲಾಖೆ, ರೈಲ್ವೆ ಇಲಾಖೆ ಮತ್ತು ನಗರ ಸ್ಥಳೀಯ ಸಂಸ್ಥೆಯ ಅಧಿಕಾರಿಗಳು ತಮ್ಮ ವ್ಯಾಪ್ತಿಯಲ್ಲಿ

ಈ ಕಾರ್ಯಕ್ರಮದ ಗುಣಾತ್ಮಕವಾಗಿ ಪ್ರತಿಶತ ಸಾಧನೆಗೆ ಶ್ರಮಿಸಬೇಕು ಎಂದು ಜಿಲ್ಲಾಧಿಕಾರಿ ಸೂಚಿಸಿದರು.

ಪೆÇೀಸ್ಟರ್ ಬಿಡುಗಡೆ: ಸಾರ್ವಜನಿಕರಿಗೆ ತಿಳಿವಳಿಕೆ ಮೂಡಿಸಲು ಹಾಕಲಾಗಿರುವ ಪೆÇೀಸ್ಟರ್, ಕರಪತ್ರ, ಬ್ಯಾನರ್ ಇತ್ಯಾದಿಗಳನ್ನು ಜಿಲ್ಲಾಧಿಕಾರಿ ಅವರು ಬಿಡುಗಡೆ ಮಾಡಿದರು. ಈ ಯೋಜನೆಯಂತೆ ಯಾವುದೇ ಅಡೆತಡೆಯಾಗದಂತೆ ಈ ಕಾರ್ಯಕ್ರಮವನ್ನು ಜಿಲ್ಲೆಯಲ್ಲಿ ಅಚ್ಚುಕಟ್ಟಾಗಿ ನಡೆಸಬೇಕು ಎಂದು ಸೂಚಿಸಿದರು.

ಈ ಸಂದರ್ಭದಲ್ಲಿ ಜಿಲ್ಲಾ ಆರೋಗ್ಯ ಮತ್ತು ಕುಟುಂಬ ಕಲ್ಯಾಣಾಧಿಕಾರಿ ಡಾ.ಗುರುರಾಜ ಹಿರೇಗೌಡರ್, ಜಿಲ್ಲಾ ಮಲೇರಿಯಾ ಅಧಿಕಾರಿ ಡಾ.ಲಕ್ಷ್ಮೀಕಾಂತ ಒಂಟೀಪೀರ, ಆರ್.ಸಿ.ಹೆಚ್.ಓ ಡಾ.ಮಲ್ಲಪ್ಪ, ಜಿಲ್ಲಾ ಸರ್ವೆಕ್ಷಣ ಅಧುಕಾರಿ ಡಾ.ಸಾಜಿಧ್, ನಗರಸಭೆ ಆಯುಕ್ತ ಶರಣಪ್ಪ, ಡಾ.ಸಂಜೀವಕುಮಾರ ರಾಯಚೂರಕರ್, ಯಾದಗಿರಿ ವೈದ್ಯಾಧಿಕಾರಿ ಡಾ.ಹಣಮಂತರೆಡ್ಡಿ, ವಿಭಾಗೀಯ ಸಾರಿಗೆ ಅಧಿಕಾರಿ ರಮೇಶ ಪಾಟೀಲ್ ಇನ್ನಿತರರು ಉಪಸ್ಥಿತರಿದ್ದರು.