ಆನ್‌ಲೈನ್ ತರಗತಿ ಶುಲ್ಕ ಕಡಿತಕ್ಕೆ ಸುಪ್ರೀಂ ಸೂಚನೆ

ನವದೆಹಲಿ,ಮೇ೪- ದೇಶದಲ್ಲಿ ಕೊರೊನಾ ಸೋಂಕು ಕಾಣಿಸಿಕೊಂಡಿರುವ ಹಿನ್ನೆಲೆಯಲ್ಲಿ ಬಹುತೇಕ ಶಾಲೆಗಳು ಆನ್ ಲೈನ್ ಮೂಲಕ ತರಗತಿ ನಡೆಸುತ್ತಿದ್ದು ಅದರ ಶುಲ್ಕ ಕಡಿಮೆ ಮಾಡುವಂತೆ ಶಾಲೆಗಳಿಗೆ ಸುಪ್ರೀಂ ಕೋರ್ಟ್ ಸೂಚನೆ ನೀಡಿದೆ.
ಶಿಕ್ಷಣ ಸಂಸ್ಥೆಗಳು ಸಿಬ್ಬಂದಿಗೆ ನೀಡಿರುವ ಹಲವು ಸೌಲಭ್ಯ ಕಡಿತ ಮಾಡಿರುವ ಹಿನ್ನೆಲೆಯಲ್ಲಿ ಶಿಕ್ಷಣ ಸಂಸ್ಥೆಗಳು ಆನ್ ಲೈನ್ ತರಗತಿಗೆ ವಿಧಿಸುವ ಶುಲ್ಕವನ್ನು ಕಡಿಮೆ ಮಾಡಿ ಎಂದು ಸೂಚನೆ ನೀಡಿದೆ.
ಸುಪ್ರೀಂ ಕೋರ್ಟ್ ನ ನ್ಯಾಯಮೂರ್ತಿ ಗಳಾದ ಎ.ಎಂ. ಖಾನ್ ಲ್ಕರ್ ಮತ್ತು ದಿನೇಶ್ ಮಹೇಶ್ವರಿ ಅವರಿದ್ದ ನೇತೃತ್ವದ ಕೊರೋನೋ ಸೋಂಕಿನ ಸಂಕಷ್ಟದ ಸಮಯದಲ್ಲಿ ದೇಶದ ಪರಿಸ್ಥಿತಿಯನ್ನು ಅರ್ಥಮಾಡಿಕೊಂಡು ಶಿಕ್ಷಣ ಸಂಸ್ಥೆಗಳು ಆನ್ ಲೈನ್ ತರಗತಿಗೆ ವಿಧಿಸುವ ಶುಲ್ಕವನ್ನು ಕಡಿತ ಮಾಡಬೇಕು ಎಂದು ಹೇಳಿದೆ.
ಪೋಷಕರು ಸಮಸ್ಯೆ ಎದುರಿಸುತ್ತಿದ್ದಾರೆ ಹೀಗಾಗಿ ಅವರಿಗೆ ಮತ್ತಷ್ಟು ಸಮಸ್ಯೆಯನ್ನು ನೀಡುವುದು ಬೇಡ .ಹಾಗೆ ಶಿಕ್ಷಣ ಸಂಸ್ಥೆ ನಡೆಸುವರು ಕೂಡ ಮಾನವೀಯ ನೆಲೆಗಟ್ಟಿನಲ್ಲಿ ಶುಲ್ಕವನ್ನು ಕಡಿಮೆ ಮಾಡಿ ಎಂದು ಹೇಳಿದೆ.
ದೇಶದಲ್ಲಿ ಕೊರೊನಾ ಸೋಂಕು ಹೆಚ್ಚಳವಾಗುತ್ತಿರುವ ಹಿನ್ನೆಲೆಯಲ್ಲಿ ಬಹುತೇಕ ಶಾಲೆಗಳು ತರಗತಿಗಳನ್ನು ಮುಚ್ಚಿ ಅದರ ಬದಲು ಆನ್ ಲೈನ್ ಮೂಲಕವೇ ತರಗತಿಗಳನ್ನು ನಡೆಸಲಾಗುತ್ತಿದೆ. ಮಾಮೂಲಿ ಶುಲ್ಕವನ್ನೇ ಆನ್ಲೈನ್ ತರಗತಿಗೆ ಪಡೆಯಲಾಗುತ್ತದೆ ಎನ್ನುವ ದೂರುಗಳು ಬಂದಿವೆ ಹೀಗಾಗಿ ಆನ್ ಲೈನ್ ಶುಲ್ಕವನ್ನು ಕಡಿಮೆ ಮಾಡಿ ಎಂದು ಹೇಳಿದೆ.
ದೇಶದಲ್ಲಿ ಕೊರೊನಾ ಸೋಂಕು ಕಾಣಿಸಿಕೊಂಡ ನಂತರ ಹಣಕಾಸಿನ ಸಮಸ್ಯೆ ಸೇರಿದಂತೆ ಇನ್ನಿತರ ಸಮಸ್ಯೆಗಳನ್ನು ನ್ಯಾಯಪೀಠ ಸೂಕ್ಷ್ಮವಾಗಿ ಗಮನಿಸಿದೆ. ಈ ಎಲ್ಲಾ ಬೆಳವಣಿಗೆಯ ಹಿನ್ನೆಲೆಯಲ್ಲಿ ವಿದ್ಯಾರ್ಥಿಗಳ ಹಿತ ಕಾಪಾಡಲು ಜೊತೆಗೆ ಶಿಕ್ಷಣ ಸಂಸ್ಥೆಗಳನ್ನು ಉಳಿಸಿಕೊಳ್ಳುವ ನಿಟ್ಟಿನಲ್ಲಿ ಹೆಜ್ಜೆ ಇಡಿ. ಹೀಗಾಗಿ ಆನ್ ಲೈನ್ ತರಗತಿಗಳಿಗೆ ವಿಧಿಸುವ ಶುಲ್ಕವನ್ನು ಕಡಿಮೆ ಮಾಡಿ ಎಂದು ನ್ಯಾಯಪೀಠ ತಿಳಿಸಿದೆ