
ಚಾಮರಾಜನಗರ: ಪೂರ್ಣ ಮೆಜಾರಿಟಿ ಇದೆ, ನಮಗೆ ಆಪರೇಷನ್ ಹಸ್ತದ ಅವಶ್ಯಕತೆಯಿಲ್ಲ ಎಂದು ಉಪ ಮುಖ್ಯಮಂತ್ರಿ ಡಿ.ಕೆ.ಶಿವಕುಮಾರ್ ಹೇಳಿದರು.
ಚಾಮರಾಜನಗರದಲ್ಲಿ ಅವರು ಮಾಧ್ಯಮವರೊಟ್ಟಿಗೆ ಮಾತನಾಡಿ, ಆಪರೇಷನ್ ಹಸ್ತ ಮಾಡುವ ಅವಶ್ಯಕತೆ ನಮಗಿಲ್ಲ, ಆದರೆ, ಪಕ್ಷ ಇಚ್ಚಿಸಿ ಬರುವವರನ್ನು ತಡೆಯಲಾಗಲ್ಲ, ನಮ್ಮ ಮೇಲೆ ವಿಶ್ವಾಸ ಇಟ್ಟವರಿಗೆ ನಾವು ಕೂಡ ವಿಶ್ವಾಸ ತೋರಿಸಬೇಕಾಗಲಿದೆ ಎಂದರು.
ಪ್ರಧಾನಿ ಭೇಟಿ ವೇಳೆ ಶಿಷ್ಟಾಚಾರ ಪಾಲಿಸಿಲ್ಲ ಎಂಬ ಬಿಜೆಪಿ ನಾಯಕ ಅಶೋಕ್ ಆರೋಪಕ್ಕೆ ಪ್ರತಿಕ್ರಿಯಿಸಿ,
ವಿರೋಧ ಪಕ್ಷದ ನಾಯಕನನ್ನ ಆಯ್ಕೆ ಮಾಡೋಕೆ ಅವರಿಗೆ ಆಗ್ತಿಲ್ಲ, ಪ್ರಧಾನಿ ಮೋದಿ ಬರುವ ವಿಚಾರವನ್ನು ಆರ್. ಅಶೋಕ್ ಗೆ ಹೇಳಿಲ್ಲ, ಪ್ರಧಾನ ಮಂತ್ರಿಗಳ ಕಚೇರಿಯಿಂದ ಗವರ್ನರ್ ಬರುವುದು ಬೇಡ, ಸಿಎಂ ಬರುವುದು ಬೇಡ, ಡಿಸಿಎಂ ಬರೊದು ಬೇಡ ಅಂದಿದ್ದಾರೆ, ನಮಗೆ ಸಮಯ ಪ್ರಜ್ಞೆ, ವ್ಯವಹಾರ ಪ್ರಜ್ಞೆ ನಮಗೆ ಇದೆ, ಪ್ರೊಟೊಕಾಲ್ ಗೊತ್ತಿದೆ ಆದರೆ, ಅವರದೇ ಪಕ್ಷದ ನಾಯಕರಿಗೆ ಮಾಹಿತಿ ಇಲ್ಲ ಎಂದು ಹರಿಹಾಯ್ದರು.
ಇನ್ನು, ಇದೇ ವೇಳೆ ಆಕ್ಸಿಜನ್ ದುರಂತದಲ್ಲಿ ಮಡಿದ ಸಂತ್ರಸ್ತ ಕುಟುಂಬಗಳಿಗೆ ನ್ಯಾಯ ಕೊಡಿಸುವ ವಿಚಾರವನ್ನು ಜಿಲ್ಲೆಯ ಜನಪ್ರನಿಧಿಗಳು, ಅಧಿಕಾರಿಗಳ ಜೊತೆ ಮಾತನಾಡಿದ್ದೇನೆ ಎಂದು ಹೇಳಿದರು.