ಆಮ್ಲಜನಕ ಉತ್ಪಾದನಾ ಘಟಕಕ್ಕೆ ಭೂಮಿ ಪೂಜೆ

ಹುಬ್ಬಳ್ಳಿ, ಮೇ 31: ಕಿಮ್ಸ್ ಆವರಣದಲ್ಲಿ ಎಲ್.ಆಯಂಡ್.ಟಿ ವತಿಯಿಂದ ನಿರ್ಮಿಸಲಾಗುತ್ತಿರುವ 1 ಟನ್ ಸಾಮರ್ಥ್ಯದ ಆಮ್ಲಜನಕ ಉತ್ಪಾದನೆ ಘಟಕದ ಭೂಮಿ ಪೂಜೆಯನ್ನು ಕೇಂದ್ರ ಸಂಸದೀಯ ವ್ಯವಹಾರಗಳು ಹಾಗೂ ಗಣಿ ಮತ್ತು ಕಲ್ಲಿದ್ದಲು ಸಚಿವ ಪ್ರಲ್ಹಾದ್ ಜೋಶಿ ಹಾಗೂ ರಾಜ್ಯ ಬೃಹತ್ ಮತ್ತು ಮಧ್ಯಮ ಕೈಗಾರಿಕೆ ಸಚಿವ ಜಗದೀಶ್ ಶೆಟ್ಟರ್ ನೆರವೇರಿಸಿದರು.

ಸುದ್ದಿಗಾರರೊಂದಿಗೆ ಮಾತನಾಡಿದ ಸಚಿವ ಜೋಶಿ, ಲಿಕ್ವಿಡ್ ಆಮ್ಲಜನಕವನ್ನು ಒಂದು ಕಡೆಯಿಂದ ಇನ್ನೊಂದು ಕಡೆ ಸರಬರಾಜು ಮಾಡಲು ಕಷ್ಟ ಸಾಧ್ಯ. ಆದ್ದರಿಂದ ಆಸ್ಪತ್ರೆಗಳಿಗೆ ಅಗತ್ಯವಿರುವ ಆಮ್ಲಜನಕವನ್ನು ಗಾಳಿಯಿಂದಲೇ ಉತ್ಪಾದಿಸು ಘಟಕಗಳನ್ನು ಕೇಂದ್ರ ಸರ್ಕಾರದಡಿ ಬರುವ ಉದ್ಯಮಗಳ ಸಾಮಾಜಿಕ ಹೊಣೆಗಾರಿಕಾ ನಿಧಿಯಡಿ ನಿರ್ಮಿಸಲಾಗುತ್ತಿದೆ ಎಂದರು.

ಪೆಟ್ರೋಲಿಯಂ ನೈಸರ್ಗಿಕ ಅನಿಲಗಳ ಮಂತ್ರಾಲಯದಡಿ ಬರುವ ಐ.ಓ.ಸಿ.ಎಲ್ (ಇಂಡಿಯನ್ ಆಯಿಲ್ ಕಾಪೆರ್Çೀರೇಷನ್ ಲಿಮಿಟೆಡ್), ಎಂ.ಆರ್.ಪಿ.ಎಲ್(ಮಂಗಳೂರು ರಿಫೈನರಿ ಮತ್ತು ಪೆಟ್ರೋಕೆಮಿಕಲ್ಸ್ ಲಿಮಿಟೆಡ್) ಸಂಸ್ಥೆಗಳು ರಾಜ್ಯದಲ್ಲಿ 32 ಆಮ್ಲಜನಕ ಉತ್ಪಾದನಾ ಘಟಕಗಳ ನಿರ್ಮಾಣಕ್ಕೆ ಮುಂದಾಗಿವೆ. ಗಣಿ ಮತ್ತು ಕಲ್ಲಿದ್ದಲು ಮಂತ್ರಾಲಯದಡಿ ಬರುವ ನೇವಲಿ ಇಗ್ನೈಟ್ ಕಾಪೆರ್Çೀರೇಷನ್ ರಾಜ್ಯದಲ್ಲಿ 9 ಆಮ್ಲಜನಕ ಉತ್ಪಾದನಾ ಘಟಕಗಳನ್ನು ನಿರ್ಮಿಸಲಿದೆ. ಇದರ ಟೆಂಡರ್ ಪ್ರಕ್ರಿಯೆ ಮುಗಿದಿದೆ ಎಂದು ಇದೇ ಸಂದರ್ಭದಲ್ಲಿ ತಿಳಿಸಿದರು.

ಧಾರವಾಡ ಜಿಲ್ಲೆಗೆ ಸಂಬಂಧಿಸಿದಂತೆ ಎನ್.ಎಂ.ಡಿ.ಸಿ(ನ್ಯಾಷನಲ್ ಮಿನರಲ್ ಡೆವಲಪ್ಮೆಂಟ್ ಕಾಪೆರ್Çೀರೇಷನ್) ವತಿಯಿಂದ ಹುಬ್ಬಳ್ಳಿ ಕಿಮ್ಸ್ ಹಾಗೂ ಧಾರವಾಡ ಜಿಲ್ಲಾ ಆಸ್ಪತ್ರೆಯಲ್ಲಿ 1 ಟನ್ ಸಾಮರ್ಥ್ಯದ ಆಮ್ಲಜನಕ ಉತ್ಪಾದನಾ ಘಟಕ, ಎಂ.ಆರ್.ಪಿ.ಎಲ್ ವತಿಯಿಂದ ಕುಂದಗೋಳ ಹಾಗೂ ಕಲಘಟಗಿ ತಾಲೂಕು ಆಸ್ಪತ್ರೆಯಲ್ಲಿ 0.5 ಟನ್ ಸಾಮರ್ಥ್ಯ ಘಟಕಗಳನ್ನು ನಿರ್ಮಿಸಲಾಗುವುದು. ನವಲಗುಂದ ತಾಲೂಕು ಆಸ್ಪತ್ರೆಯಲ್ಲಿ ದೇಶಪಾಂಡೆ ಫೌಂಡೇಶನ್ ವತಿಯಿಂದ ಆಮ್ಲಜನಕ ಉತ್ಪಾದನಾ ಘಟಕ ನಿರ್ಮಿಸುವಂತೆ ಮನವಿ ಮಾಡಲಾಗಿದೆ. ವಿಶ್ವದಾದ್ಯಂತ ಆಮ್ಲಜನಕ ಘಟಕ ನಿರ್ಮಿಸುವ ಕೆಲವು ಕಂಪನಿಗಳು ಮಾತ್ರ ಇವೆ. ಇವುಗಳಿಂದ ಆದ್ಯತೆ ಮೇರೆಗೆ ಘಟಕಗಳನ್ನು ನಿರ್ಮಿಸಿ ತರಲಾಗುತ್ತಿದೆ. ಇಂದು ಕಿಮ್ಸ್ ಆವರಣದಲ್ಲಿ ಭೂಮಿ ಪೂಜೆ ನೆರವೇರಿಸಿರುವ ಆಮ್ಲಜನಕ ಉತ್ಪಾದನಾ ಘಟಕ ‘ರಡಿ ಟು ಸೆಟಪ್’ ಮಾದರಿಯದ್ದಾಗಿದೆ. ಜೂನ್ 8 ರಂದು ಘಟಕದ ಭಾಗಗಳು ಆಗಮಿಸಲಿವೆ. ಜೂನ್ 15 ರ ಒಳಗಾಗಿ ಎನ್.ಎಂ.ಡಿ.ಸಿಯಿಂದಲೂ ಆಮ್ಲಜನಕ ಉತ್ಪಾದನಾ ಘಟಕಗಳು ಆಗಮಿಸಲಿವೆ ಇವುಗಳನ್ನು ಶೀಘ್ರವಾಗಿ ಅಳವಡಿಸಿ, ಆಮ್ಲಜಕ ಉತ್ಪಾದನೆಗೆ ಅನುವು ಮಾಡಿ ಕೊಡಲಾಗುವುದು ಎಂದರು.

ಈ ಸಂದರ್ಭದಲ್ಲಿ ಶಾಸಕ ಅರವಿಂದ ಬೆಲ್ಲದ್, ಜಿಲ್ಲಾಧಿಕಾರಿ ನಿತೇಶ್ ಪಾಟೀಲ್, ಕಿಮ್ಸ್ ನಿರ್ದೇಶಕ ರಾಮಲಿಂಗಪ್ಪ ಅಂಟರಠಾಣಿ, ಹುಬ್ಬಳ್ಳಿ ಧಾರವಾಡ ಮಹಾನಗರ ಪಾಲಿಕೆ ಆಯುಕ್ತ ಡಾ.ಸುರೇಶ್ ಇಟ್ನಾಳ್, ಕಿಮ್ಸ್ ಆಡಳಿತಾಧಿಕಾರಿ ರಾಜಶ್ರೀ ಜೈನಾಪುರ, ವೈದ್ಯಕೀಯ ಅಧೀಕ್ಷಕ ಡಾ.ಅರುಣ್ ಕುಮಾರ್ ಸೇರಿದಂತೆ ಮತ್ತಿತರರು ಉಪಸ್ಥಿತರಿದ್ದರು.