ಆಮ್ಲಜನಕ ಉತ್ಪಾದನೆ, ಶೀಘ್ರ ಪೂರೈಕೆಗೆ ಪ್ರಧಾನಿ ಸೂಚನೆ

ನವದೆಹಲಿ, ಏ.22- ದೇಶದಲ್ಲಿ ದಿನದಿಂದ ದಿನಕ್ಕೆ ಕೊರೋನಾ ಸೋಂಕು ಸಂಖ್ಯೆ ಹೆಚ್ಚಾಗುತ್ತಿರುವ ಹಿನ್ನೆಲೆಯಲ್ಲಿ ಆಕ್ಸಿಜನ್ ಉತ್ಪಾದನೆ, ಶೀಘ್ರ ವಿತರಣೆ ಮತ್ತು ಪರ್ಯಾಯ ಮಾರ್ಗಗಳಿಗೆ ಒತ್ತು ನೀಡುವಂತೆ ಪ್ರಧಾನಿ ನರೇಂದ್ರ ಮೋದಿ ಅಧಿಕಾರಿಗಳಿಗೆ ಎಂದು ಕಟ್ಟುನಿಟ್ಟಿನ ಸೂಚನೆ ನೀಡಿದ್ದಾರೆ.

ಆಮ್ಲಜನಕ ಉತ್ಪಾದನೆ, ಪೂರೈಕೆ, ಆಮ್ಲಜನಕ ಪೂರೈಕೆಗೆ ವಿನೂತನ ಕ್ರಮದ 3 ಸೂತ್ರಗಳಿಗೆ ಒತ್ತು ನೀಡಿ ಅವುಗಳನ್ನು ಶೀಘ್ರಗತಿಯಲ್ಲಿ ಪೂರೈಸಲು ಕ್ರಮ ಕೈಗೊಳ್ಳುವಂತೆ ಉನ್ನತ ಮಟ್ಟದ ಅಧಿಕಾರಿಗಳಿಗೆ ನಿರ್ದೇಶನ ನೀಡಿದ್ದಾರೆ.

ದೇಶದ 20ಕ್ಕೂ ಹೆಚ್ಚು ರಾಜ್ಯಗಳಲ್ಲಿ ಆಮ್ಲಜನಕ ಕೊರತೆ ಎದುರಾಗಿರುವ ಹಿನ್ನೆಲೆಯಲ್ಲಿ ಪ್ರಧಾನಮಂತ್ರಿಗಳ ಪ್ರಧಾನ ಕಾರ್ಯದರ್ಶಿ ಪಿ.ಕೆ ಮಿಶ್ರಾ, ಆರೋಗ್ಯ ಮತ್ತು ಕುಟುಂಬ ಕಲ್ಯಾಣ ಇಲಾಖೆಯ ಕಾರ್ಯದರ್ಶಿ ರಾಜೇಶ್ ಭೂಷಣ್, ಕೇಂದ್ರ ಗೃಹಕಾರ್ಯದರ್ಶಿ ಅಜಯ್ ಬಲ್ಲ, ನೀತಿ ಆಯೋಗದ ಸದಸ್ಯರು, ಸೇರಿದಂತೆ ವಿವಿಧ ಇಲಾಖೆಗಳ ಹಿರಿಯ ಅಧಿಕಾರಿಗಳಿಗೆ ಪ್ರಗತಿ ಪರಿಶೀಲನೆ ನಡೆಸಿ ಅವರು ಈ ಸೂಚನೆ ನೀಡಿದ್ದಾರೆ.

ಕೊರೋನೋ ಸೋಂಕಿತರಿಗೆ ಶೀಘ್ರಗತಿಯಲ್ಲಿ ಆಮ್ಲಜನಕ ಪೂರೈಕೆ ಮಾಡಲು ಅಗತ್ಯ ಕ್ರಮ ಕೈಗೊಳ್ಳಬೇಕು ಯಾವ ರಾಜ್ಯಗಳಲ್ಲಿ ಕೊರತೆ ಇದೆ ಅಂತ ರಾಜ್ಯಗಳಿಗೆ ಆದ್ಯತೆ ಮೇಲೆ ಪೂರೈಕೆ ಮಾಡುವಂತೆ ಸೂಚಿಸಿದ್ದಾರೆ.

ಆಮ್ಲಜನಕ ಪೂರೈಕೆಯಲ್ಲಿ ಯಾವುದೇ ವ್ಯತ್ಯಯ ಆಗದಂತೆ ರಾಜ್ಯಗಳ ಸ್ಥಳೀಯ ಆಡಳಿತಗಳ ಹೊಣೆಗಾರರನ್ನಾಗಿ ಮಾಡಿ ಜೊತೆಗೆ ಆಮ್ಲಜನಕ ಪೋಲಾಗದಂತೆ ಎಚ್ಚರಿಕೆ ವಹಿಸುವಂತೆ ಅಧಿಕಾರಿಗಳಿಗೆ ಸಲಹೆ ನೀಡಿದ್ದಾರೆ.

ಎಲ್ಲ ರಾಜ್ಯಗಳಿಗೆ ಅಗತ್ಯವಿರುವಷ್ಟು ಆಮ್ಲಜನಕವನ್ನು ಪೂರೈಕೆ ಮಾಡಲು ಎಲ್ಲ ರೀತಿಯ ಕ್ರಮಗಳನ್ನು ಕೇಂದ್ರ ಸರ್ಕಾರ ಕೈಗೊಳ್ಳಲಾಗುತ್ತಿದೆ ಎಂದು ಕೂಡ ಅವರು ಇದೇವೇಳೆ ರಾಜ್ಯಗಳಿಗೆ ಭರವಸೆ ನೀಡಿದ್ದಾರೆ‌

ಈ ವೇಳೆ ಪ್ರಧಾನಿಗೆ ಮಾಹಿತಿಯನ್ನು ಪದಾಧಿಕಾರಿಗಳು ದೇಶದ 20 ರಾಜ್ಯಗಳಲ್ಲಿ ಆಮ್ಲಜನಕ ಕೊರತೆ ಎದುರಾಗಿದೆ. ಈ ರಾಜ್ಯಗಳಿಂದ ಪ್ರತಿದಿನ 6785 ಮೆಟ್ರಿಕ್ ಟನ್ ಆಮ್ಲಜನಕಕ್ಕಾಗಿ ಬೇಡಿಕೆ ಬಂದಿದೆ. 6822 ಮೆಟ್ರಿಕ್ ಟನ್ ಆಮ್ಲಜನಕ ರಾಜ್ಯಗಳಿಗೆ ಪೂರೈಕೆ ಮಾಡಲಾಗಿದೆ ಎನ್ನುವ ವಿಷಯವನ್ನು ಪ್ರಧಾನಿ ಅವರ ಗಮನಕ್ಕೆ ತಂದಿದ್ದಾರೆ.