ಆಮ್ಲಜನಕ ಕೊರತೆ ಹರಿಯಾಣದಲ್ಲಿ ೧೩ ಸಾವು


ಹಿಸ್ಸಾರ್, ಹರಿಯಾಣ,ಏ.೨೬- ದೇಶದ ವಿವಿಧ ರಾಜ್ಯಗಳಲ್ಲಿ ಆಮ್ಲಜನಕ ಕೊರತೆಯಿಂದ ಕೋರೋನಾ ಸೋಂಕಿತರು ಸಾವನ್ನಪ್ಪುತ್ತಿರುವ ನಡುವೆಯೇ ಹರಿಯಾಣದಲ್ಲಿ ಕಳೆದ ೨೪ ಗಂಟೆಯಲ್ಲಿ ೩ ಪ್ರಕರಣಗಳಲ್ಲಿ ೧೩ ಮಂದಿ ಸಾವನ್ನಪ್ಪಿದ್ದಾರೆ.
ಹಿಸ್ಸಾರ್ ನ ಜಿಲ್ಲಾಸ್ಪತ್ರೆಯಲ್ಲಿ ಆಮ್ಲಜನಕ ಸಿಗದೇ ೫ ಮಂದಿ ಕೋರೊನಾ ಸೋಂಕಿತರು ಪ್ರಾಣ ಕಳೆದುಕೊಂಡಿದ್ದಾರೆ .ಕಳೆದ ೨೪ ಗಂಟೆಗಳಲ್ಲಿ ಹರಿಯಾಣದಲ್ಲಿ ನಡೆದ ಮೂರನೇ ಪ್ರಕರಣ ಇದಾಗಿದೆ.
ನೆನ್ನೆಯಷ್ಟೇ ಗುರು ಗ್ರಾಮದ ಖಾಸಗಿ ಆಸ್ಪತ್ರೆಯಲ್ಲಿ ಆಮ್ಲಜನಕ ಸಿಗದೇ ನಾಲ್ಕು ಮಂದಿ ಹಾಗೂ ರವೇರಿಯ ಆಸ್ಪತ್ರೆಯಲ್ಲಿ ಆಮ್ಲಜನಕ ಸಿಗದೇ ನಾಲ್ಕು ಮಂದಿ ಮೃತಪಟ್ಟಿದ್ದರು ಇದೀಗ ಮತ್ತೊಂದು ಇಂತಹ ದುರಂತ ನಡೆದಿದೆ.
ಕಳೆದ ೨೪ ಗಂಟೆಗಳಲ್ಲಿ ಆಮ್ಲಜನಕ ಸಿಗದೇ ಹರಿಯಾಣದಲ್ಲಿ ೧೩ ಮಂದಿ ಮೃತಪಟ್ಟಿದ್ದಾರೆ. ಹರಿಯಾಣದಲ್ಲಿ ದಿನದಿಂದ ದಿನಕ್ಕೆ ಕೋರೊನಾ ಸೋಂಕು ಸಂಖ್ಯೆ ಗಣನೀಯವಾಗಿ ಹೆಚ್ಚಳವಾಗುತ್ತಿರುವುದು ಆಮ್ಲಜನಕ ಕೊರತೆ ಎದುರಿಸಿ ಇಂತಹ ದುರಂತಕ್ಕೆ ಕಾರಣವಾಗುತ್ತದೆ
ತನಿಖೆಗೆ ಆದೇಶ:
ಕಳೆದ ೨೪ ಗಂಟೆಗಳಲ್ಲಿ ಆಮ್ಲಜನಕ ಸಿಗದೇ ೧೩ ರೋಗಿಗಳು ಮೃತಪಟ್ಟ ಪ್ರಕರಣಕ್ಕೆ ಸಂಬಂಧಿಸಿದಂತೆ ಜಿಲ್ಲಾ ಮಟ್ಟದ ತನಿಖೆಗೆ ಅಲ್ಲಿನ ಸರ್ಕಾರ ಆದೇಶ ಹೊರಡಿಸಿದೆ.
ರಾಜ್ಯದ ವಿವಿಧ ಆಸ್ಪತ್ರೆಗಳಿಗೆ ಸಮರ್ಪಕವಾಗಿ ಆಮ್ಲಜನಕ ಪೂರೈಕೆ ಮಾಡುವಂತೆ ಯು ಸರ್ಕಾರ ಅಧಿಕಾರಿಗಳಿಗೆ ಸೂಚನೆ ನೀಡಿದೆ.
ದೇಶದಲ್ಲಿ ದಿನದಿಂದ ದಿನಕ್ಕೆ ಕೊರೋನಾ ಸೋಂಕು ಸಂಖ್ಯೆ ಗಣನೀಯವಾಗಿ ಏರಿಕೆಯಾಗುತ್ತಿರುವ ಹಿನ್ನೆಲೆಯಲ್ಲಿ ಆಮ್ಲಜನಕ, ಹಾಸಿಗೆ ,ಔಷಧ ಸೇರಿದಂತೆ ವಿವಿಧ ಸಮಸ್ಯೆ ಎದುರಾಗುತ್ತದೆ.
ಹರಿಯಾಣದಲ್ಲಿ ಕೊರೊನಾ ಸಂಖ್ಯೆ ಗಣನೀಯವಾಗಿ ಹೆಚ್ಚಳವಾಗುತ್ತದೆ ಕಳೆದ ೨೪ ಗಂಟೆಗಳಲ್ಲಿ ೧೦ ಸಾವಿರಕ್ಕೂ ಅಧಿಕ ಮಂದಿಗೆ ಸೋಂಕು ಕಾಣಿಸಿಕೊಂಡಿದೆ ಇದುವರೆಗೂ ೪.೨೪ ಲಕ್ಷಕ್ಕೂ ಅಧಿಕ ಮಂದಿಗೆ ಸೋಂಕು ಕಾಣಿಸಿಕೊಂಡಿದ್ದು ಅಲ್ಲಿನ ಸರ್ಕಾರವನ್ನು ಮತ್ತಷ್ಟು ಸಮಸ್ಯೆಗೆ ಸಿಲುಕುವಂತೆ ಮಾಡಿದೆ.
ಸೋಂಕು ದಿನನಿತ್ಯ ಹೆಚ್ಚಳವಾಗುತ್ತಿರುವ ಹಿನ್ನೆಲೆಯಲ್ಲಿ ಅಲ್ಲಿನ ಮುಖ್ಯ ಕಾರ್ಯದರ್ಶಿ ವಿಜಯ ವರ್ಧನ್ ಅವರು ಎಲ್ಲ ಜಿಲ್ಲಾಧಿಕಾರಿಗಳು ಮತ್ತು ಹಿರಿಯ ಅಧಿಕಾರಿಗಳೊಂದಿಗೆ ಸಭೆ ನಡೆಸಿ ಸರಕಾರಿ ಮತ್ತು ಖಾಸಗಿ ಆಸ್ಪತ್ರೆಗಳಿಗೆ ಸಮರ್ಪಕವಾಗಿ ಆಮ್ಲಜನಕ ಪೂರೈಕೆ ಮಾಡುವಂತೆ ಸೂಚನೆ ನೀಡಿದ್ದಾರೆ.