ಆಮ್ಲಜನಕ ಪೂರೈಕೆ : ಪ್ರಧಾನಿ ನೇರ ನಿಗಾ: ಸುಪ್ರೀಂಗೆ ಕೇಂದ್ರದ ಪ್ರಮಾಣ ಪತ್ರ

ನವದೆಹಲಿ, ಏ.27- ದೇಶದಲ್ಲಿ ಆಮ್ಲಜನಕ ಕೊರತೆ ಎದುರಾಗಿರುವ ಹಿನ್ನೆಲೆಯಲ್ಲಿ ಪ್ರಧಾನಮಂತ್ರಿ ನರೇಂದ್ರ ಮೋದಿ ಮತ್ತು ಗೃಹ ಸಚಿವ ಅಮಿತ್ ಶಾ ಅವರು ಅವರು ನೇರ ನಿಗಾ ವಹಿಸಲಿದ್ದಾರೆ ಎಂದು ಕೇಂದ್ರ ಸರ್ಕಾರ ಸುಪ್ರೀಂಕೋರ್ಟ್ ಗೆ ಇಂದು ಪ್ರಮಾಣಪತ್ರ ಸಲ್ಲಿಸಿದೆ.

ಆಮ್ಲಜನಕ ಪೂರೈಕೆ ಸಂಬಂಧ ಸಮರೋಪಾದಿಯಲ್ಲಿ ಮೇಲ್ವಿಚಾರಣೆ ವಹಿಸಿದ್ದಾರೆ ಎಂದು ಸುಪ್ರೀಂಕೋರ್ಟಿಗೆ ಸಲ್ಲಿಸಿರುವ ಪ್ರಮಾಣ ಪತ್ರದಲ್ಲಿ ತಿಳಿಸಲಾಗಿದೆ

ಆಮ್ಲಜನಕ ಪೂರೈಕೆ ಸಂಬಂಧ ಪ್ರಧಾನಿ ನರೇಂದ್ರ ಮೋದಿ ಹಾಗೂ ಅಮಿತ್ ಶಾ ಅವರು ಎಲ್ಲ ರಾಜ್ಯಗಳೊಂದಿಗೆ ನಿರಂತರ ಸಂಪರ್ಕದಲ್ಲಿದ್ದಾರೆ ಮತ್ತು ಪರಿಸ್ಥಿತಿಯ ಬಗ್ಗೆ ಅವಲೋಕನ ಮಾಡುತ್ತಿದ್ದಾರೆ ಎಂದು ಕೂಡ ತಿಳಿಸಲಾಗಿದೆ.

ಪ್ರಧಾನಿ ಅವರು ನೇರ ಮೇಲ್ವಿಚಾರಣೆ ವಹಿಸಿರುವ ಹಿನ್ನೆಲೆಯಲ್ಲಿ ದಿನದಿಂದ ದಿನಕ್ಕೆ ಆಮ್ಲಜನಕದ ಪ್ರಮಾಣ ದೇಶದಲ್ಲಿ ಹೆಚ್ಚು ಸಿಗುತ್ತಿದೆ. ಮುಂದಿನ ದಿನಗಳಲ್ಲಿ ಅಗತ್ಯವಿರುವಷ್ಟು ಆಮ್ಲಜನಕ ಪೂರೈಕೆ ಮಾಡಲಾಗುವುದು ಎನ್ನುವ ಭರವಸೆಯನ್ನು ನ್ಯಾಯಾಲಯಕ್ಕೆ ಸಲ್ಲಿಸಲಾಗಿದೆ.

ದೇಶದಲ್ಲಿ ಸೇರಿದಂತೆ ಇತರ ದೇಶಗಳಲ್ಲಿ ಎಲ್ಲೆಲ್ಲಿ ವೈದ್ಯಕೀಯ ಆಮ್ಲಜನಕ ಲಭ್ಯವಿರಲಿದೆ ಅಂತಹ ಕಡೆ ಆಮ್ಲಜನಕವನ್ನು ಆಮದು ಮಾಡಿಕೊಳ್ಳಲು ಮತ್ತು ದೇಶದಲ್ಲಿ ಆಮ್ಲಜನಕ ಉತ್ಪಾದನೆಗೆ ಹೆಚ್ಚಿನ ಆದ್ಯತೆ ನೀಡಲಾಗಿದೆ ಎಂದು ಪ್ರಮಾಣ ಪತ್ರದಲ್ಲಿ ತಿಳಿಸಲಾಗಿದೆ.

ದೇಶದಲ್ಲಿ ಆಮ್ಲಜನಕ ಕೊರತೆ ಎದುರಾಗಿರುವ ಹಿನ್ನೆಲೆಯಲ್ಲಿ ಕೋರೋನಾ ಸೋಂಕಿತರು ಸಾವನ್ನಪ್ಪುತ್ತಿರುವ ಪ್ರಕರಣಗಳು ದಿನದಿಂದ ದಿನಕ್ಕೆ ಹೆಚ್ಚಾಗುತ್ತಿರುವ ಹಿನ್ನೆಲೆಯಲ್ಲಿ ಕೇಂದ್ರ ಸರ್ಕಾರ ಸ್ವಯಂಪ್ರೇರಣೆಯಿಂದ ಸುಪ್ರೀಂಕೋರ್ಟಿಗೆ ಪ್ರಮಾಣಪತ್ರ ಸಲ್ಲಿಸಿ ಪ್ರಧಾನಿ ನರೇಂದ್ರ ಮೋದಿ ಮತ್ತು ಕೇಂದ್ರ ಸಚಿವ ಅಮಿತ್ ಶಾ ಉಸ್ತುವಾರಿ ವಹಿಸಿರುವುದರಿಂದ ದಿನದಿಂದ ದಿನಕ್ಕೆ ಆಮ್ಲಜನಕ ಹೆಚ್ಚಿನ ಪ್ರಮಾಣದಲ್ಲಿ ಸಿಗುತ್ತದೆ ಎಂದು ತಿಳಿಸಿದೆ