ಆಮ್ಲಜನಕ ಸ್ಥಗಿತ: 22 ಕೋವಿಡ್ ಸೋಂಕಿತರು ಸಾವು

ಮುಂಬೈ,ಏ.21-ಕೋವಿಡ್-19 ಆಸ್ಪತ್ರೆ ಮುಂಭಾಗದಲ್ಲಿ ಆಮ್ಲಜನಕ‌ ಸೋರಿಕೆಯಾಗಿ ಕೇವಲ‌ ಅರ್ಧ ಗಂಟೆ ಅಮ್ಲಜನಕ‌ ಪೂರೈಕೆ ವ್ಯತ್ಯಯವಾಗುತ್ತಿದ್ದಂತೆ ಕನಿಷ್ಠ 22 ಕೋವಿಡ್ ಸೋಂಕಿತರು ಪ್ರಾಣವಾಯು ಸಿಗದೆ ಪ್ರಾಣ ಬಿಟ್ಟಿದ್ದಾರೆ.

ಆಮ್ಲಜನಕ ಪೂರೈಕೆ ಮಾಡುತ್ತಿದ್ದ ಟ್ಯಾಂಕರ್ ಆಸ್ಪತ್ರೆಯ ಮುಂದೆ ಸೋರಿಕೆಯಾದ ಹಿನ್ನೆಲೆಯಲ್ಲಿ ಈ ದುರಂತ ನಡೆದಿದೆ ಎಂದು ನಾಸಿಕ್ ಜಿಲ್ಲಾಧಿಕಾರಿ ತಿಳಿಸಿದ್ದಾರೆ

ನಾಶಿಕ್ ನ ಝಾಕೀರ್ ಹುಸೇನ್ ಆಸ್ಪತ್ರೆಯಲ್ಲಿ ಈ ದುರಂತ ನಡೆದಿದೆ. ಆಸ್ಪತ್ರೆಯಲ್ಲಿದ್ದ ಬಹುತೇಕ ರೋಗಿಗಳಿಗೆ ನಿರಂತರವಾಗಿ ಆಮ್ಲಜನಕ ಪೂರೈಕೆ ಮಾಡಲಾಗುತ್ತಿದೆ ಅರ್ಧಗಂಟೆ ಆಮ್ಲಜನಕ ಪೂರೈಕೆ ಸ್ಥಗಿತವಾದ ಹಿನ್ನೆಲೆಯಲ್ಲಿ 22 ಮಂದಿ ಮೃತಪಟ್ಟಿದ್ದು ಈ ಸಂಖ್ಯೆ ಇನ್ನೂ ಹೆಚ್ಚಾಗುವ ಸಾಧ್ಯತೆಗಳಿವೆ ಎಂದು ಹೇಳಲಾಗಿದೆ.

ಝಾಕಿರ್ ಹುಸೇನ್ ಆಸ್ಪತ್ರೆಯನ್ನು ಸಂಪೂರ್ಣವಾಗಿ ಕೋವಿಡ್ ಆಸ್ಪತ್ರೆಯಾಗಿ ಪರಿವರ್ತಿಸಲಾಗಿತ್ತು ಆಸ್ಪತ್ರೆಯಲ್ಲಿ 150ಕ್ಕೂ ಹೆಚ್ಚು ಸೋಂಕಿತರು ವೆಂಟಿಲೇಟರ್ ಮತ್ತು ಆಮ್ಲಜನಕ ಸಹಾಯದಲ್ಲಿ ಚಿಕಿತ್ಸೆ ನೀಡಲಾಗುತ್ತಿದೆ.

ಆಮ್ಲಜನಕ ಪೂರೈಕೆಯಲ್ಲಿ ವ್ಯಕ್ತವಾಗುತ್ತಿದ್ದಂತೆ ಭಾರಿ ಅನಾಹುತ ಸಂಭವಿಸಿದೆ ಈ ಸಂಖ್ಯೆ ಇನ್ನಷ್ಟು ಹೆಚ್ಚಾಗುವ ಸಾಧ್ಯತೆಗಳಿವೆ ಎಂದು ಕೂಡ ಹೇಳಲಾಗಿದೆ.

ತನಿಖೆ: ಆರೋಗ್ಯ ಸಚಿವ

ನಾಸಿಕ್ ನ ಜಾಕಿರ್ ಹುಸೇನ್ ಕೋವಿಡ್ ಆಸ್ಪತ್ರೆಯ ಮುಂಭಾಗದಲ್ಲಿ ಆಮ್ಲಜನಕದ ಟ್ಯಾಂಕರ್ ಸೋರಿಕೆಯಾಗಿ 22ಕ್ಕೂ ಅಧಿಕ ಮಂದಿ ಸಾವನ್ನಪ್ಪಿದ ಪ್ರಕರಣಕ್ಕೆ ಸಂಬಂಧಿಸಿದಂತೆ ಸೂಕ್ತ ತನಿಖೆ ನಡೆಸಲಾಗುವುದು ಎಂದು ಮಹಾರಾಷ್ಟ್ರದ ಆರೋಗ್ಯ ಸಚಿವ ರಾಜೇಶ್ ಥಾಪೆ ಹೇಳಿದ್ದಾರೆ.

ಆಮ್ಲಜನಕ ಪೂರೈಕೆ ಸ್ಥಗಿತ ವಾಗಿ ಈ ದುರ್ಘಟನೆ ನಡೆದಿದೆ ಘಟನೆಯ ಸಂಬಂಧ ಸೂಕ್ತ ತನಿಖೆ ನಡೆಸಿ ಕಾರಣ ಪತ್ತೆ ಮಾಡಲಾಗುವುದು. ಅನಿರೀಕ್ಷಿತವಾಗಿ ಅಥವಾ ಉದ್ದೇಶಪೂರ್ವಕವಾಗಿ ಎನ್ನುವುದನ್ನು ಪತ್ತೆ ಮಾಡಲಾಗುವುದು ಎಂದು ಅವರು ತಿಳಿಸಿದ್ದಾರೆ.

ಆಸ್ಪತ್ರೆ ಮುಂಭಾಗದಲ್ಲಿ ಆಮ್ಲಜನಕ ಟ್ಯಾಂಕರ ಸೋರಿಕೆಯಾಗಿ ಪ್ರಾಣ ಕಳೆದುಕೊಂಡ ಘಟನೆ ಗೆ ಸಂಬಂಧಿಸಿದಂತೆ ಯಾವ ರೀತಿಯ ತನಿಖೆ ನಡೆಸಬೇಕು ಎನ್ನುವ ಕುರಿತು ಮುಖ್ಯಮಂತ್ರಿ ಉದ್ಧವ್ ಠಾಕ್ರೆ ಅವರೊಂದಿಗೆ ಚರ್ಚಿಸಿ ನಿರ್ಧಾರ ಕೈಗೊಳ್ಳಲಾಗುವುದು ಎಂದು ಅವರು ಹೇಳಿದ್ದಾರೆ

31 ರೋಗಿಗಳು ಸ್ಥಳಾಂತರ

ಆಮ್ಲಜನಕ ಸಹಾಯದೊಂದಿಗೆ ಚಿಕಿತ್ಸೆ ಪಡೆಯುತ್ತಿದ್ದ 80 ರೋಗಿಗಳ ಪೈಕಿ 31 ರೋಗಿಗಳನ್ನು ಬೇರೆ ಆಸ್ಪತ್ರೆಗೆ ಸ್ಥಳಾಂತರ ಮಾಡಲಾಗಿದೆ ಎಂದು ಮಹಾರಾಷ್ಟ್ರ ಸರ್ಕಾರ ತಿಳಿಸಿದೆ.

ಕೊರೋನಾ ಸೋಂಕಿತರಿಗೆ ಆಮ್ಲಜನಕ ಸಿಗದೆ ಪರದಾಡುತ್ತಿರುವ ಸಮಯದಲ್ಲಿ ಆಮ್ಲಜನಕ ಟ್ಯಾಂಕರ್ ಸೋರಿಕೆಯಾಗಿ 22 ಮಂದಿ ಮೃತಪಟ್ಟಿರುವುದು ಘಟನೆಗೆ ಅನುಮಾನಗಳಿಗೆ ಕಾರಣವಾಗಿದೆ