ಆಮ್ ಆದ್ಮಿ ಪಕ್ಷದ ಮುಖಂಡನ ಗುಂಡಿಕ್ಕಿ ಕೊಲೆ

ಚಂಡೀಗಢ(ಪಂಜಾಬ್), ಜು.31- ಆಮ್ ಆದ್ಮಿ ಪಕ್ಷದ ಪುರಸಭೆ ಸದಸ್ಯನ ಮೇಲೆ ಇಬ್ಬರು ದುಷ್ಕರ್ಮಿಗಳು ಗುಂಡಿಕ್ಕಿ ಕೊಲೆಗೈದ ಘಟನೆ ಮಲೇರ್ ಕೋಟ್ಲಾ ಜಿಲ್ಲೆಯಲ್ಲಿ ನಡೆದಿದೆ.
ಪುರಸಭೆ ಸದಸ್ಯ ಮೊಹಮ್ಮದ್ ಅಕ್ಬರ್ ಕೊಲೆಯಾದವರು. ಇಂದು ಮುಂಜಾನೆ ಅಕ್ಬರ್‌ ಜಿಮ್ ಮಾಡುತ್ತಿದ್ದಾಗ ಅಲ್ಲಿಗೆ ಬಂದ ಇಬ್ಬರು ದುಷ್ಕರ್ಮಿಗಳು ಗುಂಡು ಹಾರಿಸಿ ಪರಾರಿಯಾಗಿದ್ದಾರೆ.
ಗುಂಡೇಟು ತಗುಲಿ ಗಂಭೀರವಾಗಿ ಗಾಯಗೊಂಡ ಅವರು ಸ್ಥಳದಲ್ಲೇ ಮೃತಪಟ್ಟಿದ್ದಾರೆ.
ಈ ಬಗ್ಗೆ ಸ್ಥಳೀಯ ಪೊಲೀಸ್ ಅಧಿಕಾರಿಗಳು ಪ್ರಕರಣ ದಾಖಲಿಸಿಕೊಂಡಿದ್ದು, ತನಿಖೆಯನ್ನು ಮುಂದುವರಿಸಿದ್ದಾರೆ. ಘಟನೆ ನಡೆದ ನಂತರ ಸ್ಥಳದಿಂದ ಪರಾರಿಯಾಗಿರುವ ಆರೋಪಿಗಳಿಗಾಗಿ ಶೋಧ ನಡೆಸುತ್ತಿದ್ದಾರೆ.
ಘಟನೆ ಸಂಬಂಧಿಸಿ ಹಿರಿಯ ಪೊಲೀಸ್ ಅಧಿಕಾರಿಯೊಬ್ಬರು ಮಾತನಾಡಿ, ಶೀಘ್ರವೇ ಆರೋಪಿಯನ್ನು ಬಂಧಿಸಲಾಗುವುದು ಎಂದು ಭರವಸೆ ನೀಡಿದ್ದಾರೆ.