(ಸಂಜೆವಾಣಿ ಪ್ರತಿನಿಧಿಯಿಂದ)
ಬೆಂಗಳೂರು,ಅ.೧೩:ಇತ್ತೀಚೆಗಷ್ಟೆ ಕಾಂಗ್ರೆಸ್ ಸೇರ್ಪಡೆಯಾಗಿದ್ದ ಮಾಜಿ ಸಂಸದ ಹಾಗೂ ವಿಧಾನ ಪರಿಷತ್ತಿನ ಮಾಜಿ ಸದಸ್ಯ ಆಯನೂರು ಮಂಜುನಾಥ್‌ರವರನ್ನು ಕೆಪಿಸಿಸಿ ವಕ್ತಾರರನ್ನಾಗಿ ನೇಮಕ ಮಾಡಲಾಗಿದೆ.
ಕೆಪಿಸಿಸಿ ಅಧ್ಯಕ್ಷ ಹಾಗೂ ಉಪಮುಖ್ಯಮಂತ್ರಿ ಡಿ.ಕೆ ಶಿವಕುಮಾರ್‌ರವರು ಆಯನೂರು ಮಂಜುನಾಥ್‌ರವರನ್ನು ಕೆಪಿಸಿಸಿ ವಕ್ತಾರರನ್ನಾಗಿ ನೇಮಕ ಮಾಡಿ ಆದೇಶ ಹೊರಡಿಸಿದ್ದು, ಪಕ್ಷದ ವಿಚಾರಧಾರೆಗಳನ್ನು ಹಾಗೂ ಸರ್ಕಾರದ ಯೋಜನೆಗಳನ್ನು ಮಾಧ್ಯಮಗಳಲ್ಲಿ ಪರಿಣಾಮಕಾರಿಯಾಗಿ ಬಿಂಬಿಸಿ ಪಕ್ಷದ ಬಲವರ್ಧನೆಗಾಗಿ ಸಹಕಾರಿಯಾಗಬೇಕು ಎಂದು ಅಯನೂರು ಮಂಜುನಾಥ್‌ರವರಿಗೆ ಡಿ.ಕೆ. ಶಿವಕುಮಾರ್ ಸೂಚನೆ ನೀಡಿ ವಕ್ತಾರರನ್ನಾಗಿ ನೇಮಕ ಮಾಡಿದ್ದಾರೆ.