
ಮಾನ್ವಿ,ಸೆ.೧೪ – ತಾಲೂಕಿನ ಹಿರೇ ಕೊಟ್ನೆಕಲ್ ಗ್ರಾಮದಲ್ಲಿನ ಪ್ರಾಥಮಿಕ ಆರೋಗ್ಯ ಕೇಂದ್ರದಲ್ಲಿ ನಡೆದ ಆಯುಷ್ಮಾನ್ ಭವ ಅಭಿಯಾನ ಕಾರ್ಯಕ್ರಮವನ್ನು ಗ್ರಾ.ಪಂ. ಅಧ್ಯಕ್ಷೆ ಲಕ್ಷ್ಮಿ ಉದ್ಘಾಟಿಸಿ ಮಾತನಾಡಿ ಸರಕಾರವು ಗ್ರಾಮೀಣ ಭಾಗದ ಜನರಿಗೂ ಕೂಡ ಉತ್ತಮ ಆರೋಗ್ಯಕ್ಕಾಗಿ ಹಲವು ಯೋಜನೆಗಳನ್ನು ಹಮ್ಮಿಕೊಂಡಿದೆ ಹಾಗೂ ಪ್ರಾಥಮಿಕ ಆರೋಗ್ಯ ಕೇಂದ್ರಗಳಲ್ಲಿನ ತಜ್ಞ ವೈದ್ಯರಿಂದ ಚಿಕಿತ್ಸೆ ಸೌಲಭ್ಯವಿದ್ದು ಪ್ರತಿಯೊಬ್ಬರು ಆರೋಗ್ಯ ಇಲಾಖೆಯ ಯೊಜನೆಗಳ ಸೌಲಭ್ಯಗಳನ್ನು ಪಡೆದುಕೊಂಡು ಆರೋಗ್ಯವಂತರಾಗಬೇಕು ಎಂದು ತಿಳಿಸಿದರು.
ಆರೋಗ್ಯ ಕೇಂದ್ರದ ಆಡಳಿತ ವೈದ್ಯಾಧಿಕಾರಿಗಳಾದ ಜಡಿ ಹನುಮೇಶ್ ನಾಯಕ್ ಮಾತನಾಡಿ ಕೇಂದ್ರ ಸರಕಾರದ ಆರೋಗ್ಯ ಕಾರ್ಯಕ್ರಮಗಳಾದ ಆಯುಷ್ಮಾನ್ ಭಾರತ್, ಪ್ರಧಾನ ಮಂತ್ರಿ ಜನ ಆರೋಗ್ಯ ಯೋಜನೆ, ಆಯುಷ್ಮಾನ್ ಭಾರತ ಆರೋಗ್ಯ ಕಾರ್ಡ್, ಪ್ರಧಾನ ಮಂತ್ರಿ ಮಾತೃತ್ವ ಸುರಕ್ಷಾ ಯೋಜನೆ ,ಈ ಸಂಜೀವಿನಿ ಕಾರ್ಯಕ್ರಮದ ಮೂಲಕ ಮನೆಯಲ್ಲಿ ಕುಳಿತು ಟೆಲಿಫೋನ್ ಮೂಲಕ ಚಿಕಿತ್ಸೆಯನ್ನು ಪಡೆಯುವ ಟೇಲಿ ಕನಸಲ್ಟೇಶನ್ ಪಡೆದು ಚಿಕಿತ್ಸೆಯನ್ನು ಪಡೆದುಕೊಳ್ಳಬಹುದಾಗಿದೆ ಆರೋಗ್ಯ ಇಲಾಖೆಯ ಮೂಲಕ ಸರಕಾರವು ಪ್ರತಿ ಗ್ರಾಮದಲ್ಲಿನ ಎಲ್ಲರಿಗೂ ಆರೋಗ್ಯ ಸೇವೆಯನ್ನು ಒದಗಿಸುವ ಪ್ರತಿ ಉದ್ದೇಶಿತ ಫಲಾನುಭವಿಗೂ ಕೂಡ ಆರೋಗ್ಯ ಯೋಜನೆಗಳನ್ನು ಅತ್ಯುತ್ತಮವಾಗಿ ತಲುಪಿಸುವ ಸಲುವಾಗಿ ಆಯುಷ್ಮಾನ್ ಭವ ಅಭಿಯಾನವನ್ನು ಹಮ್ಮಿಕೊಂಡಿದೆ ಎಂದು ತಿಳಿಸಿದರು.
ಗ್ರಾ.ಪಂ. ಉಪಾಧ್ಯಕ್ಷರಾದ ಲಕ್ಷ್ಮೀ, ಆರೋಗ್ಯ ನಿರೀಕ್ಷಣಾಧಿಕಾರಿಗಳಾದ ಭೀಮೇಶ್‌ಪ್ಪ, ಲ್ಯಾಭ್ ಟೆಕ್ನೋಲಜಿಸ್ಟ್ ಮುನ್ನುವರಅಲಿ ವೆಂಕಯ್ಯ. ಬಾಳಪ್ಪ, ಮರಿಯಾ. ಹುಸೇನಪ್ಪ, ತನ್ವರ್.ಗಾಯತ್ರಿ ಸೇರಿದಂತೆ ಆಶಾ ಕಾರ್ಯಕರ್ತರು,ಅಂಗನವಾಡಿ ಕಾರ್ಯಕರ್ತರು ಸೇರಿದಂತೆ ಇನ್ನಿತರರು ಇದ್ದರು.