
ಬೆಂಗಳೂರು,ಸೆ.೬-ರಾಷ್ಟ್ರೀಯ ಆಯುಷ್ ಮಿಷನ್‌ನ ಪ್ರಾದೇಶಿಕ ಪರಿಶೀಲನಾ ಸಭೆಯನ್ನು ಕೇಂದ್ರ ಬಂದರು, ಶಿಪ್ಪಿಂಗ್ ಮತ್ತು ಜಲಮಾರ್ಗ ಹಾಗೂ ಆಯುಷ್ ಖಾತೆ ಸಚಿವ ಸರ್ಬಾನಂದ ಸೋನೋವಾಲ್ ಅವರು ಉದ್ಘಾಟಿಸಿದರು.
ಈ ವೇಳೆ ಮಾತನಾಡಿದ ಕೇಂದ್ರ ಬಂದರು, ಶಿಪ್ಪಿಂಗ್ ಮತ್ತು ಜಲಮಾರ್ಗ ಮತ್ತು ಆಯುಷ್ ಸಚಿವ ಸರ್ಬಾನಂದ ಸೋನೊವಾಲ್, ಇಂದು ನಾವು ಆಯುಷ್ ಕುರಿತು ಬಹಳ ಫಲಪ್ರದ ಚರ್ಚೆ ನಡೆಸಿದ್ದೇವೆ ಮತ್ತು ಪ್ರಧಾನಮಂತ್ರಿ ನರೇಂದ್ರ ಮೋದಿಯವರ ದೂರದೃಷ್ಟಿಯ ಸ್ವಸ್ಥ ಭಾರತವನ್ನು ಸಾಕಾರಗೊಳಿಸುವಲ್ಲಿ ಸಾಂಪ್ರದಾಯಿಕ ವೈದ್ಯಕೀಯ ವ್ಯವಸ್ಥೆಯನ್ನು ಹೇಗೆ ಉತ್ತೇಜಿಸಬಹುದು ಎಂಬ ಬಗ್ಗೆ ಚರ್ಚಿಸಿದ್ದೇವೆ ಎಂದರು.
ಈ ಸಂದರ್ಭದಲ್ಲಿ ಕೇಂದ್ರ ಆಯುಷ್ ಮತ್ತು ಮಹಿಳಾ ಮತ್ತು ಮಕ್ಕಳ ಅಭಿವೃದ್ಧಿ ಖಾತೆ ರಾಜ್ಯ ಸಚಿವ ಡಾ. ಮುಂಜಪರಾ ಮಹೇಂದ್ರಭಾಯಿ ಕಲುಭಾಯಿ, ತಮಿಳುನಾಡು ಸರ್ಕಾರದ ಆರೋಗ್ಯ ಮತ್ತು ಕುಟುಂಬ ಕಲ್ಯಾಣ ಸಚಿವ ತಿರು ಮಾ ಸುಬ್ರಮಣಿಯನ್ ಕರ್ನಾಟಕದ ಆರೋಗ್ಯ ಮತ್ತು ಕುಟುಂಬ ಕಲ್ಯಾಣ ಸಚಿವ ದಿನೇಶ್ ಗುಂಡೂರಾವ್ ಆಯುಷ್ ಸಚಿವಾಲಯದ ಕಾರ್ಯದರ್ಶಿ, ವೈದ್ಯ ರಾಜೇಶ್ ಕೊಟೆಚಾ ಸೇರಿದಂತೆ ಆಂಧ್ರ ಪ್ರದೇಶ, ತೆಲಂಗಾಣ, ಕರ್ನಾಟಕ, ಕೇರಳ ಮತ್ತು ತಮಿಳುನಾಡು, ಪುದುಚೇರಿ ಕೇಂದ್ರಾಡಳಿತ ಪ್ರದೇಶ, ಮತ್ತು ಭಾರತ ಸರ್ಕಾರದ ಆಯುಷ್ ಸಚಿವಾಲಯದ ಇತರ ಹಿರಿಯ ಅಧಿಕಾರಿಗಳು ಉಪಸ್ಥಿತರಿದ್ದರು.