ಆಯೋಗದ ನಿರ್ದೇಶನಗಳನ್ನು ಪಾಲಿಸಲು ಸೂಚನೆ

ರಾಯಚೂರು,ಏ.೦೨- ಜಿಲ್ಲೆಯ ಮಸ್ಕಿ ವಿಧಾನಸಭಾ ಕ್ಷೇತ್ರದ ಉಪಚುನಾವಣೆಗೆ ನಿಯೋಜನೆಗೊಂಡಿರುವ ವಿವಿಧ ಸಮಿತಿಗಳ ಮುಖ್ಯಸ್ಥರೊಂದಿಗೆ ಚುನಾವಣಾ ವೆಚ್ಚ ವೀಕ್ಷಕರಾದ ಅಂಕುರ ಕುಮಾರ್ ಐ.ಪಿ ಅವರು ನಗರದ ಜಿಲ್ಲಾಧಿಕಾರಿಯವರ ಕಚೇರಿಯಲ್ಲಿ ಸಭೆ ನಡೆಸಿದರು.
ಚುನಾವಣಾ ಆಯೋಗದ ನಿರ್ದೇಶನಗಳನ್ವಯ ಮಸ್ಕಿ ಉಪಚುನಾಣೆಗೆ ನಿಯೋಜನೆಗೊಂಡ ಅಧಿಕಾರಿಗಳು ಹಾಗೂ ಸಿಬ್ಬಂದಿ ಮುತುವರ್ಜಿಯಿಂದ ಕಾರ್ಯನಿರ್ವಹಿಸಬೇಕು, ಪ್ರತಿನಿತ್ಯ ಆಯೋಗಕ್ಕೆ ಸಲ್ಲಿಸಬೇಕಾದ ವರದಿಗಳನ್ನು ಕಾಲಮಿತಿಯೊಳಗೆ ನೀಡಬೇಕು, ಅಭ್ಯರ್ಥಿಗಳ ಖರ್ಚು ವೆಚ್ಚ ಮೇಲೆ ಹೆಚ್ಚಿನ ನಿಗಾವಹಿಸಬೇಕು, ಯಾವುದೇ ರೀತಿಯ ಗಲಭೆಗಳಿಗೆ ಹಾಗೂ ಅಹಿತಕರ ಘಟನೆಗಳಿಗೆ ಅವಕಾಶಕೊಡಂತೆ ಎಚ್ಚರವಹಿಸಬೇಕು ಎಂದರು.
ನಂತರ ಅವರು ಜಿಲ್ಲಾ ಚುನಾವಣಾಧಿಕಾರಿಗಳೂ ಆಗಿರುವ ಜಿಲ್ಲಾಧಿಕಾರಿ ಆರ್.ವೆಂಕಟೇಶ ಕುಮಾರ್ ಅವರೊಂದಿಗೆ ಚುನಾವಣೆಗೆ ಸಂಬಂಧಿಸಿದಂತೆ ಚರ್ಚೆ ನಡೆಸಿದರು.
ಈ ಸಂದರ್ಭದಲ್ಲಿ ಜಿಲ್ಲಾ ಪಂಚಾಯತ್ ಮುಖ್ಯ ಕಾರ್ಯನಿರ್ವಾಹಣಾಧಿಕಾರಿ ಶೇಖ್ ತನ್ವೀರ್ ಆಸಿಫ್, ಅಪರ ಜಿಲ್ಲಾಧಿಕಾರಿ ಕೆ.ಆರ್.ದುರಗೇಶ್, ಹೆಚ್ಚುವರಿ ಪೊಲೀಸ್ ಅಧೀಕ್ಷಕ ಶ್ರೀಹರಿಬಾಬು, ಅಬಕಾರಿ ಇಲಾಖೆಯ ಅಧಿಕಾರಿಗಳು ಸೇರಿದಂತೆ ಹಲವರಿದ್ದರು.