ಆರಗ ಜ್ಞಾನೇಂದ್ರ ಹೇಳಿಕೆಗೆ ಖಂಡನೆ

ಕಲಬುರಗಿ,ಜು 3: ಮಾಜಿ ಸಚಿವ ಆರಗ ಜ್ಞಾನೇಂದ್ರ ಅವರು ಎಐಸಿಸಿ ಅಧ್ಯಕ್ಷ, ರಾಜ್ಯಸಭೆಯ ವಿರೋಧ ಪಕ್ಷದ ನಾಯಕ ಮಲ್ಲಿಕಾರ್ಜುನ ಖರ್ಗೆಅವರ ಕುರಿತು ನೀಡಿದ ಹೇಳಿಕೆಗೆ ಜಿಲ್ಲಾ ಕಾಂಗ್ರೆಸ್ ಸಮಿತಿ ಅಧ್ಯಕ್ಷ ಜಗದೇವ ಗುತ್ತೇದಾರ ಕಾಳಗಿ ಅವರು ತೀವ್ರವಾಗಿ ಖಂಡಿಸಿದ್ದಾರೆ.
ರಾಜ್ಯದಲ್ಲಿ ಬಿಜೆಪಿ ಹೀನಾಯವಾಗಿ ಸೋತಿದ್ದು, ಸೋಲಿನ
ಹತಾಶೆಯಿಂದ ಹೊರಬರಲಾರದೆ ತಲೆ ಮತ್ತು ಮನಸ್ಸಿಗೆ
ಸಂಬಂಧವಿಲ್ಲದಂತೆ ಹೇಳಿಕೆ ನೀಡುತ್ತಿರುವದು ನೋಡಿದರೆ ಮಾಜಿ
ಗೃಹ ಸಚಿವÀ ಆರಗ ಜ್ಞಾನೇಂದ್ರ ಇವರಿಗೆ ಬುದ್ಧಿಭ್ರಮಣೆಯಾಗಿದೆ ಎಂಬ ಸಂಶಯ ಕಂಡುಬರುತ್ತದೆ. ಮುತ್ಸದ್ಧಿ ಹಾಗೂಅನುಭವಿ ರಾಜಕಾರಣಿ ಮಲ್ಲಿಕಾರ್ಜುನ ಖರ್ಗೆ ಅವರ ಬಗ್ಗೆ ಹಗುರವಾಗಿ ಮಾತನಾಡಿದ ಆರಗ ಜ್ಞಾನೇಂದ್ರ ಅವರು ಮಾಧ್ಯಮದ ಮುಂದೆ ಹೇಳಿಕೆ ನೀಡುವ ಮುನ್ನ ಎಚ್ಚರಿಕೆಯಿಂದ ಮಾತನಾಡಲಿ. ಇದೆ ರೀತಿ ಮುಂದುವರೆದರೆ ಬೀದಿಗಿಳಿದು ಪ್ರತಿಭಟನೆನಡೆಸಬೇಕಾಗುತ್ತದೆ.ಅವರು ಕೂಡಲೇ ಬಹಿರಂಗ ಕ್ಷಮೆಯಾಚಿಸಬೇಕೆಂದು ಆಗ್ರಹಿಸಿದ್ದಾರೆ.