
ಯಾದಗಿರಿ : ನ.11 : ಪ್ರಸ್ತುತ ಸನ್ನಿವೇಶಗಳಲ್ಲಿ ಬದಲಾದ ಆಹಾರ ಮತ್ತು ಜೀವ ಶೈಲಿಯಿಂದ ಸದಾ ಒತ್ತಡದಲ್ಲಿ ಜೀವನ ಸಾಗಿಸುವ ಜೊತೆಗೆ ಹಲವಾರು ಕಾಯಿಲೆಗಳನ್ನು ಎದುರಿಸುತ್ತಿದ್ದೇವೆ ಇದರಿಂದ ಆರೋಗ್ಯಕರ ಜೀವನ ಸಾಗಿಸುವುದು ನಮಗೆ ಸಾಧ್ಯವಾಗುತ್ತಿಲ್ಲ. ಇದೆಲ್ಲದಕ್ಕೂ ಆಯುರ್ವೇದ ಜೀವನ ಶೈಲಿ ರೂಡಿಸಿಕೊಳ್ಳುವುದು ಅಗತ್ಯ ಎಂದು ಹೇಳಿದರು. ಆಯುರ್ವೇದ ಕೇವಲ ಔಷಧವಾಗಿರದೆ ಅದು ಜೀವನ ಶೈಲಿಯಾದಾಗ ಮಾತ್ರ ನಮ್ಮ ಆರೋಗ್ಯ ಸಮಸ್ಯೆಗಳಿಗೆ ಪರಿಹಾರ ದೊರೆಯುತ್ತದೆ ಎಂದು ಜಿಲ್ಲಾ ಪಂಚಾಯತ ಮುಖ್ಯ ಕಾರ್ಯನಿರ್ವಾಹಕ ಅಧಿಕಾರಿಗಳಾದ ಶ್ರೀಮತಿ ಗರೀಮಾ ಪನ್ವಾರ ಅವರು ತಿಳಿಸಿದರು.
ಯಾದಗಿರಿ ಹಿಂದಿ ಪ್ರಚಾರ ಸಭಾದಲ್ಲಿ ಶುಕ್ರವಾರ ರಂದು ನಡೆದ 8ನೇ ರಾಷ್ಟ್ರೀಯ ಆಯುರ್ವೇದ ದಿನಾಚರಣೆ ಅಂಗವಾಗಿ ಜಿಲ್ಲಾಡಳಿತ, ಜಿಲ್ಲಾ ಪಂಚಾಯತ ಮತ್ತು ಆಯುಷ್ ಇಲಾಖೆ ವತಿಯಿಂದ ಯಾದಗಿರಿ ನಗರದ ಹಿಂದಿ ಪ್ರಚಾರ ಸಭಾ ಆವರಣದಲ್ಲಿ ಹಮ್ಮಿಕೊಂಡಿದ್ದ 8ನೇ ರಾಷ್ಟ್ರೀಯ ಆಯುರ್ವೇದ ದಿನಾಚರಣೆ ಅಂಗವಾಗಿ ಜರುಗುದ ಉಚಿತ ಆರೋಗ್ಯ ಶಿಬಿರ ಉದ್ಘಾಟಿಸಿ ಮಾತನಾಡಿದರು. ಸಾರ್ವಜನಿಕರಿಗೆ ಆರೋಗ್ಯದ ಕುರಿತು ಅರಿವು ಮೂಡಿಸಲು ಆರೋಗ್ಯ ಶಿಬಿರಗಳನ್ನು ಹಮ್ಮಿಕೊಳ್ಳುವ ಮೂಲಕ ಆಯುಷ್ ಇಲಾಖೆ ನಿರಂತರವಾಗಿ ಶ್ರಮಿಸುತ್ತಿದೆ ಎಂದು ಮೆಚ್ಚುಗೆ ವ್ಯಕ್ತಪಡಿಸಿದರು.
ಜಿಲ್ಲಾ ಆರೋಗ್ಯ ಮತ್ತು ಕುಟುಂಬ ಕಲ್ಯಾಣ ಅಧಿಕಾರಿಗಳಾದ ಡಾ.ಪ್ರಭುಲಿಂಗ ಮಾನಕರ ಅವರು ಮಾತನಾಡಿ ಯುವ ಜನರು ಆಹಾರದ ಮಹತ್ವ ಕೊಡದೆ ಹಲವಾರು ರೋಗಗಳಿಗೆ ತುತ್ತಾಗುತ್ತಿದ್ದಾರೆ. ಇಲಾಖೆಯ ವತಿಯಿಂದ ಹಮ್ಮಿಕೊಂಡಿರುವ ಆರೋಗ್ಯ ಶಿಬಿರದಿಂದ ಸಾರ್ವಜನಿಕರಿಗೆ ಹಲವಾರು ಆರೋಗ್ಯ ಸಂಬಂಧಿತ ಸಮಸ್ಯೆಗಳಿಗೆ ಪರಿಹಾರ ನೀಡಿದಂತಾಗುತ್ತದೆ ಎಂದು ತಿಳಿಸಿದರು.
ನಿವೃತ್ತ ಶಿಕ್ಷಕರಾದ ಶ್ರೀ.ರಾಮಯ್ಯ ಇವರು ಮಾತನಾಡಿ ಗ್ರಾಮೀಣ ಪ್ರದೇಶದಲ್ಲಿ ಕೂಡ ಆಯುರ್ವೇದದ ಕುರಿತು ಅರಿವೂ ಮೂಡಿಸುವುದು ಅಗತ್ಯ, ದಿನ ನಿತ್ಯ ಯೋಗ ಮತ್ತು ವ್ಯಾಯಾಮ ಮಾಡುವುದು ಅಗತ್ಯ ಎಂದು ಹೇಳಿದರು.
ಕಾರ್ಯಕ್ರಮದ ಕುರಿತು ಪ್ರಾಸ್ತಾವಿಕವಾಗಿ ಮಾತನಾಡಿದ ಜಿಲ್ಲಾ ಆಯುಷ್ ಅಧಿಕಾರಿಗಳಾದ ಡಾ.ವಂದನಾ ಜೆ ಗಾಳಿಯವರ ಅವರು ಮಾತನಾಡಿದರು.
ಈ ಸಂದರ್ಭದಲ್ಲಿ ಜಿಲ್ಲಾ ಕನ್ನಡ ಸಾಹಿತ್ಯ ಪರಿಷತ್ ಅಧ್ಯಕ್ಷರಾದ ಶ್ರೀ.ಸಿದ್ದಪ್ಪ ಹೊಟ್ಟಿ, ಹಿರಿಯ ಪತ್ರಕರ್ತರಾದ ಶ್ರೀ. ಸಿ.ಎಂ ಪಟ್ಟೆದಾರ ,ಪತಂಜಲಿಯ ಶ್ರೀ ಅನೀಲ್ ಗುರೂಜಿ ಉಪಸ್ಥಿತರಿದ್ದರು. ಉಚಿತ ಆರೋಗ್ಯ ಶಿಬಿರದಲ್ಲಿ ಆಯುಷ್ ವೈದ್ಯರಿಂದ ಸುಮಾರು 200 ಹೆಚ್ಚು ಜನರು ಶಿಬಿರದ ಸದುಪಯೋಗ ಪಡೆದಕೊಂಡರು. ಕಾರ್ಯಕ್ರಮವನ್ನು ಶ್ರೀ ಸಂಗಮೇಶ ಕೆಂಭಾವಿ ನಿರೂಪಿಸಿದರು, ಡಾ.ಪ್ರಕಾಶ ರಾಜಾಪೂರ ಸ್ವಾಗತಿಸಿದರು, ಡಾ.ಸುನಂಧÀ ಕುದರಿ ವಂದಿಸಿದರು.