ಜೇವರ್ಗಿ,ಜೂ.9-ನರೇಗಾದಡಿ ಕೆಲಸ ಮಾಡುವ ಕಾರ್ಮಿಕರು ಶ್ರಮದ ಜತೆಗೆ ಆರೋಗ್ಯದ ಬಗ್ಗೆಯೂ ಕಾಳಜಿ ವಹಿಸಬೇಕು ಎಂದು ಜೇವರ್ಗಿ ತಾ.ಪಂ ಮಾಹಿತಿ ಶಿಕ್ಷಣ ಮತ್ತು ಸಂಹನ ಸಂಯೋಜಕ ಚಿದಂಬರ ಪಾಟೀಲ ಹೇಳಿದರು.
ತಾಲೂಕಿನ ಜೇರಟಗಿ ಗ್ರಾಮ ಪಂಚಾಯತಿ ವ್ಯಾಪ್ತಿಯ ಯಾತನೂರ ಗ್ರಾಮದಲ್ಲಿ ಶುಕ್ರವಾರ ಗ್ರಾಮ ಪಂಚಾಯತಿ, ಆರೋಗ್ಯ ಇಲಾಖೆ ಮತ್ತು ಕೆ.ಹೆಚ್.ಪಿ.ಟಿ ಸಹಯೋಗದಲ್ಲಿ ಹಮ್ಮಿಕೊಂಡ ಆರೋಗ್ಯ ಅಮೃತ್ ಅಭಿಯಾನಕ್ಕೆ ಚಾಲನೆ ನೀಡಿ ಅವರು ಮಾತನಾಡಿದರು.
ಆರೋಗ್ಯದ ಬಗ್ಗೆ ನಿರ್ಲಕ್ಷ್ಯ ವಹಿಸದೆ ಹೆಚ್ಚಿನ ಕಾಳಜಿ ವಹಿಸಬೇಕು.ಗ್ರಾಮೀಣ ಪ್ರದೇಶದ ಜನರಿಗೆ ಮಹಾತ್ಮ ಗಾಂಧಿ ನರೇಗಾದಡಿ ಕೆಲಸ ನೀಡುವುದು ಎಷ್ಟು ಮುಖ್ಯವೋ ಅವರ ಆರೋಗ್ಯ ಕಾಪಾಡುವುದು ಅಷ್ಟೇ ಮುಖ್ಯವಾಗಿದೆ. ಈ ದಿಸೆಯಲ್ಲಿ ಸರ್ಕಾರ ಉಚಿತ ಆರೋಗ್ಯ ತಪಾಸಣೆ ಶಿಬಿರ ಹಮ್ಮಿಕೊಂಡಿದ್ದು ಇದರ ಲಾಭ ಪಡೆದುಕೊಳ್ಳಬೇಕು ಎಂದು ಅವರು ಸಲಹೆ ನೀಡಿದರು.
ಗ್ರಾಮ ಪಂಚಾಯತಿ ಕಾರ್ಯದರ್ಶಿ ಉಮ್ಮಣ್ಣಗೌಡ ಹಿರೇಗೌಡ ಅವರು ಪ್ರಾಸ್ತಾವಿಕವಾಗಿ ಮಾತನಾಡಿದರು.
ಗ್ರಾಮ ಪಂಚಾಯತಿ ಅಧ್ಯಕ್ಷ ಪಿರಪ್ಪ ಯಾತನೂರ , ಜೇರಟಗಿ ಪ್ರಾಥಮಿಕ ಆರೋಗ್ಯ ಕೇಂದ್ರ ಎಲ್.ಹಚ್.ಓ ಯಮನಮ್ಮ, ಡಿಇಓ ರಾಚಣ್ಣಗೌಡ ಪಾಟೀಲ, ಕರವಸೂಲಿಗಾರ ಹಣಂಮಂತ ಪೂಜಾರಿ, ಹೆಚ್.ಪಿ.ಟಿ ರಾಘವೇಂದ್ರ ಬಿಲ್ಲಾಳ ಸೇರಿದಂತೆ ಮತ್ತಿತರರು ಉಪಸ್ಥಿತರಿದ್ದರು.