ಆರೋಗ್ಯದ ಕಾಳಜಿ ಅಗತ್ಯ

ಮುನವಳ್ಳಿ,ಜೂ11: ಸಮೂಪದ ಶಿಂದೋಗಿ ಗ್ರಾಂ ಪಂಚಾಯತಿ ವತಿಯಿಂದ ಮಹಾತ್ಮ ಗಾಂಧಿ ರಾಷ್ಟ್ರೀಯ ಗ್ರಾಮೀಣ ಉದ್ಯೋಗ ಖಾತರಿ ಯೋಜನೆಯ ಕಾಮಗಾರಿಗಳಲ್ಲಿ ಕೆಲಸ ನಿರ್ವಹಿಸುತ್ತಿರುವ ಕೂಲಿ ಕಾರ್ಮಿಕರಿಗೆ ಆರೋಗ್ಯ ಇಲಾಖೆಯವರ ಸಹಯೋಗದಲ್ಲಿ ಶುಕ್ರವಾರ ಆರೋಗ್ಯ ತಪಾಸಣೆ ಕಾರ್ಯಕ್ರಮ ಜರುಗಿತು.
ಪಂಚಾಯತಿ ಅಭಿವೃದ್ದಿ ಅಧಿಕಾರಿ ರಮೇಶ ಬೆಡಸೂರ ಮಾತನಾಡಿ ಆರೋಗ್ಯದ ಬಗ್ಗೆ ನಿರ್ಲಕ್ಷ್ಯ ಮಾಡುವಂತಿಲ್ಲ. ಪ್ರತಿಯೊಬ್ಬರು ಆರೋಗ್ಯದ ಬಗ್ಗೆ ಹೆಚ್ಚು ಗಮನ ವಹಿಸಿ ಎಲ್ಲಾ ಕಾರ್ಮಿಕರು ತಮ್ಮ ಆರೋಗ್ಯ ಕಾಳಜಿ ವಹಿಸಿ, ಸಾಂಕ್ರಾಮಿಕ ರೋಗಗಳಿಂದ ಮುಕ್ತರಾಗಿ, ಉತ್ತಮ ಆಹಾರ ಸೇವನೆ, ವ್ಯಾಯಾಮದಿಂದ ಆರೋಗ್ಯ ಕಾಪಾಡಿಕೊಳ್ಳಬಹುದು ಎಂದರು.
ಗ್ರಾ.ಪಂ ಅಧ್ಯಕ್ಷೆ ಮಾಯವ್ವ ಟೋಪೊಜಿ, ಸದಸ್ಯರಾದ ಕಲ್ಲಪ್ಪ ಕುರಬಗಟ್ಟಿ, ಈಶ್ವರ ಯಕ್ಕೇರಿ, ಆರೋಗ್ಯ ಇಲಾಖೆಯ ಸಿಬ್ಬಂದಿ ವರ್ಗ, ಆಶಾ ಕಾರ್ಯಕರ್ತೆಯರು, ನರೇಗಾ ಮೇಟಗಲು, ಕೂಲಿ ಕಾರ್ಮಿಕರು ಇತರರು ಉಪಸ್ಥಿತರಿದ್ದರು.