ಹೊಸಪೇಟೆ: ಆರೋಗ್ಯವಂತ ಸಮಾಜ ನಿರ್ಮಾಣ ಮಾಡುವಲ್ಲಿ ಪೌರಕಾರ್ಮಿಕರ ಕೊಡುಗೆ ಅಪಾರವಾಗಿದೆ ಎಂದು ಕಾಂಗ್ರೆಸ್ ಮುಖಂಡ ಹೆಚ್.ಎನ್ ಮೊಹಮ್ಮದ್ ಇಮಾಮ್ ನಿಯಯಾಜಿ ಹೇಳಿದರು.
ಹೊಸಪೇಟೆ ನಗರಸಭೆ ಹಾಗೂ ಕರ್ನಾಟಕ ರಾಜ್ಯ ಪೌರಸೇವಾ ನೌಕರರ ಸೇವಾ ಸಂಘ ಸಹಯೋಗದಲ್ಲಿ ಶನಿವಾರ ಹಮ್ಮಿಕೊಂಡಿದ್ದ ಪೌರ ಕಾರ್ಮಿಕ ದಿನಾಚರಣೆ ಕಾರ್ಯಕ್ರಮವನ್ನು ಉದ್ಘಾಟಿಸಿ ಮಾತನಾಡಿದ ಅವರು, ನಗರದ ಶುಚಿತ್ಸ ಕಾಪಾಡುವ ಮೂಲಕ ನಾಗರಿಕರ ಆರೋಗ್ಯ ಕಾಪಾಡುವ ನಿಟ್ಟಿನಲ್ಲಿ ಪೌರಕಾರ್ಮಿಕರ ಮಾತ್ರ ಬಹು ಮುಖ್ಯವಾಗಿದೆ. ಪ್ರತಿಯೊಬ್ಬರೂ ಅವರನ್ನು ಗೌರವದಿಂದ ಕಾಣಬೇಕು ಎಂದರು.
ಪೌರಕಾರ್ಮಿಕರು ದುಷ್ಚಟಗಳಿಗೆ ದಾಸರಾಗದೇ, ತಮ್ಮ ಆರೋಗ್ಯದ ಕಡೆ ಗಮನ ಹರಿಸಬೇಕು. ಮಕ್ಕಳಿಗೆ ಉನ್ನತ ಶಿಕ್ಷಣ ನೀಡಿ, ಉತ್ತಮ ಪ್ರಜೆಗಳನ್ನಾಗಿ ರೂಪಿಸಬೇಕು. ಸರ್ಕಾರದ ಯೋಜನೆಗಳ ಲಾಭ ಪಡೆಯಬೇಕು. ಪೌರಕಾರ್ಮಿಕರ ಯಾವುದೇ ಸಮಸ್ಯೆಗಳಿಗೆ ಸ್ಪಂದಿಸುವುದಾಗಿ ಭರವಸೆ ನೀಡಿದ ಅವರು, ಮನೆಗಳ ನಿರ್ಮಾಣಕ್ಕಾಗಿ ಅರ್ಜಿ ಸಲ್ಲಿಸಿದ್ದು, ಜಿಲ್ಲಾ ಉಸ್ತುವಾರಿ ಸಚಿವರ ಗಮಕ್ಕೆ ತರಲಾಗುವುದು ಎಂದು ತಿಳಿಸಿದರು.
ಪೌರಾಯುಕ್ತ ಬಿ. ಟಿ. ಬಂಡಿ ವಡ್ಡರ ಮಾತನಾಡಿ, ನಗರದ ಸ್ವಚ್ಚತೆಗಾಗಿ ಹಗಲಿರುಳು ಶ್ರಮಿಸುತ್ತಿರುವ ಪೌರಕಾರ್ಮಿಕರ ಬೇಡಿಕೆಗಳನ್ನು ಶೀಘ್ರ ಕಾರ್ಯರೂಪಕ್ಕೆ ತರುವಲ್ಲಿ ಪ್ರಾಮಾಣಿಕ ಪ್ರಯತ್ನ ಮಾಡುವುದಾಗಿ ಅವರು ಭರವಸೆ ನೀಡಿದರು.
ಪೌರಕಾರ್ಮಿಕರ ದಿನಾಚರಣೆ ಪ್ರಯಕ್ತ ಸಾಂಸ್ಕøತಿಕ ಕಾರ್ಯಕ್ರಮದಲ್ಲಿ ಭಾಗವಹಿಸಿ, ವಿಜೇತರಿಗೆ ಗಣ್ಯರು ಬಹುಮಾನ ವಿತರಿಸಿದರು. ಉಪಾಧ್ಯಕ್ಷ ನಗರಸಭೆ ರೂಪೇಶ್ ಕುಮಾರ್ ಪೌರಕಾರ್ಮಿಕ ಸಂಘಟನೆ ಮುಖಂಡ ಜಿ ನೀಲಕಂಠ, ಎಇಇ ಬಿ. ಸತೀಶ್, ವ್ಯವಸ್ಥಾಪಕ ಬಿ ಕೃಷ್ಣ ಮೂರ್ತಿ, ಅಭಿಯಂತರ ಖಾಜಾ ಹುಸೇನ್, ಡಿಗ್ರೂಪ್ ಸಂಘದ ಮಾಜಿ ಅಧ್ಯಕ್ಷ ಬಿ. ಮಾರೆಣ್ಣ, ಸುಂಕಪ್ಪ, ಜಗನ್ನಾಥ್ ಹೆಚ್, ವಿಜಯ ಕುಮಾರ್, ಸಲ್ಮಾನ್, ಬಿ. ಎಮ್ ನಾಗೇಂದ್ರ ಇತರರು ಇದ್ದರು.
One attachment • Scanned by Gmail