ಆರೋಗ್ಯಯುತ ಭಾರತಕ್ಕೆ ವೈದ್ಯಕೀಯ ಕ್ಷೇತ್ರದ ಕೊಡುಗೆ ಅಪಾರ

ಧಾರವಾಡ,ಆ1 : ಆರೋಗ್ಯಯುತ ಭಾರತ ನಿರ್ಮಾಣ ಮಾಡಲು ವೈದ್ಯಕೀಯ ಕ್ಷೇತ್ರದ ಸೇವೆ ಅಪಾರವಾಗಿದೆ ವಿದ್ಯಾರ್ಥಿಗಳು ಸೇವಾ ಮನೋಭಾವದಿಂದ ವೈದ್ಯಕೀಯ ಕ್ಷೇತ್ರಕ್ಕೆ ಅಧಿಕ ಸಂಖ್ಯೆಯಲ್ಲಿ ಬರುತ್ತಾರೆ ಎಂದು ಡಾ. ಆನಂದ ಪಾಂಡುರಂಗಿ ತಿಳಿಸಿದರು.
ಧಾರವಾಡ ಸುತ್ತೂರಿನಲ್ಲಿರುವ ಧರ್ಮಸ್ಥಳ ಡಾ.ವಿರೇಂದ್ರ ಹೆಗ್ಗಡೆ ಕಲಾಕ್ಷೇತ್ರದಲ್ಲಿ ನಡೆದ ಶ್ರೀ ಸತ್ಯ ಸಾಯಿ ಕಾಲೇಜ ಆಫ್ ಹೋಮಿಯೋಪತಿಕ ಮೆಡಿಕಲ್ ಸೈನ್ಸ್ ಅಂಡ್ ಹಾಸ್ಪಿಟಲ್ ಘಟಿಕೋತ್ಸವ ಕಾರ್ಯಕ್ರಮದಲ್ಲಿ ಭಾಗವಹಿಸಿ ಮಾತನಾಡಿದ ಅವರು ವೈದ್ಯಕೀಯ ಕ್ಷೇತ್ರದಲ್ಲಿ ಪದವಿ ಪಡೆದ ವಿದ್ಯಾರ್ಥಿಗಳು ಸೇವಾ ಮನೋಭಾವದಿಂದ ಆರೋಗ್ಯ ಭಾರತದ ಕನಸು ನನಸು ಮಾಡುವ ನಿಟ್ಟಿನಲ್ಲಿ ಕಾರ್ಯ ಆರಂಭ ಮಾಡಬೇಕು ಎಂದು ಕಿವಿಮಾತು ಹೇಳಿದರು.
ಕಾರ್ಯಕ್ರಮದಲ್ಲಿ ಕಾಲೇಜಿನ ಪ್ರಾಂಶುಪಾಲರಾದ ಡಾ. ಸರೋಜಿನಿ ದೇಸಾಯಿ ಮಾತನಾಡಿ, ವೈದ್ಯಕೀಯ ಲೋಕದಲ್ಲಿ ಸೇವಾ ಮನೋಭಾವದಿಂದ ಗುರುತಿಸಿಕೊಂಡು ಹೆಸರು ಮಾಡಿದವರನ್ನು ಆದರ್ಶವಾಗಿ ವಿದ್ಯಾರ್ಥಿಗಳು ಇಟ್ಟುಕೊಳ್ಳಬೇಕು ಎಂದರು. ಅದರಂತೆ ಪ್ರಸಕ್ತ ಸಾಲಿನಲ್ಲಿ ಪದವಿ ಪಡೆಯುತ್ತಿರುವ ವೈದ್ಯಕೀಯ ವಿದ್ಯಾರ್ಥಿಗಳಿಗೆ ಶುಭಹಾರೈಸಿದರು.
ಘಟಿಕೋತ್ಸವ ಕಾರ್ಯಕ್ರಮದಲ್ಲಿ ಡಾ.ಅರುಣ. ವಿ ಹೋಳಿ, ಮಾಜಿ ಸಭಾಪತಿ ವೀರಣ್ಣ ಮತ್ತಿಕಟ್ಟಿ, ಡಾ. ಶರಣಪ್ಪ ಕೊಟಗಿಯವರು ಭಾಗವಹಿಸಿ ವೈದ್ಯಕೀಯ ವಿದ್ಯಾರ್ಥಿಗಳಿಗೆ ಪದವಿ ಪ್ರಧಾನ ಮಾಡಿ ಗೌರವಿಸಿದರು.
ಈ ಸಂದರ್ಭದಲ್ಲಿ ಕಾಲೇಜಿನ ಟ್ರಸ್ಟಿಗಳಾದ, ಮೃತ್ಯುಂಜಯ ಕೊಟಗಿ, ನಾಗರಾಜ ಕೊಟಗಿ, ಕಾಲೇಜಿನ ಉಪ ಪ್ರಾಂಶುಪಾಲರಾದ ಡಾ. ಎನ್ ಎಸ್ ದೊಡಮನಿ, ಡಾ. ಕಿರಣ ಸಾನಿಕೊಪ್ಪ, ಸೇರಿದಂತೆ ವೈದ್ಯಕೀಯ ವಿದ್ಯಾರ್ಥಿಗಳು ಇದ್ದರು.