ಆರೋಗ್ಯ ಇಲಾಖೆಯಲ್ಲಿ ಮಹಿಳಾ ಸಿಬ್ಬಂದಿ ಪಾತ್ರ ಹಿರಿದು – ಡಾ. ಪ್ರದೀಪ.


ಸಂಜೆವಾಣಿ ವಾರ್ತೆ
ಕೂಡ್ಲಿಗಿ. ಮಾ.24 :- ಮುಖ್ಯವಾಗಿ ಆರೋಗ್ಯ ಇಲಾಖೆಯಲ್ಲಿ ಹೆರಿಗೆ ಸೇರಿದಂತೆ ಮಹಿಳೆ ಮತ್ತು ಮಕ್ಕಳ ಸುರಕ್ಷತೆ ಕಾಪಾಡುವಲ್ಲಿ ಮಹಿಳಾ ಸಿಬ್ಬಂದಿ ಪಾತ್ರ ಹಿರಿದಾಗಿದೆ ಎಂದು ಕೂಡ್ಲಿಗಿ ತಾಲೂಕು ವೈದ್ಯಾಧಿಕಾರಿ ಡಾ ಪ್ರದೀಪಕುಮಾರ ಅಭಿಪ್ರಾಯ ವ್ಯಕ್ತಪಡಿಸಿದರು.
ಅವರು ಪಟ್ಟಣದ ತಾಲೂಕು ವೈದ್ಯಾಧಿಕಾರಿಗಳ ಕಚೇರಿ ಆವರಣದಲ್ಲಿ ಕರ್ನಾಟಕ  ರಾಜ್ಯ ಪ್ರಾಥಮಿಕ ಆರೋಗ್ಯ ಸುರಕ್ಷಾಧಿಕಾರಿಗಳ ಸಂಘದ ತಾಲ್ಲೂಕು ಘಟಕದ ಮಹಿಳಾ ವಿಭಾಗದಿಂದ ಹಮ್ಮಿಕೊಳ್ಳಲಾಗಿದ್ದ ಅಂತರಾಷ್ಟ್ರೀಯ ಮಹಿಳಾ ದಿನಾಚರಣೆಯ ಕಾರ್ಯಕ್ರಮವನ್ನು ಉದ್ಘಾಟನೆ ನೆರವೇರಿಸಿ ಮಾತನಾಡುತ್ತ  ಪಿತೃ ಪ್ರಧಾನ ರಾಷ್ಟ್ರವಾದರೂ  ದೇಶದಲ್ಲಿ ಮಹಿಳೆಯರಿಗೆ ವಿಶೇಷ ಸ್ಥಾನಮಾನ ನೀಡುವ ಮೂಲಕ ಭಾರತ ಮಾತೆ, ಕರ್ನಾಟಕ ಮಾತೆ ಭುವನೇಶ್ವರಿ  ಮತ್ತು ಭೂಮಿ ತಾಯಿಯನ್ನು ಭೂ ದೇವಿ ಎನ್ನುವ ಹಾಗೇ ಮಾತೃ ಪ್ರಧಾನವಾಗಿ ಕಾಣುತ್ತಿದ್ದು ಸಮಾಜದಲ್ಲಿ ಮಹಿಳೆಯರನ್ನು ಗೌರವಿತ ಸ್ಥಾನದಲ್ಲಿ ಕಾಣಬೇಕಿದೆ  ಎಂದರು.
ತಾಲೂಕು ಹಿರಿಯ ಆರೋಗ್ಯ ನಿರೀಕ್ಷಣಾಧಿಕಾರಿ ಜಗದೀಶ್ ಮಾತನಾಡಿ ಮಹಿಳೆಯರು ಎಲ್ಲಾ ಕ್ಷೇತ್ರದಲ್ಲಿ ಹಾಗೂ ಎಲ್ಲಾ ರಂಗದಲ್ಲಿ ಮಹಿಳೆಯರು ಪುರುಷರಷ್ಟೇ ಮಹಿಳೆಯರು ಸಮಾನವಾಗಿ ಸಾಧನೆ ಮಾಡುತ್ತಿದ್ದು ಅವರ ಸಾಧನೆಗೆ ಹೆಚ್ಚಿನ ಪ್ರೋತ್ಸಾಹ ನೀಡಬೇಕು ಎಂದರು.
ಈ ಸಂದರ್ಭದಲ್ಲಿ ಹಿರಿಯ ಮಹಿಳಾ ಸಿಬ್ಬಂದಿ ಹಾಗೂ ವೈದ್ಯರನ್ನು ಸನ್ಮಾನಿಸಿ ಗೌರವಿಸಿದರು.
ಜಿಲ್ಲಾ ಮಲೇರಿಯಾ ಅಧಿಕಾರಿ ಡಾ. ಕಮಲಮ್ಮ, ಜಿಲ್ಲಾ ಕುಷ್ಠರೋಗ ನಿವಾರಣಾಧಿಕಾರಿ ಡಾ. ರಾಧಿಕಾ, ಜಿಲ್ಲಾ ಪಿಎಚ್‌ ಸಿಒ ಅಧ್ಯಕ್ಷೆ ಆ‌ರ್. ಮಂಜುಳಾ, ಸಾರ್ವಜನಿಕ ಆಸ್ಪತ್ರೆಯ ಆಡಳಿತ ವೈದ್ಯಾಧಿಕಾರಿ ಡಾ. ಮಧು. ರಾಜ್ಯ ಪ್ರಾಥಮಿಕ ಆರೋಗ್ಯ ಸುರಕ್ಷಾಧಿಕಾರಿಗಳ ಸಂಘದ ತಾಲ್ಲೂಕು ಅಧ್ಯಕ್ಷೆ ಶಿವರುದ್ರಮ್ಮ, ಗಿರಿಜಾ ಅಂಜಿನಪ್ಪ, ಆರೋಗ್ಯ ನಿರೀಕ್ಷಣಾಧಿಕಾರಿ ಸುನಿತಾ, ಆರೋಗ್ಯ ಸುರಾಕ್ಷತಾಧಿಕಾರಿಗಳಾದ ಪಿ.ಬಿ. ಗಿರಿಜಾ, ಸವಿತಾ ತಾಲ್ಲೂಕಿನ ಎಲ್ಲಾ ಆರೋಗ್ಯ ಸುರಾಕ್ಷಾಧಿಕಾರಿಗಳು ಕಾರ್ಯಕ್ರಮದಲ್ಲಿ ಪಾಲ್ಗೊಂಡಿದ್ದರು.
ಕುಮಾರಿ ಜಾನ್ವಿಅಂಜಿನಪ್ಪ  ಪ್ರಾರ್ಥನೆ ಸಲ್ಲಿಸಿದರು,ಪಿಹೆಚ್ ಐಓ ಸುನೀತಾ ನಿರೂಪಿಸಿದರು, ಸವಿತಾ ಸ್ವಾಗತಿಸಿದರು ಹಾಗೂ ಗಿರಿಜಾ ಅಂಜಿನಪ್ಪ ವಂದನಾರ್ಪಣೆ ಸಲ್ಲಿಸಿದರು.