
ರಾಯಚೂರು,ಏ.೧೭- ವಿಧಾನಸಭೆ ಚುನಾವಣೆ-೨೦೨೩ರ ಹಿನ್ನಲೆಯಲ್ಲಿ ಜಿಲ್ಲಾ ಆರೋಗ್ಯ ಮತ್ತು ಕುಟುಂಬ ಕಲ್ಯಾಣ ಇಲಾಖೆಯ ವತಿಯಿಂದ ಮತದಾರರ ಜಾಗೃತಿ ಕಾರ್ಯಕ್ರಮವನ್ನು ನಗರದ ಜಿಲ್ಲಾ ಆರೋಗ್ಯ ಮತ್ತು ಕುಟುಂಬ ಇಲಾಖೆಯ ಕಾರ್ಯಾಲಯದಲ್ಲಿ ಹಮ್ಮಿಕೊಳ್ಳಲಾಯಿತು.
ಇದೇ ವೇಳೆ ಜಿಲ್ಲಾ ಆರೋಗ್ಯ ಮತ್ತು ಕುಟುಂಬ ಕಲ್ಯಾಣಾಧಿಕಾರಿ ಡಾ.ಸುರೇಂದ್ರಬಾಭು ಅವರು ಜಿಲ್ಲೆಯ ಎಲ್ಲ ಪ್ರಾಥಮಿಕ ಆರೋಗ್ಯ ಕೇಂದ್ರಗಳು, ಸಮುದಾಯ ಆರೋಗ್ಯ ಕೇಂದ್ರಗಳು, ವಿವಿಧ ಸರ್ಕಾರಿ ಆಸ್ಪತ್ರೆಗಳ ವೈದ್ಯಾಧಿಕಾರಿಗಳಿಗೆ ಮತದಾನದ ಮಹತ್ವದ ಕುರಿತಾದ ಪೋಸ್ಟರ್(ಕರಪತ್ರಗಳನ್ನು) ವಿತರಿಸಿದರು.
ಈ ಸಂದರ್ಭದಲ್ಲಿ ಜಿಲ್ಲೆಯ ವಿವಿಧ ಸರ್ಕಾರಿ ಆಸ್ಪತ್ರೆ, ಪ್ರಾಥಮಿಕ ಆರೋಗ್ಯ ಕೇಂದ್ರಗಳ ವೈದ್ಯಾಧಿಕಾರಿಗಳು, ಸಿಬ್ಬಂದಿಗಳು ಉಪಸ್ಥಿತರಿದ್ದರು.