ಆರೋಗ್ಯ ಇಲಾಖೆಯಿಂದ ಮಲೇರಿಯಾ ವಿರೋಧಿ ಮಾಸಾಚರಣೆ

ಮಾನ್ವಿ,ಜೂ.೦೯-
ತಾಲೂಕಿನ ಕೊರವಿ ಗ್ರಾಮದಲ್ಲಿ ಆರೋಗ್ಯ ಇಲಾಖೆ ಹಾಗೂ ಜಿಲ್ಲಾ ರೋಗವಾಹಕ ಆಶ್ರೀತ ರೋಗಗಳ ನಿಯಂತ್ರಣಾಧಿಕಾರಿಗಳ ಕಾರ್ಯಲಯ ವತಿಯಿಂದ ಮಲೇರಿಯಾ ವಿರೋಧಿ ಮಾಸಾಚರಣೆ ೨೦೨೩ ಅಂಗವಾಗಿ ಸಾರ್ವಾಜನಿಕರಿಗೆ ಜಾಗೃತಿ ಮೂಡಿಸುವ ಅಂಗವಾಗಿ ಹಮ್ಮಿಕೊಂಡ ಜಾಗೃತಿ ಜಾಥ ಕಾರ್ಯಕ್ರಮಕ್ಕೆ ಹಿರಿಯ ಆರೋಗ್ಯ ನೀರಿಕ್ಷಣಾಧಿಕಾರಿ ಚಂದ್ರಶೇಖರ್ ಚಾಲನೆ ನೀಡಿ ಮಾತನಾಡಿ ಮಳೆಗಾಲದಲ್ಲಿ ತಗ್ಗು ಪ್ರದೇಶಗಳಲ್ಲಿ ಹೆಚ್ಚು ನೀರು ನಿಲ್ಲುವುದರಿಂದ ಮಲೇರಿಯಾ ಹರಡುವ ಆನಾಫಿಲಿಸ್ ಹೆಣ್ಣು ಸೊಳ್ಳೆಗಳು ಹೆಚ್ಚು ಉತ್ಪತ್ತಿಯಾಗುತ್ತವೇ ಇವುಗಳು ಮಲೇರಿಯಾ ರೋಗಣುಗಳನ್ನು ಒಬ್ಬರಿಂದ ಒಬ್ಬರಿಗೆ ಹರಡುವುದರಿಂದ ಮಲೇರಿಯಾ ಕಾಯಿಲೆ ಹರಡದಂತೆ ಸೊಳ್ಳೆ ನಿರೋಧಕಗಳನ್ನು ಹಾಗೂ ಸೊಳ್ಳೆ ಪರದೆ ಗಳನ್ನು ಬಳಸಬೇಕು ಮಲೇರಿಯಾ ಕಾಯಿಲೆಯ ಲಕ್ಷಣಗಳು ಕಂಡುಬಂದಲ್ಲಿ ಗ್ರಾಮದಲ್ಲಿನ ಆಶಾಕಾರ್ಯಕರ್ತರಿಗೆ ಮಾಹಿತಿ ನೀಡಿದಲ್ಲಿ ಕಿಟ್‌ಗಳನ್ನು ಬಳಸಿ ಕಾಯಿಲೆಯನ್ನು ಪತ್ತೆ ಹಚ್ಚಿ ತಜ್ಞ ವೈದ್ಯರಿಂದ ಚಿಕಿತ್ಸೆಯನ್ನು ಕೊಡಿಸುತ್ತಾರೆ ಎಂದು ತಿಳಿಸಿದರು.
ಆರೋಗ್ಯ ಶಿಕ್ಷಣಾಧಿಕಾರಿ ಬಾಲಪ್ಪನಾಯಕ ಮಲೇರಿಯಾ ಕಾಯಿಲೆಯ ಬಗ್ಗೆ ಸವಿಸ್ತಾರವಾಗಿ ಮಾಹಿತಿ ನೀಡಿದರು.
ಸೀಕಲ್ ಗ್ರಾಮದಲ್ಲಿ ಕೂಡ ಆರೋಗ್ಯ ಇಲಾಖೆಯ ಅಧಿಕಾರಿಗಳು ಮಲೇರಿಯಾ ವಿರೋಧಿ ಮಾಸಾಚರಣೆ ೨೦೨೩ ಅಂಗವಾಗಿ ಸಾರ್ವಾಜನಿಕರಿಗೆ ಜಾಗೃತಿ ಮೂಡಿಸಿದರು.
ಕಾರ್ಯಕ್ರಮದಲ್ಲಿ ಸಮುದಾಯ ಆರೋಗ್ಯಧಿಕಾರಿ ಮಂಜುಳಾ, ಪ್ರಾಥಮಿಕ ಆರೋಗ್ಯ ಸುರಕ್ಷಾ ಅಧಿಕಾರಿ ಉಷಾ, ಆಶಾ ಕಾರ್ಯಕರ್ತೆಯರಾದ ರೇಣುಕಾ, ಈರಮ್ಮ ಸೇರಿದಂತೆ ಗ್ರಾಮಸ್ಥರು ಇದ್ದರು.