ಆರೋಗ್ಯ ಕವಚ 108 ಹೊಸವರ್ಷದ ತುರ್ತು ಪ್ರತಿಸ್ಪಂದನ ಕ್ಕಾಗಿ

ಕಲಬುರಗಿ. ಡಿ.28:ಹೊಸ ವರ್ಷಚಾರಣೆಯ ವೇಳೆ ಸಂಭವಿಸಬಹುದಾದ ರಸ್ತೆ ಅಪಘಾತಗಳಿಂದ ಉಂಟಾಗುವ ಜೀವ ಹಾನಿಯನ್ನು ತಡೆಯುವ ದೃಷ್ಟಿಯಿಂದ 108 ಆರೋಗ್ಯ ಕವಚ ಅಂಬುಲೆನ್ಸ್ ಕರ್ನಾಟಕ ರಾಜ್ಯಾದ್ಯಂತ ಸುಸರ್ಜಿತ ಗೊಂಡಿರುತ್ತದೆ. ಸಾಮಾನ್ಯ ದಿನಗಳಿಗಿಂತ ಹೊಸ ವರ್ಷದ ಆಚರಣೆಗಳಲ್ಲಿ ಸರಾಸರಿ 30ರಿಂದ 35 ಪರ್ಸೆಂಟ್ ಹೆಚ್ಚುವರಿ ಅಪಘಾತ ಪ್ರಕರಣಗಳು ವರದಿಯಾಗಿವೆ.
108 ಅಂಬುಲೆನ್ಸ್ ಸೇವೆಯು ಕರ್ನಾಟಕ ರಾಜ್ಯ ಪೊಲೀಸ್ ಇಲಾಖೆಯೊಂದಿಗೆ ನಿಕಟ ಸಹಕಾರವನ್ನು ಹೊಂದಿರುತ್ತದೆ.
ಹೆಚ್ಚಿನ ತುರ್ತುಪರಿಸ್ಥಿತಿಯನ್ನು ನಿರೀಕ್ಷಿಸುವ ಪ್ರದೇಶಗಳಲ್ಲಿ ಹೆಚ್ಚುವರಿ ಅಂಬುಲೆನ್ಸ್ ಅನ್ನು ನಿಯೋಜಿಸಲಾಗುವುದು. ಹೆಚ್ಚುವರಿ ಸೇವೆಗಾಗಿ ಆಂಬುಲೆನ್ಸ್ ಸಿಬ್ಬಂದಿಯ ಸಾಪ್ತಾಯಿಕ ರಜೆಯನ್ನು ರದ್ದುಗೊಳಿಸಲಾಗಿದೆ. ಮುಂಜಾಗೃತ ವಾಗಿಯೇ ಎಲ್ಲಾ ಆಂಬುಲೆನ್ಸ್ ನಲ್ಲಿ ಇಂಧನ , ಆಮ್ಲಜನಕ, ವೈದ್ಯಕೀಯ ಉಪಕರಣಗಳನ್ನು ಇಡಿಸಲಾಗಿದೆ
ಕಲಬುರಗಿ ಜಿಲ್ಲೆಯಲ್ಲಿ 25 ಅಂಬುಲೆನ್ಸ್ ಗಳನ್ನು ತಜ್ಞ ಸಿಬ್ಬಂದಿಗಳೊಂದಿಗೆ ನಿಯೋಜಿಸಲಾಗಿದೆ. ತುರ್ತುಪರಿಸ್ಥಿತಿಗಳಲ್ಲಿ 108 ಫ್ರೀ ಸಂಖ್ಯೆ ಡಯಲ್ ಮಾಡಬಹುದು.
ಎಂದು ಜಿಲ್ಲಾ ವ್ಯವಸ್ಥಾಪಕರು ತಿಳಿಸಿದ್ದಾರೆ.
ಜೀವನ್ಮರಣದ ಗಾಯಗಳಿಂದ ನರಳುತ್ತಿರುವ ಗಾಯಳುಗಳನ್ನು ಸುರಕ್ಷಿತವಾಗಿ ಆಂಬುಲೆನ್ಸ್ ಗಳು ಲಭ್ಯ ಇರುವುದನ್ನು ಖಚಿತಪಡಿಸುತ್ತದೆ. ಹೆಚ್ಚಿನ ಸಂಖ್ಯೆ ಸಾವು-ನೋವುಗಳು ಅನಾಹುತಗಳ ಮಾಹಿತಿ ಪೊಲೀಸ್ ಅಗ್ನಿಶಾಮಕ ಸೇವೆ ಮತ್ತು ಆರೋಗ್ಯ ಇಲಾಖೆಗಳೊಂದಿಗೆ ಹಂಚಿಕೊಳ್ಳಲಾಗುವುದು.
ಹೆಚ್ಚಿನ ಮಾಹಿತಿಗಾಗಿ ಸಂಪರ್ಕಿಸಿ:ಜಿಲ್ಲಾ ವ್ಯವಸ್ಥಾಪಕರು,ಜಿವಿಕೆ ಇ.ಮ್.ಆರ್.ಐ 108
ಕಲಬುರಗಿ.