ಆರೋಗ್ಯ ಕೇಂದ್ರಕ್ಕೆ ಡಿಎಚ್‌ಒ ಭೇಟಿ

ರಾಯಚೂರು, ಅ.೧೯-ಜಿಲ್ಲಾ ಆರೋಗ್ಯ ಮತ್ತು ಕುಟುಂಬ ಕಲ್ಯಾಣ ಅಧಿಕಾರಿ ಸುರೇಂದ್ರ ಬಾಬು ಅವರು ಆರೋಗ್ಯ ಕ್ಷೇಮ ಕೇಂದ್ರಕ್ಕೆ ಭೇಟಿ ನೀಡಿ
ಗ್ರಾಮಾಂತರ ಪ್ರದೇಶದಲ್ಲಿರುವ ಪ್ರಾಥಮಿಕ ಅರೋಗ್ಯ ಕೇಂದ್ರಗಳಲ್ಲಿ ಉತ್ತಮವಾಗಿ ಕಾರ್ಯನಿರ್ವಹಿಸಬೇಕೆಂದು ಅಧಿಕಾರಿಗಳಿಗೆ ಸೂಚನೆ ನೀಡಿದರು.
ಈ ಸಂದ ರ್ಭದಲ್ಲಿ ಆರೋಗ್ಯ ಕ್ಷೇಮ ಕೇಂದ್ರದ ವ್ಯಾಪ್ತಿಯಲ್ಲಿ ಬರುವ ಗ್ರಾಮಗಳನ್ನು ಆಯುಷ್ಮಾನ್ ಭವ ಕಾರ್ಯಕ್ರಮದ ಯೋಜನೆ ಅಡಿಯಲ್ಲಿ ಆರೋಗ್ಯ ಗ್ರಾಮ ಕೈಗೊಳ್ಳವಂತೆ ವೈದ್ಯರಿಗೆ ತಿಳಿಸಿದರು, ಹೆಲ್ದಿ ವಿಲೇಜ್ ಘೋಷಣೆಗೆ ಗ್ರಾಮಾಂತರ ಪ್ರದೇಶದಲ್ಲಿ ಐದು ವರ್ಷ ಮೇಲ್ಪಟ್ಟ ಅವರಿಗೆ ಎ ಬಿ ಪಿ ಎಂ ಜೆ ವೈ ಕಾರ್ಡ್ ಆಭಾಕಾರ್ಡ್ ನೊಂದಣಿ ಮಾಡುವುದು ಮತ್ತು ಸಾಂಕ್ರಾಮಿಕ ರೋಗಗಳ ಕುರಿತು ಪ್ರತಿಯೊಬ್ಬರನ್ನು ಆರೋಗ್ಯ ತಪಾಸಣೆ ಒಳಪಡಿಸಬೇಕು ಎಂದು ಸೂಚಿಸಿದರು.