
ಚಿತ್ರದುರ್ಗ.ಫೆ.೨೨; ಗರ್ಭಿಣಿಯರ ಅನುಕೂಲಕ್ಕಾಗಿ ಮೊಳಕಾಲ್ಮೂರು ಹಾಗೂ ಚಳ್ಳಕೆರೆ ತಾಲೂಕು ಆರೋಗ್ಯ ಕೇಂದ್ರದಲ್ಲಿ ಈಗಾಗಲೇ ಅಲ್ಟ್ರಾ ಸೌಂಡ್ ಸ್ಕ್ಯಾನಿಂಗ್ ಯಂತ್ರಗಳನ್ನು ಅಳವಡಿಸಲಾಗಿದೆ. ಹಿರಿಯೂರು, ಹೊಸದುರ್ಗ, ಹೊಳಲ್ಕೆರೆ ತಾಲ್ಲೂಕು ಆರೋಗ್ಯ ಕೇಂದ್ರಗಳು ಸೇರಿದಂತೆ ಹೊರ ರೋಗಿಗಳ ಸಂಖ್ಯೆ ಹೆಚ್ಚಿರುವ ಧರ್ಮಪುರ, ನಾಯಕನಹಟ್ಟಿ, ಭರಮಸಾಗರ ಸಮುದಾಯ ಆರೋಗ್ಯ ಕೇಂದ್ರಗಳಲ್ಲಿ ಅಲ್ಟ್ರಾಸೌಂಡ್ ಸ್ಕ್ಯಾನಿಂಗ್ ಯಂತ್ರಗಳನ್ನು ಶೀಘ್ರದಲ್ಲೇ ಅಳವಡಿಸಲಾಗುವುದು ಎಂದು ಜಿಲ್ಲಾ ಆರೋಗ್ಯ ಮತ್ತು ಕುಟುಂಬ ಕಲ್ಯಾಣಾಧಿಕಾರಿ ಡಾ. ಆರ್. ರಂಗನಾಥ್ ಹೇಳಿದರು.ಜಿಲ್ಲಾ ಆರೋಗ್ಯ ಮತ್ತು ಕುಟುಂಬ ಕಲ್ಯಾಣಾಧಿಕಾರಿಗಳ ಕಚೇರಿಯಲ್ಲಿ ಏರ್ಪಡಿಸಲಾಗಿದ್ದ ಗರ್ಭಧಾರಣಾ ಪೂರ್ವ ಮತ್ತು ಪ್ರಸರ್ವ ಪೂರ್ವ ಲಿಂಗಪತ್ತೆ ತಂತ್ರವಿಧಾನಗಳ ನಿμÉೀಧ (ಪಿಸಿ & ಪಿಎನ್‍ಡಿಟಿ) ಕಾಯ್ದೆ ಅನುμÁ್ಠನ ಕುರಿತ ಜಿಲ್ಲಾ ಸಲಹಾ ಸಮಿತಿ ಸಭೆಯಲ್ಲಿ ಅವರು ಮಾತನಾಡಿದರು.
ಜಿಲ್ಲೆಯಲ್ಲಿ ಸರ್ಕಾರಿ-07 ಹಾಗೂ ಖಾಸಗಿ-55 ಸೇರಿದಂತೆ ಒಟ್ಟು 62 ಅಲ್ಟ್ರಾಸೌಂಡ್ ಸ್ಕ್ಯಾನಿಂಗ್ ಯಂತ್ರಗಳು ವಿವಿಧ ಕೇಂದ್ರಗಳಲ್ಲಿ ಕಾರ್ಯ ನಿರ್ವಹಿಸುತ್ತಿವೆ. ಚಿತ್ರದುರ್ಗ ಜಿಲ್ಲಾ ಆರೋಗ್ಯ ಕೇಂದ್ರದಲ್ಲಿ ಮಾತ್ರ ರೆಡಿಯಾಲಜಿಸ್ಟ್ ಇದ್ದು, ಉಳಿದ ತಾಲೂಕು ಆಸ್ಪತ್ರೆಗಳಲ್ಲಿ ಸ್ತ್ರೀ ರೋಗ ತಜ್ಞರಿಗೆ ಸ್ಕ್ಯಾನಿಂಗ್ ತರಬೇತಿ ನೀಡಲಾಗಿದೆ. ತಾಲೂಕು ಹಾಗೂ ಸಮುದಾಯ ಆರೋಗ್ಯ ಕೇಂದ್ರಗಳು ಅಲ್ಟ್ರಾಸೌಂಡ್ ಸ್ಕ್ಯಾನಿಂಗ್ ಯಂತ್ರಗಳು ಅಳವಡಿಕೆಯಿಂದ ಗ್ರಾಮೀಣ ಭಾಗದ ಗರ್ಭಿಣಿಯರು ನಗರಗಳಿಗೆ ಬರುವುದು ತಪ್ಪುತ್ತದೆ ಎಂದು ತಿಳಿಸಿದರು.