ದಾವಣಗೆರೆ.ಜೂ.2; ನಗರದ ಪ್ರೀತಿ ಆರೈಕೆ ಟ್ರಸ್ಟ್, ಸ್ಟಾರ್ ಹೆಲ್ತ್ ಇನ್ಸೂರೆನ್ಸ್ ಮತ್ತು ಆರೈಕೆ ಸೂಪರ್ ಸ್ಪೆಷಾಲಿಟಿ ಆಸ್ಪತ್ರೆಯ ಸಹಯೋಗದಲ್ಲಿ ನಗರದ ರಿಂಗ್ ರಸ್ತೆಯಲ್ಲಿರುವ ರಿಷಿ ಶಾಲೆಯಲ್ಲಿ ಗುರುವಾರ ಸಾರ್ವಜನಿಕರಿಗೆ ಉಚಿತ ಆರೋಗ್ಯ ತಪಾಸಣಾ ಶಿಬಿರ ಆಯೋಜಿಸಲಾಗಿತ್ತು.ಈ ಸಂದರ್ಭದಲ್ಲಿ ಮಾತನಾಡಿದ ಆಸ್ಪತ್ರೆಯ ವ್ಯವಸ್ಥಾಪಕ ನಿರ್ದೇಶಕ ಡಾ.ರವಿಕುಮಾರ್, ಸಾಮಾಜಿಕ ಸೇವೆಯ ಭಾಗವಾಗಿ ಈ ರೀತಿ ಉಚಿತವಾಗಿ ಆರೋಗ್ಯ ತಪಾಸಣಾ ಶಿಬಿರಗಳನ್ನು ನಿರಂತರವಾಗಿ ಹಮ್ಮಿಕೊಳ್ಳಲಾಗುತ್ತಿದ್ದು, ಜನರಿಂದ ಉತ್ತಮ ಪ್ರತಿಕ್ರಿಯೆ ವ್ಯಕ್ತವಾಗಿದೆ. ಸಕ್ಕರೆ ಕಾಯಿಲೆ, ರಕ್ತದೊತ್ತಡ, ಕೀಲು ನೋವು ಸೇರಿದಂತೆ ವಿವಿಧ ಕಾಯಿಲೆಗಳ ತಪಾಸಣೆ ಮತ್ತು ಚಿಕಿತ್ಸೆ ನೀಡಲಾಗಿದೆ ಎಂದು ತಿಳಿಸಿದರು.ಹಿರಿಯ ವೈದ್ಯರಾದ ಡಾ. ಹಾಲಸ್ವಾಮಿ ಕಂಬಾಳಿಮಠ್, ಅತಿಥಿಗಳಾದ ಭರತ್ ಎಸ್, ರಾಜೇಂದ್ರ ದೊಡ್ಡವಾಡ ತಪಾಸಣೆ ಶಿಬಿರ ಪಾಲ್ಗೊಂಡಿದ್ದರು. ದಾವಣಗೆರೆಯ ರಿಷಿ ಸಮೂಹ ಸಂಸ್ಥೆಗಳ ಪ್ರಾಂಗಣದಲ್ಲಿ ಆಯೋಜಿಸಿದ್ದ ತಪಾಸಣೆ ಶಿಬಿರದಲ್ಲಿ, ಸ್ಟಾರ್ ಹೆಲ್ತ್ ಇನ್ಸೂರೆನ್ಸ್ ವಿಮಾದಾರರು ಭಾಗವಹಿಸಿದ್ದರು.400 ಕ್ಕೂ ಅಧಿಕ ಸಾರ್ವಜನಿಕರು ಆರೋಗ್ಯ ತಪಾಸಣೆ ಮಾಡಿಸಿಕೊಂಡರು.ಆರೈಕೆ ಆಸ್ಪತ್ರೆಯ ಮುಖ್ಯಸ್ಥರಾದ ಡಾ. ರವಿಕುಮಾರ್ ನೇತೃತ್ವದಲ್ಲಿ ನಡೆದ ಆರೋಗ್ಯ ತಪಾಸಣೆಯ ಬಗ್ಗೆ ಸಾರ್ವಜನಿಕರು ಅಪಾರ ಮೆಚ್ಚುಗೆ ವ್ಯಕ್ತವಾಯಿತು.