ಆರೋಗ್ಯ ತಪಾಸಣೆ


ಲಕ್ಷ್ಮೇಶ್ವರ,ಜೂ.1: ಗ್ರಾಮೀಣ ಪ್ರದೇಶಗಳಲ್ಲಿ ಕೊರೋನಾ ಸೋಂಕು ಅಬ್ಬರಿಸುತ್ತಿದ್ದು ಜನರ ಜೀವ ಹಿಂಡುತ್ತಿದೆ, ಈ ಹಿನ್ನೆಲೆಯಲ್ಲಿ ರಾಜ್ಯ ಸರ್ಕಾರ ವೈದ್ಯರ ನಡೆ ಹಳ್ಳಿಯ ಕಡೆ ಎಂಬ ಕಾರ್ಯಕ್ರಮವನ್ನು ಹಮ್ಮಿಕೊಳ್ಳುವ ಮೂಲಕ ಗ್ರಾಮೀಣ ಪ್ರದೇಶದ ಜನರ ಆರೋಗ್ಯ ತಪಾಸಣೆಗೆ ಮುಂದಾಗಿದೆ.
ಅದರನ್ವಯ ನಿನ್ನೆ ಲಕ್ಷ್ಮೇಶ್ವರ ತಾಲೂಕಿನ ಪು.ಬಡ್ನಿ ಗ್ರಾಮ ಪಂಚಾಯಿತಿ ಆವರಣದಲ್ಲಿ ಆರೋಗ್ಯ ತಪಾಸಣೆ ಕಾರ್ಯ ಹಮ್ಮಿಕೊಳ್ಳಲಾಗಿತ್ತು.
ಅಧ್ಯಕ್ಷ ಅಶೋಕ್ ಮರಿಬಸಣ್ಣನವರ, ಉಪಾಧ್ಯಕ್ಷ, ಸದಸ್ಯರು, ಆಶಾ ಮತ್ತು ಅಂಗನವಾಡಿ ಕಾರ್ಯಕರ್ತೆಯರು, ಆರೋಗ್ಯ ಇಲಾಖೆಯ ಪುಷ್ಪಾ, ಪಿಡಿಓ ಎಮ್.ಆರ್. ಮಾದರ ಇದ್ದರು.