ಆರೋಗ್ಯ ಪೂರ್ಣ ಸಮಾಜಕ್ಕೆ ನೈತಿಕ ಮೌಲ್ಯಗಳ ಅಗತ್ಯವಿದೆ :  ರಂಭಾಪುರಿ ಶ್ರೀ

????????????

ಬಾಳೆಹೊನ್ನೂರು.ಮಾ.೨೭; ಸುಖ ಶಾಂತಿದಾಯಕ ಬದುಕಿಗೆ ಧರ್ಮ ಮತ್ತು ಧರ್ಮಾಚರಣೆ ಮುಖ್ಯ. ಉತ್ತಮ ಸಮಾಜ ನಿರ್ಮಾಣಕ್ಕೆ ಶಾಸ್ತç ಮತ್ತು ಶಸ್ತçದ ಭಯ ಇರಬೇಕಂತೆ. ಇವೆರಡನ್ನೂ ಮನುಷ್ಯ ಮೀರಿ ನಡೆಯುತ್ತಿರುವ ಕಾರಣ ಜೀವನದಲ್ಲಿ ಶಾಂತಿ ನೆಮ್ಮದಿಯಿಲ್ಲ. ಆರೋಗ್ಯ ಪೂರ್ಣ ಸಮಾಜ ನಿರ್ಮಾಣಕ್ಕೆ ನೈತಿಕ ಮೌಲ್ಯಗಳ ಸಂರಕ್ಷಣೆ ಅಗತ್ಯತೆ ಬಹಳಷ್ಟಿದೆ ಎಂದು ಶ್ರೀ ರಂಭಾಪುರಿ ಡಾ.ವೀರಸೋಮೇಶ್ವರ ಜಗದ್ಗುರುಗಳು ಅಭಿಪ್ರಾಯಪಟ್ಟರು.ಅವರು  ಶ್ರೀ ರಂಭಾಪುರಿ ಪೀಠದಲ್ಲಿ ಶ್ರೀ ಜಗದ್ಗುರು ರೇಣುಕಾಚಾರ್ಯ ಜಯಂತಿ ಯುಗಮಾನೋತ್ಸವ ಹಾಗೂ ಕ್ಷೇತ್ರನಾಥ ವೀರಭದ್ರಸ್ವಾಮಿ ಮಹಾರಥೋತ್ಸವದ ಅಂಗವಾಗಿ ಜರುಗಿದ ನೈತಿಕ ಮೌಲ್ಯಗಳ ಸಂರಕ್ಷಣೆ ಸಮಾರಂಭದ ಸಾನ್ನಿಧ್ಯ ವಹಿಸಿ ಆಶೀರ್ವಚನ ನೀಡುತ್ತಿದ್ದರು.ಮನುಷ್ಯ ಜೀವನದಲ್ಲಿ ಧರ್ಮ ಅರ್ಥ ಕಾಮ ಮತ್ತು ಮೋಕ್ಷ ಎಂಬ ಚತುರ್ವಿಧ ಪುರುಷಾರ್ಥಗಳಲ್ಲಿ ಒಚಿದನ್ನಾದರೂ ಸಂಪಾದಿಸದಿದ್ದರೆ ಜೀವನ ವ್ಯರ್ಥವಾಗುವುದು. ಜೀವನ ಹೂದೋಟದಲ್ಲಿ ಅರಳುವ ಹೂಗಳೆಷ್ಟೋ ಬಾಡುವ ಜೀವಗಳು ಎಷ್ಟೋ ಹೇಳಲಾಗದು. ಅವರವರ ಬದುಕಿನಲ್ಲಿ ಅಳವಡಿಸಿಕೊಂಡ ನೀತಿ ನಿಯತ್ತುಗಳೇ ಕಾರಣವಾಗುತ್ತವೆ. ಭೌತಿಕ ಬದುಕಿನ ಸಂಪನ್ಮೂಲಗಳಗಲಿ ಸಿರಿ ಸಂಪತ್ತಿನ ಸಂಗ್ರಹವಾಗಲಿ ಮಾನವನಿಗೆ ಸಂತೃಪ್ತಿ ತಂದು ಕೊಡಲಾರವು. ಇದರೊಂದಿಗೆ ಒಂದಿಷ್ಟಾದರೂ ಆಧ್ಯಾತ್ಮ ಚಿಂತನೆ ಇರಬೇಕಾಗುತ್ತದೆ. ಇಂದು ಎಲ್ಲೆಡೆ ಶಾಂತಿಗಾಗಿ ಹುಡುಕಾಟ ನಡೆದಿದೆ. ಆದರೆ ಕಳೆದು ಹೋದ ಸ್ಥಾನದಲ್ಲಿಲ್ಲ. ಬೇರೆಲ್ಲಿಯೋ ಅನ್ವೇಷಣೆ ನಡೆಯುತ್ತಿದೆ. ಮಂತ್ರ ತೀರ್ಥ ಗುರು ದೈವ ದೇವರು ಮತ್ತು ವೈದ್ಯರಲ್ಲಿ ಯಾವ ಭಾವನೆಗಳನ್ನು ಇಟ್ಟುಕೊಂಡು ನಡೆಯುತ್ತೇವೆಯೋ ಅದಕ್ಕೆ ತಕ್ಕ ಫಲಗಳನ್ನು ಮನುಷ್ಯ ಪಡೆಯುವುದರಲ್ಲಿ ಯಾವುದೇ ಅನುಮಾನವಿಲ್ಲ. ನೀತಿಯಿಲ್ಲದ ಶಿಕ್ಷಣ ಭೀತಿ ಇಲ್ಲದ ಶಾಸನ, ಮಿತಿ ಇಲ್ಲದ ಜೀವನ, ಸೀಮಾತೀತವಾದ ಸ್ವಾತಂತ್ರö್ಯ ಇವು ರಾಷ್ಟç ವಿಘಾತಗಳೆಂದು ಶ್ರೀಮದ್ರಂಭಾಪುರಿ ವೀರಗಂಗಾಧರ ಜಗದ್ಗುರುಗಳು ನಿರೂಪಿಸಿದ್ದನ್ನು ಯಾರೂ ಮರೆಯಲಾಗದು. ಶ್ರೀ ಜಗದ್ಗುರು ರೇಣುಕಾಚಾರ್ಯ ಜಯಂತಿ ಯುಗಮಾನೋತ್ಸವ ಹಾಗೂ ಕ್ಷೇತ್ರನಾಥ ವೀರಭದ್ರಸ್ವಾಮಿ ಮಹಾರಥೋತ್ಸವದ ಅಂಗವಾಗಿ ಹಮ್ಮಿಕೊಂಡ ಎಲ್ಲಾ ಕಾರ್ಯಗಳು ಅತ್ಯಂತ ಯಶಸ್ವಿಯಾಗಿ ಜರುಗಿದ್ದು ತಮಗೆ ಸಂತೋಷ ತಂದಿದೆ ಎಂದರು.