ಆರೋಗ್ಯ ಸಚಿವರ ಜಿಲ್ಲಾ ಪ್ರವಾಸ

ಚಿತ್ರದುರ್ಗ,ಮೇ.19; ರಾಜ್ಯ ಆರೋಗ್ಯ ಮತ್ತು ಕುಟುಂಬ ಕಲ್ಯಾಣ ಹಾಗೂ ವೈದ್ಯಕೀಯ ಶಿಕ್ಷಣ ಸಚಿವರಾದ ಡಾ.ಕೆ.ಸುಧಾಕರ್ ಅವರು ಮೇ 20ರಂದು ಚಿತ್ರದುರ್ಗ ಜಿಲ್ಲಾ ಪ್ರವಾಸ ಕಾರ್ಯಕ್ರಮ ಹಮ್ಮಿಕೊಂಡಿದ್ದಾರೆ.
ಸಚಿವರು ಮೇ 20ರಂದು ಮಧ್ಯಾಹ್ನ 2ಕ್ಕೆ ದಾವಣಗೆರೆಯಿಂದ ಚಿತ್ರದುರ್ಗಕ್ಕೆ ಆಗಮಿಸುವರು. ಮಧ್ಯಾಹ್ನ 2.30 ರಿಂದ ಸಂಜೆ 6ರವರೆಗೆ ಚಿತ್ರದುರ್ಗ ಜಿಲ್ಲಾ ಆಸ್ಪತ್ರೆ ಹಾಗೂ ಸ್ಥಳೀಯ ಕೋವಿಡ್-19 ಆಸ್ಪತ್ರೆಗಳಿಗೆ ಭೇಟಿ ಹಾಗೂ ಪರಿಶೀಲನೆ ಮಾಡುವರು. ನಂತರ ನಗರದ ಜಿಲ್ಲಾ ಪಂಚಾಯಿತಿ ಸಭಾಂಗಣದಲ್ಲಿ ಚಿತ್ರದುರ್ಗ ಜಿಲ್ಲಾ ಆರೋಗ್ಯ ಮತ್ತು ಕುಟುಂಬ ಕಲ್ಯಾಣ ಇಲಾಖೆಯ ಪ್ರಗತಿ ಪರಿಶೀಲನಾ ಸಭೆ ಹಾಗೂ ಕೋವಿಡ್-19 ಮುನ್ನೆಚ್ಚರಿಕೆ ಕ್ರಮಗಳ ಬಗ್ಗೆ ಪರಿಶೀಲನೆ ಮಾಡುವರು. ಅದೇ ದಿನ ಸಂಜೆ 6ಕ್ಕೆ ಚಿತ್ರದುರ್ಗದಿಂದ ಬೆಂಗಳೂರಿಗೆ ಪ್ರಯಾಣ ಬೆಳೆಸುವರು ಎಂದು ಸಚಿವರ ಆಪ್ತ ಕಾರ್ಯದರ್ಶಿ ಡಾ.ಎಂ.ರಾಮೇಗೌಡ ತಿಳಿಸಿದ್ದಾರೆ.