
ವಿಜಯಪುರ:ಮಾ.18: ಜಿಲ್ಲಾ ಪಂಚಾಯತ್ ಮುಖ್ಯ ಕಾರ್ಯನಿರ್ವಹಣಾಧಿಕಾರಿ ರಾಹುಲ್ ಶಿಂಧೆ ಅವರು ಶುಕ್ರವಾರ ಜಿಲ್ಲಾ ಆರೋಗ್ಯ ಮತ್ತು ಕುಟುಂಬ ಕಲ್ಯಾಣ ಅಧಿಕಾರಿಗಳ ಕಛೇರಿಗೆ ಭೇಟಿ ನೀಡಿ, ಕಾರ್ಯಾಲಯದ ಆವರಣದಲ್ಲಿ ಹೊಸದಾಗಿ ನಿರ್ಮಿಸುತ್ತಿರುವ ಆರೋಗ್ಯ ಸೌಧ ಕಾಮಗಾರಿಯನ್ನು ವೀಕ್ಷಿಸಿದರು.
ಹಳೆಯ ಕಟ್ಟಡ ನಿಯಮಾನುಸಾರ ನೆಲಸಮಗೊಳಿಸಬೇಕು. ಕಚೇರಿ ಆವರಣ, ಜಿಲ್ಲಾ ಮಧ್ಯಸ್ಥಿಕೆ ಕೇಂದ್ರದಲ್ಲಿ ಸ್ವಚ್ಛತೆ ಕಾಪಾಡಿಕೊಳ್ಳಬೇಕು. ರೆಡ್‍ಕ್ರಾಸ್ ರಕ್ತನಿಧಿ ಕೇಂದ್ರದಲ್ಲಿ1000 ರಕ್ತದ ಯುನಿಟ್ ಗಳ ಸಂಗ್ರಹಣೆಯ ಸಾಮಥ್ರ್ಯವಿದ್ದು, ಪ್ರಸ್ತುತವಾಗಿ 80 ರಿಂದ 100 ರಕ್ತದ ಯುನಿಟ್ ಗಳನ್ನು ಮಾತ್ರ ಪ್ರತಿ ತಿಂಗಳು ಸಂಗ್ರಹಿಸಲಾಗುತ್ತಿದೆ. ಈ ಪ್ರಮಾಣವನ್ನು ಹೆಚ್ಚಿಸಲು ರಕ್ತದಾನ ಶಿಬಿರವನ್ನು ಆಯೋಜಿಸಿ, ಪ್ರತಿ ತಿಂಗಳು 1000 ಯೂನಿಟ್ ರಕ್ತ ಸಂಗ್ರಹಣೆ ಮಾಡಿ ಶೇಖರಣೆ ಮಾಡುವಂತೆ ಅಧಿಕಾರಿಗಳಿಗೆ ಸೂಚಿಸಿದರು.
ಈ ಸಂದರ್ಭದಲ್ಲಿ ಜಿಲ್ಲಾ ಆರೋಗ್ಯ ಮತ್ತು ಕುಟುಂಬ ಕಲ್ಯಾಣ ಅಧಿಕಾರಿಗಳಾದ ಡಾ: ರಾಜಕುಮಾರ ಯರಗಲ, ಸಂತಾನೊತ್ಪತ್ತಿ ಮತ್ತು ಮಕ್ಕಳ ಆರೋಗ್ಯ ಅಧಿಕಾರಿ ಡಾ: ಕೆ. ಡಿ. ಗುಂಡಬಾವಡಿ, ಜಿಲ್ಲಾ ಮಲೇರಿಯಾ ನಿಯಂತ್ರಣ ಅಧಿಕಾರಿ ಡಾ: ಜೈಬುನ್ನೀಸಾ ಬೀಳಗಿ, ಜಿಲ್ಲಾ ಕುಷ್ಠರೋಗ ನಿಯಂತ್ರಣಾಧಿಕಾರಿ ಡಾ: ಸಂಪತ ಗುಣಾರಿ, ರಕ್ತನಿಧಿ ಕೇಂದ್ರದ ಮುಖ್ಯಸ್ಥರಾದ ಡಾ|| ಎನ್.ಜಿ.ದೇಸಾಯಿ, ಕಛೇರಿ ಅಧೀಕ್ಷಕರು ಹೇಮಂತ ಕುಲಕರ್ಣಿ ಸೇರಿದಂತೆ ಇತರೆ ಸಿಬ್ಬಂದಿಗಳು ಉಪಸ್ಥಿತರಿದ್ದರು.