ಆರ್‍ಎಸ್‍ಎಸ್ ತತ್ವ ನಂಬಿ ಯಾರು ಉದ್ಧಾರ ಆಗಿದ್ದಾರೆ ತೋರಿಸಿ: ಪ್ರಿಯಾಂಕ್ ಖರ್ಗೆ

ಕಲಬುರಗಿ,ಸೆ.16-ಆರ್‍ಎಸ್‍ಎಸ್ ತತ್ವ ನಂಬಿ ಯಾರು ಉದ್ಧಾರಾಗಿದ್ದಾರೆ ತೋರಿಸಿ. ಅದರ ತತ್ವ ಪ್ರಜಾಪ್ರಭುತ್ವ ವಿರೋಧಿ, ದೇಶ ವಿರೋಧಿಯಾಗಿದೆ ಎಂದು ಗ್ರಾಮೀಣಾಭಿವೃದ್ಧಿ, ಪಂಚಾಯತ್ ರಾಜ್ ಹಾಗೂ ಜಿಲ್ಲಾ ಉಸ್ತುವಾರಿ ಸಚಿವ ಪ್ರಿಯಾಂಕ್ ಖರ್ಗೆ ಹೇಳಿದರು.
ನಗರದ ಐವಾನ್ ಇ ಶಾಹಿ ಅತಿಥಿಗೃಹದಲ್ಲಿ ಇಂದು ಸುದ್ದಿಗಾರರೊಂದಿಗೆ ಮಾತನಾಡಿದ ಅವರು, ಆರ್‍ಎಸ್‍ಎಸ್‍ನಿಂದ ಸಮಾಜಕ್ಕೆ ಏನೂ ಪ್ರಯೋಜನವಿಲ್ಲ, ದೇಶಭಕ್ತಿಯೂ ಇಲ್ಲ, ಆರ್‍ಎಸ್‍ಎಸ್ ಬಗ್ಗೆ ಮಾತನಾಡಲು ಭಯ ಪಡುವುದಿಲ್ಲ. ಅದರ ತತ್ವ ನಂಬಿ ಯಾರೂ ಉದ್ಧಾರ ಆಗಿಲ್ಲ ಎಂದರು.
ಸರ್ಕಾರದ ಶೈಕ್ಷಣಿಕ ಕೇಂದ್ರಗಳಲ್ಲಿ ವೈಜ್ಞಾನಿಕ ಮನೋಭಾವ ಬೆಳೆಸಿ, ಸಂವಿಧಾನದ ಪ್ರಕಾರ ಯಾವುದೇ ಕಾರ್ಯಕ್ರಮಗಳನ್ನು ಮಾಡಲಿ. ಅದನ್ನು ಬಿಟ್ಟು ಕೇಸರೀಕರಣ ಮಾಡೋದಾದರೆ ಅದು ನಡೆಯಲ್ಲ. ಆರ್‍ಎಸ್‍ಎಸ್‍ನವರಿಗೆ ಅಷ್ಟೊಂದು ಆಸಕ್ತಿ ಇದ್ದರೆ ಶೈಕ್ಷಣಿಕ ಸಂಸ್ಥೆಗಳನ್ನು ಖಾಸಗಿಯಾಗಿ ನಡೆಸಲಿ ಎಂದು ಹೇಳಿದರು.