ಆರ್‍ಎಸ್‍ಎಸ್ ಬ್ಯಾನ್ ವಿಚಾರ: ಬಿಜೆಪಿಗೆ ಮಾರುತ್ತರ ನೀಡಿದ ಸಚಿವ ಪ್ರಿಯಾಂಕ್ ಖರ್ಗೆ

ಕಲಬುರಗಿ,ಮೇ.27-ಪದೇ ಪದೇ ಆರ್‍ಎಸ್‍ಎಸ್ ಬ್ಯಾನ್ ಮಾಡಿ ಎಂದು ಸವಾಲು ಹಾಕುತ್ತಿರುವ ಬಿಜೆಪಿಗರಿಗೆ ಸಚಿವ ಪ್ರಿಯಾಂಕ್ ಖರ್ಗೆ ಸಮಾಜದಲ್ಲಿ ಶಾಂತಿ ಕದಡುವ ಪ್ರಯತ್ನ ಮಾಡಿ ನೋಡಿ ಆಗ ಬಾಬಾಸಾಹೇಬರ ಸಂವಿಧಾನದ ಶಕ್ತಿಯನ್ನು ತೋರಿಸುತ್ತೇವೆ ಎಂದು ಟ್ವಿಟ್ ಮಾಡುವ ಮೂಲಕ ಮಾರುತ್ತರ ನೀಡಿದ್ದಾರೆ.
ಬಿಜೆಪಿಗರು ಪದೇ ಪದೇ ಆರ್‍ಎಸ್‍ಎಸ್ ಬ್ಯಾನ್ ಮಾಡಿ ನೋಡಿ ಅಂತಿದ್ದಾರೆ. ಇಷ್ಟು ದಿನ ಕುರುಡರ ಆಡಳಿತದಲ್ಲಿ ಆಟವಾಡಿದ ಹಾಗಲ್ಲ. ಈಗ ಒಂದೇ ಒಂದು ಬಾರಿ ಸಮಾಜದಲ್ಲಿ ಶಾಂತಿ ಕದಡುವ, ಹೆಣದ ಮೇಲೆ ರಾಜಕೀಯ ಬೇಳೆ ಬೇಯಿಸುವ, ಅಂಸವಿಧಾನಿಕ ಚಟುವಟಿಕೆ ಮಾಡುವ ಪ್ರಯತ್ನ ಮಾಡಿ ನೋಡಿ. ಆಗ ಬಾಬಾಸಾಹೇಬ ಅಂಬೇಡ್ಕರ್ ಅವರ ಸಂವಿಧಾನದ ಪವರ್ ನಾವು ತೋರಿಸುತ್ತೇವೆ ಎಂದು ಮಾರುತ್ತರ ನೀಡಿದ್ದಾರೆ.