ಆರ್ಯ ಈಡಿಗರ ಸಂಘದ ಉಪಾಧ್ಯಕ್ಷ ಉದಯ್ ನಿಧನ

ಬೆಂಗಳೂರು,ಮೇ.೨- ಸುಧಾ ಕೋ- ಆಪರೇಟಿವ್ ಬ್ಯಾಂಕ್ ಉಪಾಧ್ಯಕ್ಷರು ಹಾಗೂ ಕರ್ನಾಟಕ ಪ್ರದೇಶ ಆರ್ಯ ಈಡಿಗರ ಸಂಘದ ಉಪಾಧ್ಯಕ್ಷ ಎನ್. ಉದಯ್ ಅವರು ನಿನ್ನೆ ನಗರದಲ್ಲಿ ನಿಧನ ಹೊಂದಿದ್ದಾರೆ.
ಮೃತರಿಗೆ ಸುಮಾರು ೭೦ ವರ್ಷ ವಂiiಸ್ಸಾಗಿತ್ತು, ೧೯೮೪ ರಿಂದಲೂ ಸುಧಾ ಕೋ- ಆಪರೇಟಿವ್ ಬ್ಯಾಂಕ್‌ನ ನಿರ್ದೇಶಕರಾಗಿದ್ದ ಎನ್.ಉದಯ್ ಅವರು ೧೯೯೧ ರಿಂದ ೧೯೯೭ ಮತ್ತು ೧೯೯೯ ರಿಂದ ೨೦೦೦ ರವರೆಗೆ ಖಜಾಂಚಿಯಾಗಿ ಸೇವೆ ಸಲ್ಲಿಸಿದ್ದರು.
ಕರ್ನಾಟಕ ಪ್ರದೇಶ ಆರ್ಯ ಈಡಿಗರ ಸಂಘದ ಉಪಾಧ್ಯಕ್ಷರಾಗಿದ್ದ ಅವರು, ಅಪಾರ ಬಂಧು-ಬಳಗ ಮತ್ತು ಸ್ನೇಹಿತರನ್ನು ಅಗಲಿದ್ದಾರೆ.
ಮೃತರ ಆತ್ಮಕ್ಕೆ ದೇವರು ಚಿರಶಾಂತಿ ನೀಡಲಿ, ಈ ದುಃಖವನ್ನು ತಡೆದುಕೊಳ್ಳುವ ಶಕ್ತಿಯನ್ನು ಭಗವಂತ ಇವರ ಕುಟುಂಬ ವರ್ಗದವರಿಗೆ ಕರುಣಿಸಲಿ ಎಂದು ಬ್ಯಾಂಕ್‌ನ ಅಧ್ಯಕ್ಷರು, ನಿರ್ದೇಶಕರು ಮತ್ತು ಸಿಬ್ಬಂದಿ ವರ್ಗದವರು ಪ್ರಾರ್ಥಿಸಿದ್ದಾರೆ.
ಎನ್. ಉದಯ್ ಅವರ ಆತ್ಮಕ್ಕೆ ಶಾಂತಿ ಸಿಗಲಿ ಎಂದು ಕರ್ನಾಟಕ ಪ್ರದೇಶ ಆರ್ಯ ಈಡಿಗರ ಸಂಘದ ಅಧ್ಯಕ್ಷರು, ನಿರ್ದೇಶಕ ಮಂಡಳಿಯ ಸದಸ್ಯರು ಸಂತಾಪ ಸೂಚಿಸಿದ್ದಾರೆ.