ಆರ್‌ಟಿಪಿಎಸ್ ನಾಲ್ಕನೇ ಘಟಕ – ಬೆಂಕಿ ಅವಘಡ

ರಾಯಚೂರು.ನ.11- ರಾಯಚೂರು ಶಾಖೋತ್ಪನ್ನ ವಿದ್ಯುತ್ ಕೇಂದ್ರದ 4 ನೇ ಘಟಕದಲ್ಲಿ ವಿದ್ಯುತ್ ಪರಿವರ್ತಕದಲ್ಲಿ ಬೆಂಕಿ ಕಾಣಿಸಿಕೊಂಡ ಘಟನೆ ನಿನ್ನೆ ರಾತ್ರಿ ನಡೆದಿದೆ.
ಪರಿವರ್ತಕದಲ್ಲಿ ಬೆಂಕಿ ಕಾಣಿಸಿಕೊಂಡ ಕೆಲವೇ ಕ್ಷಣಗಳಲ್ಲಿ ಬೆಂಕಿ ಭುಗಿಲೆದ್ದು, ಕೇಂದ್ರದಲ್ಲಿ ಆವರಿಸಿಕೊಂಡಿತ್ತು. ಈ ಘಟನೆಗೆ ನಿಖರ ಕಾರಣ ತಿಳಿದು ಬಂದಿಲ್ಲ. ಸ್ಥಳೀಯ ತಾಂತ್ರಿಕರ ಮಾಹಿತಿಯಂತೆ ಆಯಿಲ್ ಲೀಕೇಜ್ ಅಥವಾ ವಿದ್ಯುತ್ ಸ್ಪರ್ಶ ಈ ಘಟನೆಗೆ ಕಾರಣವಾಗಿದೆಂದು ಹೇಳಲಾಗುತ್ತಿದೆ. ಈ ಘಟನೆ ನಡೆಯುತ್ತಿದ್ದಂತೆ ತಕ್ಷಣವೇ ಅಗ್ನಿಶಾಮಕದಳಕ್ಕೆ ಮಾಹಿತಿ ನೀಡಿದ ಸ್ಥಳೀಯ ಅಧಿಕಾರಿಗಳು ಎಚ್ಚರಿಕೆಯಿಂದ ಯಾವುದೇ ಜೀವಹಾನಿ ಸಂಭವಿಸಿಲ್ಲ. ಈ ಘಟನೆಯಿಂದ ಲಕ್ಷಾಂತರ ರೂ. ಹಾನಿಯಾಗಿದೆಂದು ಅಧಿಕಾರಿಗಳು ತಿಳಿಸಿದ್ದಾರೆ.