ಆರ್‌ಪಿಐ ಸಮಾವೇಶಕ್ಕೆ ಸಿದ್ದತೆ

ತುಮಕೂರು, ಸೆ. ೨೨- ನಗರದ ಡಾ.ಗುಬ್ಬಿವೀರಣ್ಣ ಕಲಾಕ್ಷೇತ್ರದಲ್ಲಿ ಅ. ೧೭ರಂದು ರಿಪಬ್ಲಿಕನ್ ಪಾರ್ಟಿ ಆಫ್ ಇಂಡಿಯಾ ವತಿಯಿಂದ ಕಾರ್ಯಕರ್ತರ ಸಮಾವೇಶ ನಡೆಸಲಾಗುವುದು ಎಂದು ರಿಪಬ್ಲಿಕನ್ ಪಾರ್ಟಿ ಆಫ್ ಇಂಡಿಯಾ ರಾಜ್ಯಾಧ್ಯಕ್ಷ ಎಂ ವೆಂಕಟಸ್ವಾಮಿ ತಿಳಿಸಿದರು.
ಇಲ್ಲಿನ ಕನ್ನಡ ಭವನದಲ್ಲಿ ರಿಪಬ್ಲಿಕನ್ ಪಾರ್ಟಿ ಆಫ್ ಇಂಡಿಯಾ ವತಿಯಿಂದ ಪಕ್ಷದ ಕಾರ್ಯಕರ್ತರಿಗಾಗಿ ಏರ್ಪಡಿಸಿದ್ದ ಒಂದು ದಿನದ ಕಾರ್ಯಾಗಾರದಲ್ಲಿ ಭಾಗವಹಿಸಿ ಅವರು ಮಾತನಾಡಿದರು.
ಪಕ್ಷ ಸಂಘಟನೆಗೆ ಹಾಗೂ ಪ್ರಸ್ತುತ ದಿನಗಳಲ್ಲಿ ದೇಶದ ಜನರು ಅನುಭವಿಸಿರುವ ಆರ್ಥಿಕ ಹೊಡೆತ, ಜನರು ಎದುರಿಸುತ್ತಿರುವ ಸಮಸ್ಯೆಗಳು ಹಾಗೂ ಸಾರ್ವಜನಿಕರ ಹಕ್ಕುಗಳು ಸೇರಿದಂತೆ ಹಲವು ವಿಷಯಗಳ ಬಗ್ಗೆ ಕಾರ್ಯಗಾರದಲ್ಲಿ ಭಾಗವಹಿಸಿದ್ದ ಪಕ್ಷದ ಕಾರ್ಯಕರ್ತರು, ಮುಖಂಡರ ನಡುವೆ ಸಂವಾದ ನಡೆಯಿತು.
ರಿಪಬ್ಲಿಕನ್ ಪಾರ್ಟಿ ಆಫ್ ಇಂಡಿಯಾ
ಪಕ್ಷದ ರಾಜ್ಯಾಧ್ಯಕ್ಷ ವೆಂಕಟಸ್ವಾಮಿ ಮಾತನಾಡಿ, ತುಮಕೂರು ಜಿಲ್ಲೆಯಲ್ಲಿ ಪಕ್ಷವನ್ನು ಸಂಘಟಿಸುವ ಸಲುವಾಗಿ ಪಕ್ಷ ಸಂಘಟನೆ ಬಗ್ಗೆ ಚರ್ಚೆ ನಡೆಸಿದರು.
ಮುಂದಿನ ತಿಂಗಳು ನಡೆಯುವ ಕಾರ್ಯಕರ್ತರ ಸಮಾವೇಶಕ್ಕೆ ಜಿಲ್ಲಾ ಹಾಗೂ ತಾಲ್ಲೂಕುಗಳಿಂದ ಪಕ್ಷದ ಕಾರ್ಯಕರ್ತರು ಸಮಾವೇಶದಲ್ಲಿ ಭಾಗವಹಿಸುವ ಸಲುವಾಗಿ ಚರ್ಚೆ ನಡೆಸಿದರು.
ಕಾರ್ಯಾಗಾರದಲ್ಲಿ ದಲಿತ ಸಂಘರ್ಷ ಸಮಿತಿಯ ರಾಜ್ಯ ಮುಖಂಡ ತಿಮ್ಮಯ್ಯ, ಪ್ರಜಾ ವಿಮೋಚನಾ ಚಳವಳಿಯ ರಾಜ್ಯ ಮುಖಂಡ ಬಸವರಾಜು ಇಂಡಲವಾಡಿ, ರಿಪಬ್ಲಿಕನ್ ಪಾರ್ಟಿ ಆಫ್ ಇಂಡಿಯಾದ ಪಿಲ್ಲ ರಾಜು ಬೋಸಪ್ಪ, ರಿಪಬ್ಲಿಕನ್ ಪಾರ್ಟಿ ಆಫ್ ಇಂಡಿಯಾದ ಜಿಲ್ಲಾ ಗೌರವಾಧ್ಯಕ್ಷ ರಾಮಯ್ಯ, ಜಿಲ್ಲಾಧ್ಯಕ್ಷ ನಟರಾಜು, ಸೇರಿದಂತೆ ವಿವಿಧ ಅಧ್ಯಕ್ಷರು ಪದಾಧಿಕಾರಿಗಳು ಹಾಗೂ ಕಾರ್ಯಕರ್ತರು ಭಾಗವಹಿಸಿದ್ದರು.