ಆರ್ ಆರ್ ನಗರಕ್ಕೆ ಕೇಂದ್ರ ಪಡೆ ನಿಯೋಜನೆ

ಬೆಂಗಳೂರು,ಅ.೩೦-ರಾಜರಾಜೇಶ್ವರಿ ನಗರ ವಿಧಾನಸಭಾ ಕ್ಷೇತ್ರದ ಉಪ ಚುನಾವಣೆಯನ್ನು ಮುಕ್ತ ಹಾಗೂ ನ್ಯಾಯಸಮ್ಮತವಾಗಿ ನಡೆಸಲು ಭದ್ರತೆಯನ್ನು ಹೆಚ್ಚಿಸಲಾಗಿದ್ದು, ಕೇಂದ್ರ ಕೈಗಾರಿಕಾ ಭದ್ರತಾ ಪಡೆಯ ತುಕಡಿಗಳನ್ನು ನಿಯೋಜಿಸ ಲಾಗಿದೆ.
ರಾಜ ರಾಜೇಶ್ವರಿ ನಗರ ವಿಧಾನಸಭಾ ಕ್ಷೇತ್ರವು ಪಶ್ಚಿಮ ವಿಭಾಗದ ೫, ಉತ್ತರ ವಿಭಾಗದ ೮ ಪೊಲೀಸ್ ಠಾಣೆಗಳ ವ್ಯಾಪ್ತಿಯ ಸೂಕ್ಷ್ಮ ಅತಿ ಸೂಕ್ಷ್ಮ ಪ್ರದೇಶದಲ್ಲಿ ಕೈಗಾರಿಕಾ ಭದ್ರತಾ ಪಡೆಯ ತುಕಡಿಗಳನ್ನು ನಿಯೋಜಿಸಿ ಭದ್ರತೆಯನ್ನು ಬಿಗಿಗೊಳಿಸಲಾಗಿದೆ.
ಉತ್ತರ ವಿಭಾಗದ ಪೊಲೀಸ್ ಠಾಣೆಗಳಿಗೆ ಇಂದಿನಿಂದ ಹೆಚ್ಚುವರಿಯಾಗಿ ೧೦ ಇನ್ಸ್‌ಪೆಕ್ಟರ್ ಗಳು ೩೬ ಸಬ್‌ಇನ್ಸ್ ಪೆಕ್ಟರ್ ಗಳು, ೨೦೦ ಕಾನ್‌ಸ್ಟೇಬಲ್ ಮತ್ತು ಹೆಡ್ ಕಾನ್‌ಸ್ಟೇಬಲ್‌ಗಳು, ೪ ಕೆಎಸ್‌ಆರ್‍ಪಿ, ೩ ಸಿಎಆರ್ ತುಕಡಿಗಳನ್ನು ನಿಯೋಜನೆ ಮಾಡಲಾಗಿದೆ.
ಪಶ್ಚಿಮ ವಿಭಾಗದ ಐದು ಪೊಲೀಸ್ ಠಾಣೆಗಳಿಗೆ ಕೇಂದ್ರ ಭದ್ರತಾ ಪಡೆಯ ತುಕ್ಕಡಿಗಳನ್ನು ನಿಯೋಜಿಸಲಾಗಿದೆ. ಈ ಮೂಲಕ ಕ್ಷೇತ್ರದಲ್ಲಿ ಕಾನೂನು ಸುವ್ಯವಸ್ಥೆ ಕಾಪಾಡುವುದು. ಶಾಂತಿಯುತ ಚುನಾವಣೆ ನಡೆಸಲು ಕ್ರಮ ಕೈಗೊಳ್ಳಲಾಗಿದೆ ಎಂದು ಹಿರಿಯ ಪೊಲೀಸ್ ಅಧಿಕಾರಿಗಳು ತಿಳಿಸಿದ್ದಾರೆ. ಮತದಾನದ ದಿನಾಂಕ ಸಮೀಪಿಸುತ್ತಿರುವ ಹಿನ್ನೆಲೆಯಲ್ಲಿ ಚುನಾವಣಾ ಅಕ್ರಮ ತಡೆಗೆ ಈ ಕ್ರಮ ಕೈಗೊಳ್ಳಲಾಗಿದೆ.