ಆರ್ ಧ್ರುವನಾರಾಯಣ ಹಠಾತ್ ನಿಧನ: ಬೆಣ್ಣೂರಕರ್ ಸಂತಾಪ

ಚಿತ್ತಾಪೂರ: ಮಾ.12:ಕರ್ನಾಟಕ ಪ್ರದೇಶ ಕಾಂಗ್ರೆಸ್ ಸಮಿತಿ ಕಾರ್ಯಾಧ್ಯಕ್ಷ ಧ್ರುವನಾರಾಯಣನವರು ಶನಿವಾರ ಬೆಳಗಿನ ಜಾವ ತೀವ್ರ ಹೃದಯಾಘಾತದಿಂದ ಹಠಾತ್ ನಿಧನರಾಗಿದ್ದು ನನ್ನ ಮನಸ್ಸಿಗೆ ಆಘಾತವಾಗಿದೆ.

ಚಾಮರಾಜನಗರ ಜಿಲ್ಲೆಯಲ್ಲಿ ಉತ್ತಮ ಸೇವೆ ಸಲ್ಲಿಸಿದ್ದರು. ಅಭಿವೃದ್ಧಿ ಕೆಲಸಗಳಿಂದ ಜಿಲ್ಲೆಯ ಜನರ ಮನಸು ಗೆದ್ದಿದ್ದರು. ಅವರ ಅಗಲಿಕೆಯಿಂದ ತುಂಬಾ ದುಃಖ ಆಗಿದೆ. ಕುಟುಂಬಸ್ಥರಿಗೆ ದುಃಖ ಸಹಿಸುವ ಶಕ್ತಿ ದೇವರು ನೀಡಲಿ ಎಂದು ಬಿಜೆಪಿ ಜಿಲ್ಲಾ ಉಪಾಧ್ಯಕ್ಷ ಹಾಗೂ ಚಿತ್ತಾಪೂರ ಮೀಸಲು ಮತ ಕ್ಷೇತ್ರದ ಪ್ರಬಲ ಆಕಾಂಕ್ಷಿ ಬಸವರಾಜ ಬೆಣ್ಣೂರಕರ್ ಸಂತಾಪ ಸೂಚಿಸಿದ್ದಾರೆ.