ಆರ್. ವಿ. ರಸ್ತೆ – ಯಲಚೇನಹಳ್ಳಿ ಮೆಟ್ರೋ ಸಂಚಾರ ಸ್ಥಗಿತ

ಬೆಂಗಳೂರು, ನ.೧೪- ಹಸಿರು ಮಾರ್ಗದ ನಮ್ಮ ಮೆಟ್ರೋ ಕಾರ್ಯಾಚರಣೆಯಲ್ಲಿ ವ್ಯತ್ಯಯ ಉಂಟಾಗಲಿದ್ದು, ಆರ್.ವಿ ರಸ್ತೆಯಿಂದ ಯಲಚೇನಹಳ್ಳಿಯವರೆಗೆ ಮೂರು ದಿನಗಳ ಕಾಲ ಮೆಟ್ರೋ ಕಾರ್ಯಾಚರಣೆ ಸ್ಥಗಿತಗೊಳ್ಳಳಿದೆ.
೨ನೇ ಹಂತದ ಯಲಚೇನಹಳ್ಳಿಯಿಂದ ಅಂಜನಾಪುರದ ಮಾರ್ಗದಲ್ಲಿ ಮೆಟ್ರೋ ಕಾಮಗಾರಿ ನಡೆಯುತ್ತಿದೆ. ಹೀಗಾಗಿ ಇದೇ ತಿಂಗಳ ೧೭ರಿಂದ ೧೯ರವರೆಗೆ ಮೆಟ್ರೋ ಕಾರ್ಯಾಚರಣೆ ಸ್ಥಗಿತವಾಗಲಿದೆ ಎಂದು ಬಿಎಂಆರ್‌ಸಿಎಲ್ ತಿಳಿಸಿದೆ.