ಆರ ಚಿತ್ರದ ಟ್ರೈಲರ್ ಬಿಡುಗಡೆ

ಹೊಸಬರ ಆರ ಚಿತ್ರ ಬಿಡುಗಡೆಯ ಹೊಸ್ತಿಲಲ್ಲಿ ಬಂದು ನಿಂತಿದೆ. ಮುಂದಿನ ವಾರ ಚಿತ್ರ ರಾಜ್ಯಾದ್ಯಂತ ತೆರೆಗೆ ಬರಲಿದೆ. ಈ ಹಿನ್ನೆಲೆಯಲ್ಲಿ ಚಿತ್ರದ ಟ್ರೈಲರ್ ಬಿಡುಗಡೆಯಾಗಿದೆ.

ಸಸ್ಪೆನ್ಸ್, ಪಯಣ, ಪ್ರೀತಿ, ದುಷ್ಟ ಶಕ್ತಿ, ದೈವ ಸಂಘರ್ಷದ ಕಥಾಹಂದರ ಒಳಗೊಂಡಿರುವ ಸ್ಪಿರಿಚುಯಲ್ ಡ್ರಾಮಾ ಮತ್ತು ಥ್ರಿಲ್ಲರ್ ಜಾನರ್ ಸಿನಿಮಾ ‘ಆರ’.  ಚಿತ್ರವನ್ನು ಅಶ್ವಿನ್ ವಿಜಯಮೂರ್ತಿ ನಿರ್ದೇಶಿಸಿದ್ದಾರೆ.

ಸಿನಿಮಾ, ಸಂಪೂರ್ಣ ಹೊಸ ಪ್ರತಿಭೆಗಳಿಂದ, ಹೊಸತನದಿಂದ ಕೂಡಿದೆ. ರೋಹಿತ್ ಹಾಗೂ ದೀಪಿಕಾ ಆರಾಧ್ಯ ‘ಆರ’ ಚಿತ್ರದ ಪ್ರಮುಖ ಪಾತ್ರಗಳಲ್ಲಿ ನಟಿಸಿದ್ದಾರೆ. ಆನಂದ್ ನೀನಾಸಂ ಸತ್ಯ ರಾಜ್ ನಿಖಿಲ್ ಶ್ರೀಪಾದ್ ಪ್ರತೀಕ್ ಲೋಕೇಶ್ ಹಾಗೂ ಇನ್ನಿತರರು ಪ್ರಮುಖ ಪಾತ್ರಗಳಲ್ಲಿ ನಟಿಸಿದ್ದಾರೆ.

ನಿರ್ದೇಶಕ ಅಶ್ವಿನ್ ವಿಜಯಮೂರ್ತಿ ಮಾತನಾಡಿ, ಒಬ್ಬ ಹುಡುಗನ ಜರ್ನಿ ಕಥೆ ಇದು. ಆ ಜರ್ನಿಯಲ್ಲಿ ಅವನು ಆಧ್ಯಾತ್ಮಿಕವಾಗಿ ಯಾವ ರೀತಿ ಸವಾಲುಗಳನ್ನು ಎದುರಿಸುತ್ತಾನೆ. ಅದು ಯಾವುದೇ ಮುಖಾಂತರವಾಗಿಯಾದರು ಬರಬಹುದು. ಹೆಣ್ಣಿನ ಮೂಲಕವಾದರೂ ಬರಬಹುದು. ದುಡ್ಡಿನ ಮೂಲಕವಾದರು ಬರಬಹುದು. ಸಂಬಂಧಗಳ ಮೂಲಕವಾದರ ಬರಬಹುದು ಎನ್ನವುದು ಚಿತ್ರದ ಕಥೆ ಎಂದರು.

ಬಹುತೇಕ ಚಿತ್ರೀಕರಣ ಉಡುಪಿಯಲ್ಲಿ ನಡೆದಿದೆ. ಚಿತ್ರದಲ್ಲಿ ಉಡುಪಿಯ ಕನ್ನಡವನ್ನು ಬಳಸಲಾಗಿದೆ. ಸುಜಾತ ಚಡಗ, ಚಂದ್ರಶೇಖರ್ ಸಿ ಜಂಬಿಗಿ ನಿರ್ಮಾಣ ಮಾಡಿದ್ದಾರೆ. ಶ್ರೀಹರಿ ಛಾಯಾಗ್ರಾಹಣ, ಗಿರೀಶ್ ಹೊತ್ತೂರ್ ಸಂಗೀತವಿದೆ.