ವಿಜಯಪುರ: ಜೂ.18:ಆಲಮೇಲ ತಾಲೂಕಿನ ವಿವಿಧ 13 ಗ್ರಾಮ ಪಂಚಾಯತಿಗಳ ಅಧ್ಯಕ್ಷ ಹಾಗೂ ಉಪಾಧ್ಯಕ್ಷರ ಸ್ಥಾನಗಳಿಗೆ ಮೀಸಲಾತಿ ನಿಗದಿಪಡಿಸಿ ಜಿಲ್ಲಾಧಿಕಾರಿ ಡಾ.ವಿಜಯಮಹಾಂತೇಶ ದಾನಮ್ಮನವರ ಅವರು ಘೋಷಿಸಿದ್ದಾರೆ.
ಆಲಮೇಲ ತಾಲೂಕಿನ ಕಡಣಿ ಗ್ರಾಮ ಪಂಚಾಯತ್ ಅಧ್ಯಕ್ಷ ಸ್ಥಾನಕ್ಕೆ ಸಾಮಾನ್ಯ ಹಾಗೂ ಉಪಾಧ್ಯಕ್ಷ ಸ್ಥಾನಕ್ಕೆ ಪರಿಶಿಷ್ಟ ಜಾತಿ ಮಹಿಳೆಗೆ ಮೀಸಲಿರಿಸಲಾಗಿದೆ. ದೇವಣಗಾಂವ್ ಅಧ್ಯಕ್ಷ -ಸಾಮಾನ್ಯ ಮಹಿಳೆ ಹಾಗೂ ಉಪಾಧ್ಯಕ್ಷ-ಸಾಮಾನ್ಯ ಮಹಿಳೆಗೆ ಮೀಸಲಿರಿಸಲಾಗಿದೆ.
ಬೊಮ್ಮನಹಳ್ಳಿ ಗ್ರಾಮ ಪಂಚಾಯತಿಯ ಅಧ್ಯಕ್ಷ-ಪರಿಶಿಷ್ಟ ಜಾತಿ ಹಾಗೂ ಉಪಾಧ್ಯಕ್ಷ-ಹಿಂದುಳಿದ ವರ್ಗ-ಅ ಮಹಿಳೆ, ದೇವರನಾವದಗಿ ಗ್ರಾಮ ಪಂಚಾಯತಿಯ ಅಧ್ಯಕ್ಷ-ಪರಿಶಿಷ್ಟ ಜಾತಿ ಮಹಿಳೆ ಹಾಗೂ ಉಪಾಧ್ಯಕ್ಷ-ಸಾಮಾನ್ಯ ವರ್ಗಕ್ಕೆ ಮೀಸಲಿರಿಸಲಾಗಿದೆ.
ಬಗಲೂರು ಗ್ರಾಮ ಪಂಚಾಯತಿಯ ಅಧ್ಯಕ್ಷ-ಹಿಂದುಳಿದ ವರ್ಗ-ಬ ಹಾಗೂ ಉಪಾಧ್ಯಕ್ಷ- ಪರಿಶಿಷ್ಟ ಜಾತಿ, ಮೊರಟಗಿ ಗ್ರಾಮ ಪಂಚಾಯತಿಯ ಅಧ್ಯಕ್ಷ-ಪರಿಶಿಷ್ಟ ಜಾತಿ ಮಹಿಳೆ ಹಾಗೂ ಉಪಾಧ್ಯಕ್ಷ-ಸಾಮಾನ್ಯ ಮಹಿಳೆಗೆ ಮೀಸಲಿರಿಸಲಾಗಿದೆ.
ಮಲಘಾಣ ಗ್ರಾಮ ಪಂಚಾಯತಿಯ ಅಧ್ಯಕ್ಷ-ಸಾಮಾನ್ಯ ಹಾಗೂ ಉಪಾಧ್ಯಕ್ಷ-ಸಾಮಾನ್ಯ ಮಹಿಳೆ, ಕೋರಳ್ಳಿ ಗ್ರಾಮ ಪಂಚಾಯತಿಯ ಅಧ್ಯಕ್ಷ-ಸಾಮಾನ್ಯ ಹಾಗೂ ಉಪಾಧ್ಯಕ್ಷ- ಹಿಂದುಳಿದ ವರ್ಗ-ಅ ಮಹಿಳೆಗೆ ಮೀಸಲಿರಿಸಲಾಗಿದೆ.
ಬಳಗಾನೂರ ಗ್ರಾಮ ಪಂಚಾಯತಿಯ ಅಧ್ಯಕ್ಷ-ಹಿಂದುಳಿದ ವರ್ಗ ಅ ಮಹಿಳೆ ಹಾಗೂ ಉಪಾದ್ಯಕ್ಷ-ಸಾಮಾನ್ಯ, ಗಬಸಾವಳಗಿ ಗ್ರಾಮ ಪಂಚಾಯತಿಯ ಅಧ್ಯಕ್ಷ-ಹಿಂದುಳಿದ ವರ್ಗ ಅ ಮಹಿಳೆ ಹಾಗೂ ಉಪಾಧ್ಯಕ್ಷ-ಸಾಮಾನ್ಯ ವರ್ಗಕ್ಕೆ ಮೀಸಲಿರಿಸಲಾಗಿದೆ.
ಗುತ್ತರಗಿ ಗ್ರಾಮ ಪಂಚಾಯತಿಯ ಅಧ್ಯಕ್ಷ-ಸಾಮಾನ್ಯ ಮಹಿಳೆ ಹಾಗೂ ಉಪಾಧ್ಯಕ್ಷ-ಸಾಮಾನ್ಯ, ರಾಮನಹಳ್ಳಿ ಗ್ರಾಮ ಪಂಚಾಯತಿಯ ಅಧ್ಯಕ್ಷ-ಸಾಮಾನ್ಯ ಹಾಗೂ ಉಪಾಧ್ಯಕ್ಷ ಹಿಂದುಳಿದ ವರ್ಗ ಬ, ಮತ್ತು ಕಕ್ಕಳಮೇಲಿ ಗ್ರಾಮ ಪಂಚಾಯತಿಯ ಅಧ್ಯಕ್ಷ ಸ್ಥಾನ ಸಾಮಾನ್ಯ ಮಹಿಳೆ ಹಾಗೂ ಉಪಾಧ್ಯಕ್ಷ ಸ್ಥಾನ ಸಾಮಾನ್ಯ ವರ್ಗಕ್ಕೆ ಮೀಸಲಿರಿಸಲಾಗಿದೆ.
ಮಿನಿ ವಿಧಾನಸೌಧ ನಿರ್ಮಾಣ- ಪ್ರಸ್ತಾವನೆ ಸಲ್ಲಿಸಲು ಸೂಚನೆÉ : ಜಿಲ್ಲಾಧಿಕಾರಿಗಳಾದ ಡಾ.ವಿಜಯಮಹಾಂತೇಶ ದಾನಮ್ಮನವರ ಅವರು ಇಂದು ಆಲಮೇಲದ ರಾಯಲ್ ಫಂಕ್ಷನ್ ಹಾಲ್‍ನಲ್ಲಿ ಜರುಗಿದ ಮೀಸಲಾತಿ ನಿಗದಿಗೊಳಿಸುವ ಸಭೆಯ ನಂತರ ಆಲಮೇಲ ನಗರದಲ್ಲಿ ಮಿನಿ ವಿಧಾನಸೌಧ ನಿರ್ಮಾಣದ ಉದ್ದೇಶಿತ ಸ್ಥಳಕ್ಕೆ ಸಿಂದಗಿ ಶಾಸಕರಾದ ಅಶೋಕ ಮನಗೂಳಿ ಅವರೊಂದಿಗೆ ಭೇಟಿ ನೀಡಿ ಪರಿಶೀಲನೆ ನಡೆಸಿ, ಯುಕೆಪಿ ಕ್ವಾಟರ್ಸ್ ಸರ್ವೆ ನಂಬರ್ 606ರಲ್ಲಿ ಮಿನಿವಿಧಾನಸೌಧ ನಿರ್ಮಾಣಕ್ಕೆ ಪ್ರಸ್ತಾವನೆ ಸಿದ್ಧಪಡಿಸಿ ಸಲ್ಲಿಸುವಂತೆ ತಹಶೀಲ್ದಾರರಿಗೆ ಸೂಚನೆ ನೀಡಿದರು.
ಈ ಸಂದರ್ಭದಲ್ಲಿ ಇಂಡಿ ಉಪವಿಭಾಗಾಧಿಕಾರಿ ರಾಮಚಂದ್ರ ಗಡದೆ, ಆಲಮೇಲ ತಹಶೀಲ್ದಾರ ಸುರೇಶ ಚವಲರ , ತಾಲೂಕಾ ಪಂಚಾಯತ್ ಕಾರ್ಯನಿರ್ವಾಹಕ ಸೇರಿದಂತೆ ವಿವಿಧ ಅಧಿಕಾರಿಗಳು ಉಪಸ್ಥಿತರಿದ್ದರು.