ಆಳಂದ ಆಸ್ಪತ್ರೆಗೆ ಜಿ.ಪಂ ಸದಸ್ಯ ಹರ್ಷಾನಂದ ಗುತ್ತೇದಾರ ಭೇಟಿ, ಪರಿಶೀಲನೆ

ಆಳಂದ:ಮೇ.21: ಪಟ್ಟಣದ ಸರ್ಕಾರಿ ಸಾರ್ವಜನಿಕ ಆಸ್ಪತ್ರೆಗೆ ಜಿ.ಪಂ ಸದಸ್ಯ ಹರ್ಷಾನಂದ ಗುತ್ತೇದಾರ ಭೇಟಿ ನೀಡಿ ಆಸ್ಪತ್ರೆಯ ವ್ಯವಸ್ಥೆಯನ್ನು ಪರಿಶೀಲಿಸಿದರು.

ಕೋರೋನಾ ಸೋಂಕಿತರಿಗೆ ಯಾವುದೇ ರೀತಿಯ ತೊಂದರೆಯಾಗದಂತೆ ಎಲ್ಲ ರೀತಿಯ ವ್ಯವಸ್ಥೆ ಕಲ್ಪಿಸಬೇಕು ಅಲ್ಲದೇ ಸೋಂಕಿತರಿಗೆ ಆತ್ಮಸ್ಥೈರ್ಯ ತುಂಬುವ ಕಾರ್ಯ ಮಾಡಬೇಕು ಎಂದು ತಿಳಿಸಿದರು.

ಇತ್ತೀಚಿಗೆ ಜಿಲ್ಲಾ ಉಸ್ತುವಾರಿ ಸಚಿವ ಮುರುಗೇಶ ನಿರಾಣಿ ಭೇಟಿ ನೀಡಿದ ವೇಳೆ ತಮ್ಮ ಎಸ್‍ಆರ್‍ಜಿ ಫೌಂಡೇಶನ್ ವತಿಯಿಂದ ದೇಣಿಗೆಯಾಗಿ ನೀಡಿದ 15 ಆಕ್ಸಿಜನ್ ಸಿಲಿಂಡರ್ ಅಳವಡಿಕೆ ಕಾರ್ಯವನ್ನು ವೀಕ್ಷಿಸಿದರು. ಆಸ್ಪತ್ರೆಯಲ್ಲಿ ಅಗತ್ಯವಿರುವ ಬೆಡ್‍ಗಳನ್ನು ಹೆಚ್ಚಿಸಿ ಸೋಂಕಿತರಿಗೆ ಅನೂಕೂಲವಾಗುವಂತೆ ಮಾಡಬೇಕು ಎಂದು ವೈದ್ಯರಿಗೆ ಸೂಚಿಸಿದರು.

ಈ ಸಂದರ್ಭದಲ್ಲಿ ಆಸ್ಪತ್ರೆಯ ವೈದ್ಯರು ಮತ್ತು ವೈದ್ಯಕೀಯ ಸಿಬ್ಬಂದಿ ಉಪಸ್ಥಿತರಿದ್ದರು.