ಆಳಂದ ತಾಲ್ಲೂಕಿನಲ್ಲಿ ಇಂದಿನಿಂದ ಮೂರುದಿನ ಮದ್ಯ ಮಾರಾಟ ನಿಷೇಧ

ಕಲಬುರಗಿ,ಜ.14-ನೆರೆಯ ಮಹಾರಾಷ್ಟ್ರ ರಾಜ್ಯದಲ್ಲಿ ಜ.18 ರಂದು ಗ್ರಾಮ ಪಂಚಾಯತಿ ಚುನಾವಣೆಗಳು ನಡೆಯಲಿರುವ ಹಿನ್ನೆಲೆಯಲ್ಲಿ ಕರ್ನಾಟಕ-ಮಹಾರಾಷ್ಟ್ರ ಗಡಿ ತಾಲ್ಲೂಕು ಆಳಂದನಲ್ಲಿ ಜ.14, 15 ಮತ್ತು 18 ರಂದು ಎಲ್ಲಾ ತರಹದ ಮದ್ಯ ಮಾರಾಟ ನಿಷೇಧಿಸಿ ಜಿಲ್ಲಾಧಿಕಾರಿ ವಿ.ವಿ.ಜ್ಯೋತ್ಸ್ನಾ ಆದೇಶ ಹೊರಡಿಸಿದ್ದಾರೆ.
ಮಹಾರಾಷ್ಟ್ರದ ಓಮರಾಬಾದನ ಕಲೆಕ್ಟರ್ ಅವರ ಕೋರಿಕೆಯ ಮೇರೆಗೆ ಶಾಂತಿ, ಸುವ್ಯವಸ್ಥೆ ಕಾಪಾಡುವ ದೃಷ್ಟಿಯಿಂದ ಈ ಮೂರುದಿನ ಆಳಂದ ತಾಲ್ಲೂಕಿನಾದ್ಯಂತ ಮದ್ಯ ಮಾರಾಟ ನಿಷೇಧಿಸಲಾಗಿದೆ ಎಂದು ಅವರು ತಿಳಿಸಿದ್ದಾರೆ.