ಆಳಂದ ವಿಕೆಜಿ ಪದವಿ ಕಾಲೇಜು ಸ್ವಾಗತ ಮತ್ತು ಬೀಳ್ಕೊಡುವ ಸಮಾರಂಭ

ಕಲಬುರಗಿ:ಸೆ.17:ಯಶಸ್ಸು ಗಳಿಸಲು ಕಠಿಣ ಪರಿಶ್ರಮ ಮತ್ತು ಸಮಯ ಪ್ರಜ್ಞೆ ಮುಖ್ಯ ಹಾಗೂ ಕಾಲೇಜಿನ ಸೌಲಭ್ಯಗಳನ್ನು ಸರಿಯಾಗಿ ಬಳಸಿಕೊಂಡು ಜೀವನದಲ್ಲಿ ಉನ್ನತ ಮಟ್ಟಕ್ಕೆ ಬರಬೇಕು ಮಾಜಿ ಶಾಸಕ ಸುಭಾಷ್ ಆರ್ ಗುತ್ತೇದಾರ ಹೇಳಿದರು.
ಶನಿವಾರ ಆಳಂದ ಪಟ್ಟಣದ ಎಸ್‍ಆರ್‍ಜಿ ಫೌಂಡೇಶನನ ಅಡಿಯಲ್ಲಿ ನಡೆಯುತ್ತಿರುವ ವೆಂಕಯ್ಯ ಕೂಸಯ್ಯ ಗುತ್ತೇದಾರ ಕಲಾ, ವಿಜ್ಞಾನ ಮತ್ತು ವಾಣಿಜ್ಯ ಪದವಿ ಕಾಲೇಜಿನ ಬಿ.ಎ, ಬಿ.ಎಸ್ಸಿ ಮತ್ತು ಬಿ.ಕಾಮ್ ಅಂತಿಮ ವರ್ಷದ ವಿದ್ಯಾರ್ಥಿಗಳ ಬೀಳ್ಕೂಡುಗೆ ಹಾಗೂ ಪ್ರಥಮ ವರ್ಷದ ವಿದ್ಯಾರ್ಥಿಗಳ ಸ್ವಾಗತ ಸಮಾರಂಭದ ಅಧ್ಯಕ್ಷತೆ ವಹಿಸಿ ಮಾತನಾಡಿದರು.
ಜೀವನದಲ್ಲಿ ಪ್ರಶ್ನಿಸುವ ಮನೋಭಾವನೆಯೊಂದಿಗೆ ತಾಳ್ಮೆಯನ್ನು ಬೆಳೆಸಿಕೊಂಡಾಗ ಜ್ಞಾನ ವೃದ್ಧಿಯಾಗುತ್ತದೆ. ವಿಷಯವನ್ನು ಆಳವಾಗಿ ವಿಶ್ಲೇಷಿಸುವ ಮೂಲಕ ಸರಿ ತಪ್ಪಿನ ಅರಿವಾಗುತ್ತದೆ. ಆದ್ದರಿಂದ ಪ್ರತಿಯೊಬ್ಬರೂ ಪ್ರಶ್ನಿಸುವ ಪ್ರವೃತ್ತಿಯನ್ನು ಬೆಳೆಸಿಕೊಳ್ಳಬೇಕು. ಪ್ರಶ್ನೆಯಿಂದ ಉತ್ತರ, ಉತ್ತರದಿಂದ ಪ್ರಶ್ನೆ ಹೀಗೆ ವಿದ್ಯೆ ಸಂಚರಿಸುತ್ತಿರಬೇಕು ಎಂದು
ಮೊದಲಿಗಿಂತಲು ಇಂದು ವಿದ್ಯಾರ್ಥಿಗಳು ಹೆಚ್ಚು ಶ್ರಮವಹಿಸಿ ಅಭ್ಯಾಸದಲ್ಲಿ ತೊಡಗುತ್ತಿದ್ದಾರೆ ಇದರಿಂದಾಗಿ ಅಂಕಗಳ ಗಳಿಕೆಯಲ್ಲಿ ಪೈಪೆÇೀಟಿ ಏರ್ಪಟ್ಟಿದೆ ಇನ್ನೂ ಇತ್ತಿಚೀನ ದಿನಮಾನಗಳಲ್ಲಿ ಶಿಕ್ಷಣದ ಜೊತೆಗೆ ಹಣದ ಪೈಪೆÇೀಟಿ ಆರಂಭವಾಗಿದೆ ಎಂದರು.
ಸಾಮಾಜಿಕ ಭವಿಷ್ಯವನ್ನು ರೂಪಿಸಿಕೊಳ್ಳಲು ಸಹಕಾರಿಯಾಗುವ ಮತ್ತು ಆರ್ಥಿಕ ಸದೃಡತೆಗಾಗಿ ಅಥವಾ ಹಣಕಾಸಿನ ನೀರಿಕ್ಷೆಯೊಂದಿಗೆ ಪದವಿ ಗಳಿಸಲು ಹೋರಾಟ ನಡೆಸುವುದು ಸೂಕ್ತವಲ್ಲ ಪಾಲಕರ ಮನಸ್ಥಿತಿಗಳನ್ನು ಮತ್ತು ಉಪನ್ಯಾಸಕರ ಗೌರವವನ್ನು ಹೆಚ್ಚಿಸಲು ವಿದ್ಯಾರ್ಥಿಗಳು ಶ್ರಮಿಸಬೇಕು ಎಂದು ಕರೆ ನೀಡಿದರು.
ಉದ್ಘಾಟಕರಾಗಿ ಮಾತನಾಡಿದ ಶರಣಬಸವೇಶ್ವರ ಪಿಯು ವಾಣಿಜ್ಯ ಕಾಲೇಜಿನ ಪ್ರಾಚಾರ್ಯ ದಯನಾಂದ ಹೊಡಲ, ಶಿಕ್ಷಣ ಸಂಸ್ಥೆಗಳು ಶಾಲೆಯಲ್ಲಿನ ಮಕ್ಕಳಿಗೆ ಸಂಸ್ಕøತಿ ಸಂಸ್ಕಾರ ಪ್ರಾಪಂಚಿಕ ಜ್ಞಾನ ಹಾಗೂ ಕೌಶಲ್ಯಗಳನ್ನು ರೂಡಿಸಿಕೊಳ್ಳುವ ಮೂಲಕ ದೇಶವನ್ನು ಕಟ್ಟುವ ಕೆಲಸದಲ್ಲಿ ಸಹಕಾರಿಯಾದಲ್ಲಿ ಮಾತ್ರ ವಿದ್ಯಾರ್ಥಿಗಳು ಪಡೆದಂತಹ ಪದವಿಗಳಿಗೆ ಇನ್ನೂ ಹೆಚ್ಚಿನ ಮೆರಗು ಸಿಗಲಿದೆ ಈ ನಿಟ್ಟಿನಲ್ಲಿ ಶಿಕ್ಷಣದ ನಂತರ ಒಳ್ಳೆಯ ಅವಕಾಶಗಳಿದ್ದು ಅವುಗಳನ್ನು ಪಡೆದುಕೊಂಡು ಸುಂದರ ಬದುಕು ಕಟ್ಟಿಕೊಳ್ಳುವಂತೆ ಕರೆ ನೀಡಿದರು
ವಿದ್ಯಾರ್ಥಿಗಳಿಗೆ ಅವರ ಉಜ್ವಲ ಭವಿಷ್ಯಕ್ಕೆ ಶುಭ ಹಾರೈಸುತ್ತಾ, ಜ್ಞಾನ ಸಂಪಾದನೆಗೆ ಶ್ರಮಿಸಿದಷ್ಟೂ ವ್ಯಕ್ತಿತ್ವ ವಿಕಸನಗೊಳ್ಳುತ್ತದೆ. ಉಜ್ವಲ ಭವಿಷ್ಯ ಹೊಂದಲು ನಾಂದಿಯಾಗುತ್ತದೆ. ಇದರಿಂದ ಇತರರ ಬದುಕು, ಬವಣೆಗೆ ಸ್ಪಂದಿಸುವ ಮನೋಭಾವ ಬೆಳೆಸಿಕೊಳ್ಳಿ ಎಂದು ಹೇಳಿದರು.
ಕಾಲೇಜಿನ ಪ್ರಾಚಾರ್ಯ ಕಲ್ಯಾಣಿ ಸಾವಳಗಿ ಪ್ರಾಸ್ತಾವಿಕವಾಗಿ ಮಾತನಾಡಿ, ವಿದ್ಯಾರ್ಥಿಗಳು ತಮಗೆ ಸಿಗುವ ಅವಕಾಶಗಳನ್ನು ಶ್ರದ್ಧೆಯಿಂದ ಬಳಸಿಕೊಂಡು ಜೀವನದಲ್ಲಿ ಉನ್ನತ ಮಟ್ಟಕ್ಕೇರಲಿ ಮತ್ತು ಸಮಾಜ ಮತ್ತು ರಾಷ್ಟ್ರಕ್ಕೆ ಉತ್ತಮ ಕೊಡುಗೆಯಾಗಿ ಹೊರಹೊಮ್ಮಲಿ ಎಂದು ಹಾರೈಸಿದರು.
ಅರಿವಿನ ಮೂಲಕ ತಾವು ಸಂಪಾದಿಸಿದ ಜ್ಞಾನವನ್ನು ಸಮಾಜದ ಒಳಿತಿಗೆ ಬಳಕೆ ಮಾಡಬೇಕು. ಇತ್ತೀಚಿನ ಯುವಸಮೂಹ ಕೀಳರಿಮೆ, ಜಿಗುಪ್ಸೆ ಅತಿಯಾಗಿ ಹೊಂದಿರುವುದರಿಂದ ಜೀವನದಲ್ಲಿ ಫಲ ಕಾಣಲು ಸಾಧ್ಯವಾಗುತ್ತಿಲ್ಲ ಅದಕ್ಕಾಗಿ ಸಕಾರಾತ್ಮಕ ಚಿಂತನೆ, ಸದ್ವಿಚಾರ, ಸದ್ಗುಣಗಳನ್ನು ವಿದ್ಯಾರ್ಥಿಗಳು ಅಳವಡಿಸಿಕೊಳ್ಳಬೇಕು ಎಂದು ವಿದ್ಯಾರ್ಥಿ ಸಮೂಹಕ್ಕೆ ಕರೆ ನೀಡಿದರು.
ಯಶಸ್ಸು ಪಡೆಯಲು ಅಡ್ಡದಾರಿಯಿಲ್ಲ ಕೇವಲ ಪರಿಶ್ರಮವೊಂದೇ ಅದಕ್ಕಿರುವ ಮಾರ್ಗವಾಗಿದೆ ಅದನ್ನು ಸಾಧಿಸಲು ನಿರಂತರ ಅಧ್ಯಯನ ಮಾಡುವುದು ಅಗತ್ಯವಾಗಿದೆ ಈ ನಿಟ್ಟಿನಲ್ಲಿ ಲಭ್ಯವಿರುವ ಸಂಪನ್ಮೂಲಗಳನ್ನು ಬಳಸಿಕೊಂಡು ಜೀವನದಲ್ಲಿ ಮುಂದೆ ಬರಲು ಶ್ರಮಿಸಬೇಕು ಎಂದು ಹೇಳಿದರು.
ಆಡಳಿತಾಧಿಕಾರಿ ಡಾ. ರಾಘವೇಂದ್ರ ಚಿಂಚನಸೂರ ಮಾತನಾಡಿ, ಜಗತ್ತಿನ ಅನೇಕ ದಾರ್ಶನಿಕರು ತೀರಾ ಬಡತನ ಕುಟುಂಬದಲ್ಲಿ ಜನಿಸಿ ತಮ್ಮ ಅಗಾಧವಾದ ಜ್ಞಾನ ಪ್ರತಿಭೆಯಿಂದ ಇತಿಹಾಸದಲ್ಲಿ ಅಜರಾಮರರಾಗಿದ್ದಾರೆ ಈ ನಿಟ್ಟಿನಲ್ಲಿ ಇಂದಿನ ಯುವಸಮೂಹ ಚಿಂತನೆ ಮಾಡಬೇಕಾದ ಅಗತ್ಯವಿದೆ ಎಂದು ಹೇಳಿದರು.
ನಮ್ಮ ದಿನನಿತ್ಯದ ಬದುಕಿನ ಅವಶ್ಯಕತೆಗಳನ್ನು ಪೂರೈಸುಕೊಳ್ಳುವುದರ ಜೊತೆಗೆ ಸಾಮಾಜಿಕ ಕಳಕಳಿಯು ಹೊಂದಿರಬೇಕು ಅದಕ್ಕಾಗಿ ಉತ್ತಮವಾದ ಪುಸ್ತಕಗಳನ್ನು ಓದುವ ಹವ್ಯಾಸ ರೂಢಿಸಿಕೊಳ್ಳಬೇಕು ಎಂದು ಸಲಹೆ ನೀಡಿದರು.
ಮಹಾದೇವ ವಡಗಾಂವ ಮಾತನಾಡಿ, ಬದಲಾದ ಕಾಲಘಟ್ಟದಲ್ಲಿ ಆದ್ಯತೆಗಳು ಬದಲಾಗಿವೆ ಅದಕ್ಕಾಗಿ ವಿದ್ಯಾರ್ಥಿಗಳು ಈಗಿನ ಸನ್ನಿವೇಶಕ್ಕೆ ತಕ್ಕಂತೆ ಎದುರಾಗುವ ಸಮಸ್ಯೆಗಳನ್ನು ಪರಿಹರಿಸಿಕೊಳ್ಳಲು ಮಾನಸಿಕವಾಗಿ ಸಿದ್ಧರಾಗಿರಬೇಕು ಎಂದರು.
ಕಾರ್ಯಕ್ರಮದ ವೇದಿಕೆಯ ಮೇಲೆ ರಾಜಕುಮಾರ ಚಿಚಕೋಟೆ, ವಿದ್ಯಾರ್ಥಿ ಪ್ರತಿನಿಧಿ ಪ್ರತಾಪ ಕೋರೆ ಇದ್ದರು.

ಉಪನ್ಯಾಸಕ ಸಂತೋಷಕುಮಾರ ಸಲಗರೆ ಸ್ವಾಗತಿಸಿದರೆ, ಪ್ರಕಾಶ ತಾವರಗೇರಾ ವಂದಿಸಿದರು. ದಾನಮ್ಮಾ ಪಾಟೀಲ ನಿರೂಪಿಸಿದರು.

ಸಂಸ್ಥೆಯಲ್ಲಿ ವಿದ್ಯಾಭ್ಯಾಸ ಮಾಡುತ್ತಿರುವ ವಿದ್ಯಾರ್ಥಿಗಳು ಶೈಕ್ಷಣಿಕವಾಗಿ ಸಾಧನೆ ಮಾಡಲು ಸಂಸ್ಥೆಯ ವತಿಯಿಂದ ಪ್ರೋತ್ಸಾಹಧನ, ನಗದು ಪುರಸ್ಕಾರ, ಮೇಂಟರ್‍ಶಿಪ್ ನೀಡಲಾಗುತ್ತಿದೆ ಇದರಿಂದ ವಿದ್ಯಾರ್ಥಿಗಳು ಜಿಲ್ಲಾ ಮಟ್ಟ, ರಾಜ್ಯ ಮಟ್ಟದಲ್ಲಿ ಸಾಧನೆ ಮಾಡುತ್ತಿದ್ದಾರೆ.- ಸುಭಾಷ್ ಆರ್ ಗುತ್ತೇದಾರ, ಸಂಸ್ಥೆಯ ಅಧ್ಯಕ್ಷರು, ಮಾಜಿ ಶಾಸಕರು.

ಮುಂದಿನ ದಿನಗಳಲ್ಲಿ ಈ ಭಾಗದಲ್ಲಿ ಸಂಸ್ಥೆಯ ವತಿಯಿಂದ ಸ್ನಾತಕೋತ್ತರ ವಿಷಯಗಳು, ತಾಂತ್ರಿಕ ಶಿಕ್ಷಣದ ಕೋರ್ಸಗಳು, ಪ್ಯಾರಾ ಮೆಡಿಕಲ್, ನರ್ಸಿಂಗ್, ಕೌಶಲ್ಯ ಆಧಾರಿತ ಶಿಕ್ಷಣ ಕೇಂದ್ರಗಳು, ತರಬೇತಿ ಕೇಂದ್ರಗಳು ಆರಂಭಿಸುವ ಯೋಜನೆ ಹೊಂದಿದ್ದೇವೆ ಈ ನಿಟ್ಟಿನಲ್ಲಿ ಈಗಾಗಲೇ ಕಾರ್ಯತತ್ಪರರಾಗಿದ್ದೇವೆ.- ಡಾ. ರಾಘವೇಂದ್ರ ಚಿಂಚನಸೂರ.