ಆಳಂದ: ಸಿಎಂ, ಡಿಸಿಎಂ ರಾಜೀನಾಮೆಗೆ ಆಗ್ರಹಿಸಿ ಪ್ರತಿಭಟನೆ

ಕಲಬುರಗಿ:ಅ.17:ಅಧಿಕಾರಿಗಳಿಗೇ ರೇಟ್ ಫಿಕ್ಸ್ ಮಾಡಿದ ಸರಕಾರ ರಾಜ್ಯದಲ್ಲಿ ಅಧಿಕಾರದಲ್ಲಿದ್ದು ಅಧಿಕಾರಿಗಳಿಂದ ಭ್ರμÁ್ಟಚಾರ ಆರಂಭಿಸಿದ ಈ ಸರಕಾರದ ಕಾರ್ಯವು ಕಲಾವಿದರನ್ನೂ ಬಿಟ್ಟಿಲ್ಲ ಹೀಗಾಗಿ ಬೃಹ್ಮಾಂಡ ಭೃಷ್ಟಾಚಾರದಲ್ಲಿ ತೊಡಗಿರುವ ಸಿಎಂ, ಡಿಸಿಎಂ ರಾಜೀನಾಮೆ ನೀಡಬೇಕು ಎಂದು ಆಳಂದ ಮಾಜಿ ಶಾಸಕ ಸುಭಾಷ್ ಗುತ್ತೇದಾರ ಒತ್ತಾಯಿಸಿದರು.
ಮಂಗಳವಾರ ಆಳಂದ ಪಟ್ಟಣದ ಬಸ್ ನಿಲ್ದಾಣದ ಎದುರು ಆಳಂದ ಮಂಡಲ ಬಿಜೆಪಿ ವತಿಯಿಂದ ಹಮ್ಮಿಕೊಂಡಿದ್ದ ಪ್ರತಿಭಟನೆಯಲ್ಲಿ ಭಾಗವಹಿಸಿ ಮಾತನಾಡಿದ ಅವರು, ತಮ್ಮಲ್ಲಿ ಲಂಚ ಕೇಳಿದ್ದಾಗಿ ಮೈಸೂರು ದಸರಾದಲ್ಲಿ ಭಾಗವಹಿಸಬೇಕಾದ ಕಲಾವಿದರೇ ಆರೋಪ ಮಾಡಿದ್ದಾರೆ. ಹಿಂದೆ ಎಟಿಎಂ ಸರಕಾರ ಬರಲಿದೆ ಎಂದಾಗ ಸಾಕ್ಷಿ ಕೊಡಿ ಎಂದಿದ್ದರು ಇವತ್ತು ಸಾಕ್ಷಿ, ಆಧಾರಗಳನ್ನು ಸಿಎಂ ಸಿದ್ರಾಮಣ್ಣ, ಡಿಸಿಎಂ ಡಿ.ಕೆ.ಶಿವಕುಮಾರ್ ಇಟ್ಟಿದ್ದಾರೆ ಎಂದು ಹೇಳಿದರು.
ಐ.ಟಿ.ದಾಳಿ ಆದಾಗ ಗುತ್ತಿಗೆದಾರ, ಬಿಲ್ಡರ್‍ಗಳ ಮನೆಯಲ್ಲಿ 40 ಕೋಟಿ, 50 ಕೋಟಿ ಹಣ ಸಿಗುತ್ತಿದೆ. 600 ಕೋಟಿ ಹಣ ಗುತ್ತಿಗೆದಾರರಿಗೆ ಬಿಡುಗಡೆ ಮಾಡಿದ ಎರಡೇ ದಿನಗಳಲ್ಲಿ 45 ಕೋಟಿ ಒಬ್ಬ ಗುತ್ತಿಗೆದಾರನ ಮನೆಯಲ್ಲಿ ಸಿಕ್ಕಿದೆ. ಇದಕ್ಕೂ ಕಾಂಗ್ರೆಸ್ಸಿಗೂ ಸಂಬಂಧ ಇದೆ ಎಂಬುದು ಸ್ಪಷ್ಟವಾಗಿದೆ. ಈ ಲೂಟಿ ಸರಕಾರದ ಮುಖ್ಯಮಂತ್ರಿ, ಉಪ ಮುಖ್ಯಮಂತ್ರಿಗಳು ನೈತಿಕ ಹೊಣೆ ಹೊತ್ತು ರಾಜೀನಾಮೆ ಕೊಡಬೇಕು ಎಂದು ಅವರು ಆಗ್ರಹಿಸಿದರು.
ಹಿರಿಯ ಮುಖಂಡ ವೀರಣ್ಣಾ ಮಂಗಾಣೆ ಮಾತನಾಡಿ, ರಾಜ್ಯದ್ದು ಎಟಿಎಂ ಸರಕಾರ, ಲೂಟಿ ಸರಕಾರ. ಈ ರಾಜ್ಯದಲ್ಲಿ ಜನರ ಹಣವನ್ನು ಲೂಟಿ ಮಾಡಿ ಪಂಚರಾಜ್ಯಗಳ ಚುನಾವಣೆಗೆ ಅದನ್ನು ಕಳುಹಿಸುತ್ತಿದ್ದಾರೆ. ಬೇರೆ ರಾಜ್ಯಗಳ ಚುನಾವಣೆಗೆ ಕರ್ನಾಟಕವು ಎಟಿಎಂ ಆಗಿದೆ ಎಂದು ಟೀಕಿಸಿದರು. ನಿನ್ನೆ ಇನ್ನೊಬ್ಬರ ಮನೆಯಲ್ಲಿ ಹಣ ಸಿಕ್ಕಿದ್ದು, ಇದೆಲ್ಲವೂ ಲೂಟಿ ಹಣ ಎಂದರಲ್ಲದೆ, ದೂರು ಕೊಡುವ ಅಧಿಕಾರಿಗಳನ್ನು ಬಂಧಿಸಲಾಗುತ್ತಿದೆ ಎಂದು ಆಪಾದಿಸಿದರು.
ರೈತರಿಗೆ ಸಮರ್ಪಕ ವಿದ್ಯುತ್ ನೀಡಬೇಕು. ಬರಪೀಡಿತ ಪ್ರದೇಶದ ರೈತರಿಗೆ ಕೂಡಲೇ ಪರಿಹಾರ ಹಣ ಬಿಡುಗಡೆ ಮಾಡುವುದು ಸೇರಿ ವಿವಿಧ ಬೇಡಿಕೆ ಈಡೇರಿಸಲು ಆಗ್ರಹಿಸಿದರು.
ರಾಜ್ಯ ಕಾಂಗ್ರೆಸ್ ಸರ್ಕಾರ ಭ್ರμÁ್ಟಚಾರ ಹಾಗೂ ರೈತ ವಿರೋಧಿ ಆಡಳಿತ ನಡೆಸುತ್ತಿರುವುದು ಖಂಡನೀಯ ಎಂದು ಸಿಎಂ ಸಿದ್ದರಾಮಯ್ಯ ವಿರುದ್ಧ ಘೋಷಣೆ ಕೂಗಿ ಆಕ್ರೋಶ ವ್ಯಕ್ತಪಡಿಸಿದರು.
ಆಳಂದ ಮಂಡಲ ಅಧ್ಯಕ್ಷ ಆನಂದರಾವ ಪಾಟೀಲ ಮಾತನಾಡಿ, ಮುಖ್ಯಮಂತ್ರಿ ಸಿದ್ದರಾಮಯ್ಯ ನೇತೃತ್ವದ ಕಾಂಗ್ರೆಸ್ ಸರ್ಕಾರ ಭ್ರμÁ್ಟಚಾರದ ಆಡಳಿತದಲ್ಲಿ ತೊಡಗಿದೆ. ರಾಜ್ಯದಲ್ಲಿ ಬರಗಾಲ ಪರಿಸ್ಥಿತಿ ನಿರ್ಮಾಣವಾಗಿದ್ದರೂ ರಾಜ್ಯ ಸರ್ಕಾರ ಈವರೆಗೂ ರೈತರ ನೆರವಿಗೆ ಧಾವಿಸಿಲ್ಲ ಎಂದು ಆಕ್ರೋಶ ವ್ಯಕ್ತಪಡಿಸಿದರು.
ತಾಲೂಕನ್ನು ಬರಪೀಡಿತ ಪ್ರದೇಶವೆಂದು ರಾಜ್ಯ ಸರ್ಕಾರವೇ ಘೋಷಣೆ ಮಾಡಿದ್ದರೂ ಈವರೆಗೂ ರೈತರ ಖಾತೆಗೆ ಪರಿಹಾರದ ಹಣ ಹಾಕಿಲ್ಲ. ಅಧಿಕಾರಿಗಳು ಕೂಡ ರೈತರ ಪರಿಸ್ಥಿತಿ ಅವಲೋಕನ ಮಾಡಿಲ್ಲ. ವಿದ್ಯುತ್ ಸಮಸ್ಯೆಯಿಂದ ರೈತರು ಬೆಳೆಗಳಿಗೆ ನೀರು ಹಾಯಿಸಲಾಗದೆ ಪರದಾಡುತ್ತಿದ್ದಾರೆ. ಚಿತ್ತಾಪೂರ ತಾಲೂಕಿನ ಹಲಕರ್ಟಿ ಗ್ರಾಮದಲ್ಲಿ ಬಸವಣ್ಣನವರ ಭಾವಚಿತ್ರ ವಿರೂಪಗೊಳಿಸಿದವರನ್ನು ಬಂಧಿಸಿ, ಶಿಕ್ಷೆಗೆ ಗುರಿಪಡಿಸಬೇಕು ಎಂದು ಒತ್ತಾಯಿಸಿದರು.

ಈ ಹಿಂದೆ ಬಿ.ಎಸ್. ಯಡಿಯೂರಪ್ಪ ಹಾಗೂ ಬಸವರಾಜ ಬೊಮ್ಮಾಯಿ ನೇತೃತ್ವದ ಬಿಜೆಪಿ ಸರ್ಕಾರ ಆಡಳಿತದಲ್ಲಿದ್ದಾಗ ಇಂತಹ ಪರಿಸ್ಥಿತಿ ನಿರ್ಮಾಣವಾದ ಕೇವಲ 24 ಗಂಟೆಗಳಲ್ಲಿ ರೈತರ ಖಾತೆಗೆ ಹಣ ಜಮಾ ಮಾಡಲಾಗುತ್ತಿತ್ತು ಹಾಗೂ ರೈತರಿಗೆ ನಿರಂತರವಾಗಿ ಏಳು ತಾಸು ವಿದ್ಯುತ್ ಪೂರೈಕೆ ಮಾಡಲಾಗುತ್ತಿತ್ತು. ಆದರೆ, ಕಾಂಗ್ರೆಸ್ ಸರ್ಕಾರ ರೈತರಿಗೆ ಸಮರ್ಪಕವಾಗಿ ವಿದ್ಯುತ್ ಪೂರೈಕೆ ಮಾಡುತ್ತಿಲ್ಲ ಎಂದು ಆರೋಪಿಸಿದರು. ರಾಜ್ಯ ಸರ್ಕಾರ ಕೂಡಲೇ ಕ್ರಮ ಕೈಗೊಳ್ಳದಿದ್ದರೇ ಮುಂದಿನ ದಿನಗಳಲ್ಲಿ ತೀವ್ರತರವಾದ ಹೋರಾಟ ನಡೆಸಲಾಗುವುದು ಎಂದು ಎಚ್ಚರಿಸಿದರು.
ತಹಸೀಲದಾರ ಯಲ್ಲಪ್ಪ ಸುಭೇದಾರ ಮೂಲಕ ರಾಜ್ಯಪಾಲರಿಗೆ ಮನವಿ ಪತ್ರ ಸಲ್ಲಿಸಲಾಯಿತು.
ಪ್ರತಿಭಟನೆಯಲ್ಲಿ ವಿಭಾಗೀಯ ಸಂಘಟನಾ ಕಾರ್ಯದರ್ಶಿ ಅರುಣ ಬಿನ್ನಾಡಿ, ಜಿ.ಪಂ ಮಾಜಿ ಉಪಾಧ್ಯಕ್ಷ ಹರ್ಷಾನಂದ ಗುತ್ತೇದಾರ, ಮುಖಂಡರಾದ ಅಣ್ಣಾರಾವ ಪಾಟೀಲ, ಶ್ರೀಶೈಲ ಖಜೂರಿ, ಸೋಮಶೇಖರ ಹತ್ತರಕಿ, ಪ್ರಭಾಕರ ಘನಾತೆ, ಸಿದ್ದು ಪೂಜಾರಿ, ಶಿವಪುತ್ರ ನಡಗೇರಿ, ವೀರಭಧ್ರ ಖೂನೆ, ಅಶೋಕ ಹೊಸಮನೆ, ಶಿವಪ್ಪ ಘಂಟೆ, ಶರಣು ಮುರುಮೆ, ಶಿವಪ್ರಕಾಶ ಹೀರಾ, ಧರೇಪ್ಪ ಜಕಾಪೂರೆ, ಸೀತಾರಾಮ ಜಮಾದಾರ, ಮಲ್ಲಿನಾಥ ಘಂಟೆ, ಬಸವರಾಜ ಸಾಣಕ, ಗುಂಡಪ್ಪ ಪೂಜಾರಿ, ಗುರು ಲಾವಣಿ, ಶರಣಗೌಡ ಪಾಟೀಲ ದೇವಂತಗಿ, ಪವನ ಕಲಶೆಟ್ಟಿ, ಲಕ್ಷ್ಮೀಪುತ್ರ ಹೇಮಾಜಿ, ನಾಗವೇಣಿ ಪಾಟೀಲ, ಸಚೀನ ಬಿರಾದಾರ ಮಂಡಲ ಪ್ರ. ಕಾ. ಶರಣು ಕುಮಸಿ, ಶಿವಾನಂದ ಪಾಟೀಲ ಸೇರಿದಂತೆ ನೂರಾರು ಕಾರ್ಯಕರ್ತರು ಭಾಗವಹಿಸಿದ್ದರು.