ಆಳ್ವಾಸ್ನಿಂದ 10 ಕೋಟಿಗೂ ಮಿಕ್ಕಿ ಪಿಯುಸಿ ವಿದ್ಯಾರ್ಥಿ ವೇತನ ಘೋಷಣೆ

ಸಂಜೆವಾಣಿ ವಾರ್ತೆ,
ವಿಜಯಪುರ,ಮಾ.24:ಪ್ರಸಕ್ತ ವರ್ಷ ಆಳ್ವಾಸ್ ಶಿಕ್ಷಣ ಪ್ರತಿಷ್ಠಾನವು ಪ್ರತಿಭಾವಂತ ಪಿಯುಸಿ ವಿದ್ಯಾರ್ಥಿಗಳ ಉತ್ತೇಜನಕ್ಕಾಗಿ ಎರಡು ವರ್ಷಕ್ಕೆ 10 ಕೋಟಿಗೂ ಅಧಿಕ ಮೌಲ್ಯದ ಶೈಕ್ಷಣಿಕ ವಿದ್ಯಾರ್ಥಿ ವೇತನ ಘೋಷಿಸಿದೆ ಎಂದು ಆಳ್ವಾಸ್ ಶಿಕ್ಷಣ ಸಂಸ್ಥೆಯ ಪತ್ರಿಕೋದ್ಯಮ ವಿಭಾಗದ ಮುಖ್ಯಸ್ಥ ಪ್ರಸಾದ ಶೆಟ್ಟಿ ಅವರು ತಿಳಿಸಿದರು.
ಶನಿವಾರ ನಗರದಲ್ಲಿ ಪತ್ರಿಕಾಗೋಷ್ಠಿಯಲ್ಲಿ ಮಾತನಾಡಿದ ಅವರು, ಮಾ.31 ಹಾಗೂ ಏ.14ರಂದು ಆಳ್ವಾಸ್ ಶೈಕ್ಷಣಿಕ ವಿದ್ಯಾರ್ಥಿ ವೇತನ ಪ್ರವೇಶ ಪರೀಕ್ಷೆಗಳು ನಡೆಯಲಿವೆ. 10ನೇ ತರಗತಿಯಲ್ಲಿ ಸಿಬಿಎಸ್ಸಿ, ಐಸಿಎಸ್ ಹಾಗೂ ರಾಜ್ಯ ಪಠ್ಯಕ್ರಮ ಪರೀಕ್ಷೆ ಬರೆದ ವಿದ್ಯಾರ್ಥಿಗಳು ಈ ಶೈಕ್ಷಣಿಕ ವಿದ್ಯಾರ್ಥಿ ವೇತನ ಪರೀಕ್ಷೆಯನ್ನು ಬರೆಯಬಹುದು ಎಂದು ಅವರು ಹೇಳಿದರು.
ವಿದ್ಯಾರ್ಥಿಗಳ ಪ್ರವೇಶ ಪರೀಕ್ಷೆಯ ಅಂಕಗಳನ್ನು ಪರಿಗಣಿಸಿ ವಿದ್ಯಾರ್ಥಿ ವೇತನಕ್ಕೆ ಆಯ್ಕೆ ಮಾಡಲಾಗುವುದು. ವಿದ್ಯಾರ್ಥಿ ವೇತನಕ್ಕೆ ಅರ್ಹತೆ ಪಡೆದ ವಿದ್ಯಾರ್ಥಿಗಳು ಆಳ್ವಾಸ್ ಪದವಿ ಪೂರ್ವ ಕಾಲೇಜಿನಲ್ಲಿ ವಿಜ್ಞಾನ, ವಾಣಿಜ್ಯ ಅಥವಾ ಕಲಾ ವಿಭಾಗದಲ್ಲಿ ಪದವಿ ಪೂರ್ವ ಶಿಕ್ಷಣ ಪಡೆಯಲು ಅರ್ಹರಾಗಲಿದ್ದಾರೆ ಎಂದರು.
ಗಣಿತ, ವಿಜ್ಞಾನ ಹಾಗೂ ಸಾಮಾನ್ಯ ಸಾಮಥ್ರ್ಯ ಕುರಿತು 100 ನಿಮಿಷಗಳ ಪರೀಕ್ಷೆಯು ಮಾ. 31ರಂದು ಸಿಬಿಎಸ್ಸಿ, ಐಸಿಎಸ್ ವಿದ್ಯಾರ್ಥಿಗಳಿಗೆ ನಡೆಸಲಾಗುವುದು. ಏ,14ರಂದು ರಾಜ್ಯ ಪಠ್ಯಕ್ರಮದ ವಿದ್ಯಾರ್ಥಿಗಳಿಗೆ ಮೂಡುಬಿದಿರೆಯ ವಿದ್ಯಾಗಿರಿ ಸುಂದರಿ ಆಳ್ವ ಆವರಣದಲ್ಲಿನ ಆಳ್ವಾಸ್ ಪದವಿ ಪೂರ್ವ ಕಾಲೇಜಿನಲ್ಲಿ ನಡೆಯಲಿದ್ದು, ಇಂಗ್ಲಿಷ್ ಮಾಧ್ಯಮದಲ್ಲಿ ಪರೀಕ್ಷೆ ಪತ್ರಿಕೆ ಇರಲಿದೆ ಎಂದು ತಿಳಿಸಿದರು.
ಸಿಬಿಎಸ್ಸಿ ಮತ್ತು ಐಸಿಎಸ್ ವಿದ್ಯಾರ್ಥಿಗಳಿಗೆ ಪ್ರವೇಶ ಪರೀಕ್ಷೆಗೆ ಅರ್ಜಿ ಸಲ್ಲಿಸಲು ಮಾ. 28 ಕೊನೆಯ ದಿನವಾಗಿದೆ. ರಾಜ್ಯ ಪಠ್ಯಕ್ರಮದ ವಿದ್ಯಾರ್ಥಿಗಳು ಏ.10ರವರೆಗೆ ಅರ್ಜಿಯನ್ನು ಸಲ್ಲಿಸಬಹುದು ಎಂದು ಹೇಳಿದರು.
ವಿದ್ಯಾರ್ಥಿಗಳು ವೆಬ್ಸೈಟ್: hಣಣಠಿs://sಛಿhoಟಚಿಡಿshiಠಿ.ಚಿಟvಚಿs.oಡಿg/ಠಿuಛಿ/ಟogiಟಿ.ಠಿhಠಿ ಮೂಲಕ ಅರ್ಜಿಗಳನ್ನು ಸಲ್ಲಿಸಬಹುದು. ಹೆಚ್ಚಿನ ಮಾಹಿತಿಗಾಗಿ ಮೊ.8884477588,6366377827,6366377823 ಇಲ್ಲಿಗೆ ಸಂಪರ್ಕಿಸಬಹುದು ಎಂದು ಅವರು ತಿಳಿಸಿದ್ದಾರೆ.
ಪದ್ಮರಾಜ್ ರೈ, ಸಚಿನ ಅವರು ಪತ್ರಿಕಾಗೋಷ್ಠಿಯಲ್ಲಿ ಇದ್ದರು.