ಆವರಗೆರೆಯಲ್ಲಿ ನಾಳೆ ಪುನೀತ್ ರಾಜಕುಮಾರ್ ಗೆ ಶ್ರದ್ಧಾಂಜಲಿ


ದಾವಣಗೆರೆ.ನ.೨೩-ನಗರಕ್ಕೆ ಸಮೀಪದ ಆವರಗೆರೆಯಲ್ಲಿ ಪುನೀತ್ ರಾಜಕುಮಾರ್ ರವರಿಗೆ ಶ್ರದ್ಧಾಂಜಲಿ ಕಾರ್ಯಕ್ರಮ ಹಮ್ಮಿಕೊಳ್ಳಲಾಗಿದೆ.     ಕನ್ನಡದ ಖ್ಯಾತ ಚಲನಚಿತ್ರ ನಾಯಕ ನಟ, ಸದ್ದಿಲ್ಲದೆ ಸಮಾಜಸೇವೆ ಮಾಡುತ್ತಿದ್ದ ಪುನೀತ್ ರಾಜಕುಮಾರ್ ರವರ ಶ್ರದ್ಧಾಂಜಲಿ ಕಾರ್ಯಕ್ರಮವನ್ನು ಆವರಗೆರೆ ಯುವಕರು ಮತ್ತು ಗ್ರಾಮಸ್ಥರು ಸೇರಿ ಹಮ್ಮಿಕೊಂಡಿದ್ದಾರೆ.ನಾಳೆ  ಸಂಜೆ 5-30  ಕ್ಕೆ ಆವರಗೆರೆ ಆಂಜನೇಯ ದೇವಸ್ಥಾನದ ಆವರಣದಲ್ಲಿ ಆರಂಭವಾಗುವ ಕಾರ್ಯಕ್ರಮ  ಯುವಕರು ಮತ್ತು ಗ್ರಾಮಸ್ಥರ ಸಮ್ಮುಖದಲ್ಲಿ ಪುನೀತ್ ರಾಜಕುಮಾರ್ ರವರಿಗೆ ಶ್ರದ್ಧಾಂಜಲಿ ಸಲ್ಲಿಸಿ ನಂತರ ಅನ್ನಸಂತರ್ಪಣೆ ಮಾಡಲಾಗುವುದು ಎಂದು ಗ್ರಾಮಸ್ಥರು ತಿಳಿಸಿದ್ದಾರೆ.