ಆಶುಭಾಷಣ ಸ್ಪರ್ಧೆಯಲ್ಲಿ ಮಮತಾ ಹಿರೇಮನಿಗೆ ಪ್ರಥಮ ಸ್ಥಾನ

ಅಥಣಿ : ಸೆ.15:ಶಾಲಾ ಶಿಕ್ಷಣ ಹಾಗೂ ಸಾಕ್ಷರತಾ ಇಲಾಖೆ, ಜಿಲ್ಲಾ ಪಂಚಾಯತ, ಕ್ಷೇತ್ರ ಶಿಕ್ಷಣಾಧಿಕಾರಿಗಳು ಹಾಗೂ ಕ್ಷೇತ್ರ ಸಮನ್ವಯಾಧಿಕಾರಿಗಳ ಕಾರ್ಯಾಲಯ ಅಥಣಿ, ಸಮೂಹ ಸಂಪನ್ಮೂಲ ಕೇಂದ್ರ ಅಥಣಿ ನಗರ, ಇವುಗಳ ಆಶ್ರಯದಲ್ಲಿ ನಡೆದ ಕ್ಲಸ್ಟರ್ ಮಟ್ಟದ ಪ್ರತಿಭಾ ಕಾರಂಜಿ ಕಾರ್ಯಕ್ರಮದ ಆಶು ಭಾಷಣ ಸ್ಪರ್ಧೆಯಲ್ಲಿ ಅಥಣಿ ವಿದ್ಯಾವರ್ಧಕ ಸಂಸ್ಥೆಯ 10ನೇ ತರಗತಿ ವಿದ್ಯಾರ್ಥಿನಿ ಕು.ಮಮತಾ ಪ್ರಶಾಂತ ಹಿರೇಮನಿ ಪ್ರಥಮ ಸ್ಥಾನ ಪಡೆದು ತಾಲೂಕಾ ಮಟ್ಟಕ್ಕೆ ಆಯ್ಕೆಯಾಗಿದ್ದಾಳೆ. ಕ್ರೀಡೆಯ ಮಹತ್ವದ ಕುರಿತು ಭಾಷಣ ಮಾಡಿ ಪ್ರಥಮ ಸ್ಥಾನ ಪಡೆದುಕೊಂಡಿರುವ ಸದರಿ ವಿದ್ಯಾರ್ಥಿನಿಯನ್ನು ವಿದ್ಯಾ ವರ್ಧಕ ಶಿಕ್ಷಣ ಸಂಸ್ಥೆಯ ಆಡಳಿತ ಮಂಡಳಿಯ ಸದಸ್ಯರು ಹಾಗೂ ಶಿಕ್ಷಕರು ಅಭಿನಂದಿಸಿದ್ದಾರೆ